ಕೋಲಾರ | ಬೆಲೆ ಏರಿಕೆ ವಿರುದ್ದ ಸಿಪಿಐಎಂ ನಗರದಲ್ಲಿ ಪ್ರತಿಭಟನೆ

Date:

ಪೆಟ್ರೋಲ್ ಬೆಲೆ ಏರಿಕೆಯನ್ನು ತಕ್ಷಣ ವಾಪಸು ಪಡೆಯಲು ಮತ್ತು ನೀಟ್ ಪರೀಕ್ಷೆಯನ್ನು ಅಸಮರ್ಪಕವಾಗಿ ನಿರ್ವಹಿಸಿ ಪ್ರಶ್ನೆ ಪತ್ರಿಕೆಗಳ ಸೊರಿಕೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ವತಿಯಿಂದ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎನ್.ಎನ್.ಶ್ರೀರಾಮ್ ಮಾತನಾಡಿ, ಪಂಚ ರಾಜ್ಯಗಳ ಚುನಾವಣೆಯಲ್ಲಿ ಸಾಕಷ್ಟು ದಾಸ್ತಾನಿದೆ, ಜನ ಗಾಬರಿಗೊಳ್ಳಬೇಡಿ ಎಂದು ಯಾವ ಎಗ್ಗು ಸಿಗ್ಗಿಲ್ಲದೆ ಹೇಳುತ್ತಿದ್ದ ಮೋದಿ ಸರ್ಕಾರ, ಫಲಿತಾಂಶ ಬಂದೊಡನೆಯೇ ಎರಡು ಬಾರಿ ಪೆಟ್ರೋಲ್-ಡೀಸೆಲ್ ದರ ಏರಿಸಿ ಜನರ ಬೆನ್ನು ಮುರಿಯುವ ಕೆಲಸ ಮಾಡಿದೆ. ಇದಕ್ಕಿಂತ ದೊಡ್ಡ ಜನವಿರೋಧಿ ನಡೆ ಬೇರೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಅನೇಕ ದೇಶಗಳು ತಮ್ಮ ನಾಗರಿಕರ ಹಿತರಕ್ಷಣೆಗಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಯಂತ್ರಣ ಕ್ರಮಗಳನ್ನು ಕೈಗೊಂಡಿವೆ. ಆದರೆ ಭಾರತದಲ್ಲಿ ಅಂತಹ ಕ್ರಮ ಕೈಗೊಳ್ಳದೆ, ದುಡಿಯುವ ಜನರ ಮತ್ತು ಜನಸಾಮಾನ್ಯರ ಬದುಕಿನ ಮೇಲೆ ಹೊರೆ ಹೆಚ್ಚಿಸುವುದೇ ಕೇಂದ್ರದ ಬಿ.ಜೆ.ಪಿ ನೇತೃತ್ವದ ಮೋದಿ ಸರ್ಕಾರದ ಉದ್ದೇಶವಾಗಿದೆ. ಜನಹಿತಕ್ಕಿಂತ ಬಿಜೆಪಿ ಗೆ ಮತ್ತೆ ಮತ್ತೆ ಚುನಾವಣೆ ಗೆಲ್ಲುವುದೇ ಮುಖ್ಯ ಎಂಬುದು ಮತ್ತೊಮ್ಮೆ ರುಜುವಾತಾಗಿದೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನೀಟ್ ಸೇರಿದಂತೆ ಹಲವು ಪ್ರಶ್ನೆ ಪತ್ರಿಕೆಗಳ ಸೋರಿಕೆ ಎಂಬುವುದು ಮಾಮೂಲಿ ಎಂಬಂತಾಗಿದೆ. ಇದಕ್ಕೆ ಕೆಲವು ಶಿಕ್ಷಣ ಸಂಸ್ಥೆಗಳೊಂದಿಗೆ ಬಿಜೆಪಿಯು ಶಾಮೀಲಾಗಿರುವುದು ಕಾರಣವಾಗಿದೆ. ಇದಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇಂದ್ರಪ್ರದಾನ್‌ರವರನ್ನು ವಜಾ ಮಾಡಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ರಸಗೊಬ್ಬರದ ಬೆಲೆಯನ್ನು ಭಾರೀ ಪ್ರ‌ಮಾಣದಲ್ಲಿ ಏರಿಕೆ ಮಾಡಿ, ರಸಗೊಬ್ಬರ ಪಡೆಯಲು ಪ್ರೂಟ್ ಐಟಿ ಕಡ್ಡಾಯ ಮಾಡಿ ಪ್ರತಿ ಎಕರೆಗೆ 2 ಮೂಟೆ ನೀಡುತ್ತಿರುವುದನ್ನು ಎನ್.ಎನ್.ಶ್ರೀರಾಮ್ ಟೀಕಿಸಿದರು. ರೈತರಿಗೆ ಅಗತ್ಯ ಇರುವಷ್ಟು ರಸಗೊಬ್ಬರವನ್ನು ಕಡಿಮೆ ಬೆಲೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದರು

ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ವಿಜಯಕೃಷ್ಣ ಮಾತನಾಡಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲವು ಕಳೆದ 10 ವರ್ಷಗಳಿಂದ 25 ರಿಂದ 35 ಡಾಲರ್ ಮಧ್ಯೆ ದೊರೆಯುತ್ತಿದ್ದರೂ, ದೇಶದಲ್ಲಿನ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿಮೆ ಮಾಡದೇ ಜನರಿಂದ 27.61 ಲಕ್ಷ ಕೋಟಿ ರೂ.ಗಳನ್ನು ಹಗಲು ದರೋಡೆ ಮಾಡಲಾಯಿತು. ಅಲ್ಲದೇ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಮಾರಾಟ ಮಾಡುತ್ತಿದ್ದ ಇರಾನ್, ರಷ್ಯಾದಿಂದ ಖರೀದಿ ಮಾಡದಂತೆ ಅಮೇರಿಕಾದ ಬೆದರಿಕೆಗೆ ಮಣಿದು, ದುಬಾರಿ ಬೆಲೆಯಲ್ಲಿ ಅಮೇರಿಕಾ, ವೆನುಜುವೆಲ ದೇಶಗಳಿಂದ ಖರೀದಿ ಮಾಡಲಾಗುತ್ತಿದೆ. ಇದರಿಂದ ದೇಶದ ಜನತೆಯು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಇದಕ್ಕೆ ಪ್ರಧಾನಿ ಮೋದಿರವರ ಅಸಮರ್ಥ ಕಾರ್ಯನಿರ್ವಹಣೆಯೇ ಕಾರಣವಾಗಿದೆ ಎಂದು ಆರೋಪಿಸಿದೆ.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ರೈತರ ಜಮೀನು ರೈತರಿಗೆ ಬಿಡಿ: ಅನಿರ್ದಿಷ್ಟ ಹೋರಾಟ 66ನೇ ದಿನಕ್ಕೆ

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ವಿ.ಗೀತಾ, ಮುಖಂಡರಾದ ಎಂ.ಭೀಮರಾಜ್, ವಿ.ಅಂಬರೀಶ್, ಎಸ್.ಆಶಾ, ಹೊಲ್ಲಂಬಳ್ಳಿ ವೆಂಕಟೇಶಪ್ಪ, ಹೆಚ್.ಬಿ.ಕೃಷ್ಣಪ್ಪ, ಅಪ್ಪಯ್ಯಣ, ಆಂಜನಮ್ಮ, ಚಿನ್ನಮ್ಮ, ನಾರಾಯಣಪ್ಪ, ಮುನಿರತ್ನಮ್ಮ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...