ಕೋಲಾರ | ಸಮಾಜ ಕಲ್ಯಾಣ ಇಲಾಖೆ ಜೆಡಿ ಶ್ರೀನಿವಾಸನ್ ನಿಯೋಜನೆ ರದ್ದುಗೊಳಿಸಲು ದಲಿತ ಸಂಘಟನೆಗಳಿಂದ ಎಂಎಲ್ಸಿಗೆ ಮನವಿ

Date:

ಜಾಗೃತಿ ಸಮಿತಿಯ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಆಯ್ಕೆ ಮಾಡಿರುವ (ಅಟ್ರಾಸಿಟಿ ಸಮಿತಿ) ಸಮಿತಿಯನ್ನು ವಜಾಗೊಳಿಸಿ, ಕಾನೂನಿನ ಪ್ರಕಾರ ಆಯ್ಕೆ ಮಾಡದೆ ಶಿಫಾರಸ್ಸು ಮಾಡಿರುವ ಸಮಾಜ ಕಲ್ಯಾಣ ಇಲಾಖೆಯ ಭ್ರಷ್ಟ ಅಧಿಕಾರಿ ಶ್ರೀನಿವಾಸನ್ ಅವರನ್ನು ಇಲಾಖೆಯ ನಿಯೋಜನೆಯನ್ನು ರದ್ದು ಮಾಡಿ ಇಲಾಖೆಗೆ ನಿಷ್ಠಾವಂತ ಅಧಿಕಾರಿಯನ್ನು ನೇಮಕ ಮಾಡುವಂತೆ ದಲಿತ ಸಂಘಟನೆಗಳ ಸಂಯುಕ್ತ ರಂಗದ ನೇತೃತ್ವದಲ್ಲಿ ಬುಧವಾರ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

- Advertisement -

ದಲಿತ ಸಂಘಟನೆಗಳ ಸಂಯುಕ್ತ ರಂಗದ ಅಧ್ಯಕ್ಷ ಡಿಪಿಎಸ್ ಮುನಿರಾಜು ಮಾತನಾಡಿ ಜಿಲ್ಲಾ ಜಾಗೃತಿ ಸಮಿತಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವಾರು ನಿಬಂಧನೆಗಳು ಹಾಗೂ ಷರತ್ತುಗಳು ಇದ್ದರು ಅವುಗಳನ್ನು ಗಾಳಿಗೆ ತೂರಿ ಏಕಾಏಕಿ ನೇಮಕ ಮಾಡಿದ್ದಾರೆ ಮೊದಲಿಗೆ ಅರ್ಜಿ ಆಹ್ವಾನಿಸಿ ಎಲ್ಲಾ ದಲಿತ ಸಂಘ ಸಂಸ್ಥೆಗಳು ಮತ್ತು ಸಮುದಾಯದ ಸೇವಕರಿಗೆ ಅವಕಾಶ ನೀಡಬೇಕು, ಮತ್ತು ಅರ್ಜಿ ಹಾಕಲು ಪ್ರಚಾರಗೊಳಿಸಬೇಕು ಸಮುದಾಯದ ಬಡವರ ಪರವಾಗಿ ಯಾರು ಸೇವೆಗಳನ್ನು ಸಲ್ಲಿಸಿರುತ್ತಾರೆ ಅವರಿಗೆ ಮೊದಲ ಆದ್ಯತೆ ನೀಡಬೇಕು, ಆದರೆ ಜೆಡಿ ಶ್ರೀನಿವಾಸನ್ ಇದ್ಯಾವುದನ್ನು ಮಾಡದೆ ಈತನಿಗೆ ಬೇಕಾದವರಿಂದ ಅರ್ಜಿಗಳು ಎಷ್ಟು ಬೇಕೋ ಅಷ್ಟನ್ನು ಮಾತ್ರವೇ ಪಡೆದುಕೊಂಡು ನೇಮಕ ಮಾಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹಿಂದಿನ ವರ್ಷಗಳಲ್ಲಿ ಸಮಿತಿಗೆ ಅರ್ಜಿಗಳನ್ನು ಕರೆದಾಗ ನೂರಾರು ಅರ್ಜಿಗಳನ್ನು ಸಲ್ಲಿಸಿರುವುದು ಕೂಡ ದಾಖಲೆಗಳು ಇವೆ ಆದರೆ ಏಕಾಏಕಿ ಆಯಾ ಶಾಸಕರ ಶಿಫಾರಸ್ಸು ಪತ್ರಗಳನ್ನು ಪಡೆದುಕೊಂಡ ಈ ಭ್ರಷ್ಟ ಅಧಿಕಾರಿ ಶ್ರೀನಿವಾಸನ್ ರವರು ರಾಜಕೀಯ ಏಜೆಂಟರನ್ನು ಹಾಗೂ ಸಮುದಾಯದ ಬಗ್ಗೆ ಯಾವುದೇ ಅರಿವು ಇಲ್ಲದಂತಹವರನ್ನು ಕಾನೂನು ಬಾಹಿರವಾಗಿ ಜಾಗೃತಿ ಸಮಿತಿಗೆ ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿ ನೇಮಕ ಮಾಡಿದ್ದು ಕೂಡಲೇ ಅ ಸಮಿತಿಯನ್ನು ವಜಾಗೊಳಿಸಿ ಹೊಸ ಸಮಿತಿ ನೇಮಕ ಮಾಡುವಂತೆ ಒತ್ತಾಯಿಸಿದರು.

ದಮನಿತರ ಸೇವಾ ಸಮಿತಿ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಮೇಡಿಹಾಳ ಮುನಿಅಂಜಿನಪ್ಪ ಮಾತನಾಡಿ ಸಮಾಜ ಕಲ್ಯಾಣ ಇಲಾಖೆಯ ಜೆಡಿ ಶ್ರೀನಿವಾಸನ್ ಮಾತೃ ಸಂಸ್ಥೆ ತೋಟಗಾರಿಕೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಅಂತರವನ್ನು ಪ್ರಭಾರಿಯಾಗಿ ಸಮಾಜ ಕಲ್ಯಾಣ ಇಲಾಖೆಗೆ ನಿಯೋಜನೆಗೊಂಡಿದ್ದಾರೆ ಇವರಿಗೆ ದಲಿತರ ಮತ್ತು ಸಮಾಜ ಕಲ್ಯಾಣ ಇಲಾಖೆಯ ಬಗ್ಗೆ ಯಾವುದೇ ಅರಿವು ಇಲ್ಲ ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಕೂಡಲೇ ಅವರನ್ನು ಇಲಾಖೆಯ ನಿಯೋಜನೆ ರದ್ದು ಮಾಡಿ ಸಮಾಜ ಕಲ್ಯಾಣ ಇಲಾಖೆಗೆ ನಿಷ್ಠಾವಂತರನ್ನು ಹಾಗೂ ದಲಿತರ ಬಗ್ಗೆ ಕಾಳಜಿ ಇರುವ ಅಧಿಕಾರಿಯನ್ನು ನೇಮಕ ಮಾಡುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ​ಚಿಂತಾಮಣಿ | ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ:ಚಿಂತಾಮಣಿಯಲ್ಲಿ ತಡರಾತ್ರಿ ಹೈಡ್ರಾಮಾ!

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಮುಖಂಡರಾದ ದಲಿತ ನಾರಾಯಣಸ್ವಾಮಿ, ಗಾಂಧಿನಗರ ಚೇತನ್ ಬಾಬು, ಮೋಚಿಪಾಳ್ಯ ನಾಗೇಶ್, ರಾಜಕುಮಾರ್, ರಾಂಪುರ ಮುನಿರಾಜು, ಅಂಬೇಡ್ಕರ್ ನಗರ ಮಂಜುನಾಥ್, ಜ್ಞಾನೇಶ್, ಕರಗಪ್ಪ, ಮತ್ತಿಕುಂಟೆ ಕೃಷ್ಣಪ್ಪ, ಸೇಎ ದಲಿತ ಸಂಘಟನೆಗಳ ಸಂಯುಕ್ತರಂಗದ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...