ಕೋಲಾರ | ನೂತನ ತಹಶಿಲ್ದಾರ್ ಶ್ರೀನಿವಾಸ್ ಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದಿಂದ ಅಭಿನಂದನೆ

Date:

ತಾಲೂಕಿಗೆ ನೂತನವಾಗಿ ನೇಮಕಗೊಂಡಿರುವ ತಹಶಿಲ್ದಾರ್ ಹೆಚ್ ಶ್ರೀನಿವಾಸ್ ಅವರನ್ನು ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಶುಕ್ರವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಂಯುಕ್ತ ರಂಗದ ಅಧ್ಯಕ್ಷ ಡಿಪಿಎಸ್ ಮುನಿರಾಜು ಮಾತನಾಡಿ ಕೋಲಾರ ತಾಲೂಕು ಜಿಲ್ಲಾ ಕೇಂದ್ರವಾಗಿದ್ದರು ದಲಿತ ಕಷ್ಟಗಳಿಗೆ ಹಾಗೂ ಸಮಸ್ಯೆಗಳಿಗೆ ಸ್ಪಂದನೆ ಇಲ್ಲವಾಗಿದೆ ಹೋರಾಟಗಳ ಮೂಲಕವೇ ನ್ಯಾಯ ಪಡೆಯಬೇಕಾದ ಸಂದರ್ಭ ಬಂದಿದೆ ನೂತನವಾಗಿ ಬಂದಿರುವ ತಹಶಿಲ್ದಾರ್ ಹೊಸ ಬದಲಾವಣೆ ತರುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಲಿ ದಲಿತರ ಅಭಿವೃದ್ಧಿಗೆ ಮೀಸಲಾದ ಅನುದಾನವು ಅನ್ಯ ಕಾರ್ಯಕ್ರಮಗಳಿಗೆ ಬಳಕೆ ಮಾಡದೆ ದಲಿತರಿಗೆ ಮೀಸಲಿಡಬೇಕು ಸರ್ಕಾರ ಪ್ರತಿ ವರ್ಷವೂ ಸಾವಿರಾರು ಕೋಟಿ ಹಣವನ್ನು ದಲಿತರ ಅಭಿವೃದ್ದಿಗಾಗಿ ಮೀಸಲಿಟ್ಟು ಸದುಪಯೋಗವಾಗುವಂತೆ ಕಾರ್ಯಕ್ರಮಗಳು ರೂಪಿಸುವಂತಾಗಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದಲಿತ ದಮನಿತರ ಸೇವಾ ಸಮಿತಿ ರಾಜ್ಯ ಅಧ್ಯಕ್ಷ ಮೇಡಿಹಾಳ ಮುನಿಅಂಜಿನಪ್ಪ ಮಾತನಾಡಿ ದಲಿತರ ಅಭಿವೃದ್ಧಿ, ಬಡತನ ನಿರ್ಮೂಲನೆ, ಶಿಕ್ಷಣ, ಸಾಮಾಜಿಕ, ಸಮುದಾಯದ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯನ್ನು ಬಳಕೆ ಮಾಡಿಕೊಳ್ಳಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಆರ್ಥಿಕವಾಗಿ ಸಬಲೀಕರಣಗೊಳ್ಳುವಂತೆ ಒತ್ತು ನೀಡಬೇಕು ಗ್ರಾಪಂ ಮತ್ತು ಹೋಬಳಿ ಮಟ್ಟದಲ್ಲಿ ದಲಿತರ ಕುಂದುಕೊರತೆಗಳ ಸಭೆ ನಡೆಸುವಂತಾಗಲಿ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಜು.18 ಜಿಲ್ಲೆಗೆ ಸಿಎಂ ಭೇಟಿ, ಮನವಿ ಸಲ್ಲಿಸಲು ಅವಕಾಶ ಕೋರಿ ಎಸ್ಪಿಗೆ ಭೂ ಸಂತ್ರಸ್ತರಿಂದ ಮನವಿ – ಈ ದಿನ.ಕಾಮ್

ಈ ಸಂದರ್ಭದಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಖಾದ್ರಿಪುರ ಬಾಬು, ದಲಿತ್ ನಾರಾಯಣಸ್ವಾಮಿ, ಗಾಂಧಿನಗರ ರಾಜಕುಮಾರ್, ಡಿಎಸ್ಎಸ್ ಮಂಜುಳಾ, ಅಪ್ಪಿ ನಾರಾಯಣಸ್ವಾಮಿ, ಕರವೇ ಸೋಮಶೇಖರ್, ಗಿರಿಜಮ್ಮ, ಶ್ರೀರಾಮಪುರ ರವಿ, ಹರಳಕುಂಟೆ ರಾಜು, ಅಂಬೇಡ್ಕರ್ ನಗರ ರವಿ, ಮೋಚಿಪಾಳ್ಳ ನಾಗೇಶ್, ಯುವರಾಜ್, ಮುನಿಯಪ್ಪ, ಗಂಗಮ್ಮನಪಾಳ್ಯ ಶಿವು, ಎಸ್ಎಸ್ಡಿನಾಗರಾಜ್, ರಾಮಪಿರ ಮುನಿರಾಜು, ಬುಸನಹಳ್ಳಿ ರಮೇಶ್, ಟಮಕ ಮಂಜು, ನಡುಪಳ್ಳಿ ವೆಂಕಟೇಶ್, ಮಂಜುನಾಥ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...