ಕೋಲಾರ ಜಿಲ್ಲೆಯ ತೇರಹಳ್ಳಿ ಗ್ರಾಮದಲ್ಲಿ ದೀರ್ಘಕಾಲದಿಂದ ಮುಂದುವರಿದಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಬೆಳಕು ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳಾದ ಡಾ. ಎಂ. ಆರ್. ರವಿ ಅವರಿಗೆ ಮನವಿ ಸಲ್ಲಿಸಲಾಯಿತು.
ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳಾದ ಡಾ. ಎಂ. ಆರ್. ರವಿ ಅವರು ಸಮಸ್ಯೆಯ ಗಂಭೀರತೆಯನ್ನು ಆಲಿಸಿ, ತಕ್ಷಣವೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ದೂರವಾಣಿ ಮೂಲಕ ಸಂಪರ್ಕಿಸಿ, ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಂಡು, ತುರ್ತಾಗಿ ಸಮಸ್ಯೆಯನ್ನು ಪರಿಹರಿಸುವಂತೆ ಸೂಚನೆ ನೀಡಿದರು. ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಚಿತ್ರಾವತಿಗೆ ಕೊಳಚೆ ನೀರು ಹರಿಸುವ ಕಾಮಗಾರಿ ಸಂಪೂರ್ಣ ಸ್ಥಗಿತ
ಈ ಸಂದರ್ಭದಲ್ಲಿ ಗ್ರಾಮ ಬೆಳಕು ಸಂಸ್ಥೆಯ ಪ್ರತಿನಿಧಿಗಳಾದ ಗೋಪಿನಾಥ್ ಕರವಿ, ಕೆ.ಸಿ. ಶ್ರೀರಾಮ್, ಝಾನ್ಸಿರಾಣಿ, ಭವ್ಯ, ಮನೋಜ್ ಪೆದ್ದೂರು ಹಾಗೂ ನವೀನ್ ಗೌಡ ಉಪಸ್ಥಿತರಿದ್ದರು.
ಕೋಲಾರ | ತೇರಹಳ್ಳಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ರವಿ
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:




