ಕೋಲಾರದಲ್ಲಿ ಪೈಶಾಚಿಕ ಕೃತ್ಯ: ವೃದ್ದೆ ಮೇಲೆ ಅತ್ಯಾಚಾರ – ಕೊಲೆ

Date:

80 ವರ್ಷದ ವೃದ್ದೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಕೊಲೆ ಮಾಡಿ, ಆಕೆಯ ಬಳಿಯಿದ್ದ ಹಣ-ಒಡವೆಗಳನ್ನು ದೋಚಿರುವ ಪೈಶಾಚಿಕ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

- Advertisement -

ಶ್ರೀನಿವಾಸಪುರದಲ್ಲಿರುವ ಮಳುಬಾಗಿಲು ರಸ್ತೆಯ ಸಂತೆ ಮೈದಾನದ ಬಳಿ ವೃದ್ದೆಯ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೃತ ಸಂತ್ರಸ್ತೆಯನ್ನು ಶ್ರೀನಿವಾಸಪುರ ತಾಲೂಕಿನ ಎಚ್‌.ಜಿ ಹೊಸೂರು ಗ್ರಾಮದ ಲಕ್ಷ್ಮಿದೇವಮ್ಮ ಎಂದು ಗುರುತಿಸಲಾಗಿದೆ. ಅವರು ಶನಿವಾರ ಶ್ರೀನಿವಾಸಪುರಕ್ಕೆ ಬಂದಿದ್ದರು. ಪಟ್ಟಣದಲ್ಲಿದ್ದ ದೇವಸ್ಥಾನ, ಚರ್ಚ್‌ಗಳಲ್ಲಿ ಪೂಜೆ ಸಲ್ಲಿಸಿ ಸೋಮವಾರ ಸಂಜೆ ತನ್ನೂರಿಗೆ ಮರಳಲು ಸಂತೆ ಮೈದಾನದ ಸಮೀಪ ಬಸ್‌ಗಾಗಿ ಕಾದುಕುಳಿದ್ದರು ಎಂದು ಹೇಳಲಾಗಿದೆ.

ಬಸ್‌ಗಾಗಿ ಕಾಯುತ್ತಿದ್ದ ಆಕೆಯನ್ನು ದುರುಳ ಕಾಮುಕನೊಬ್ಬ ಎಳೆದೊಯ್ದು, ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾನೆ. ಆಕೆಯ ಬಳಿಯಿದ್ದ ಹಣ-ಒಡವೆಗಳನ್ನು ದೋಚಿದ್ದಾನೆ ಎಂದು ವರದಿಯಾಗಿದೆ. ವೃದ್ಧೆಯೊಂದಿಗೆ ಕಾಮುಕ ಆರೋಪಿ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವು ಸಮೀಪ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...