ಕೋಲಾರ | ಬಾಲಕನ ಮೇಲೆ ನಾಯಿಗಳ ದಾಳಿ; ಪ್ರಾಣಾಪಾಯದಿಂದ ಬಾಲಕ ಪಾರು

Date:

ಕೋಲಾರದ ರಹಮತ್‌ ನಗರದಲ್ಲಿ ಗುರುವಾರ ರಾತ್ರಿ ಬೀದಿನಾಯಿಗಳು ಬಾಲಕನನ್ನು ಅಟ್ಟಾಡಿಸಿ ಗಾಯಗೊಳಿಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನಿಗೆ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

- Advertisement -

ರಹಮತ್‌ ನಗರದ ಬಾಬು ಎಂಬುವರ ಪುತ್ರ ಜಾಫರ್‌(9)ನನ್ನು ಪೊಲೀಸರು ರಕ್ಷಿಸಿ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕುತ್ತಿಗೆ, ಕಿವಿ, ಎದೆ, ಬೆನ್ನು ಹಾಗೂ ತೊಡೆಗೆ ತೀವ್ರ ಗಾಯವಾಗಿದ್ದು, ಬಾಲಕ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಗುರುವಾರ ರಾತ್ರಿ ಐದಾರು ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ 112 ವಾಹನದಲ್ಲಿ ಗಸ್ತಿನಲ್ಲಿದ್ದ ಕಾನ್‌ಸ್ಪೆಬಲ್‌ ಎಚ್‌.ರಾಜಣ್ಣ ನಾಯಿಗಳನ್ನು ಓಡಿಸಿ ಮಗುವನ್ನು ಜಿಲ್ಲಾಸ್ಪತ್ರೆಗೆ ಸೇರಿದ್ದಾರೆ. ಬಾಲಕ ಅಪಾಯದಿಂದ ಪಾರಾಗಿದ್ದಾನೆ” ಎಂದು ಗಲ್‌ಪೇಟೆ ಪಿಎಸ್‌ಐ ಅರುಣ್‌ ಗೌಡ ಪಾಟೀಲ್‌ ತಿಳಿಸಿದ್ದಾರೆ. ಕಾನ್‌ಸ್ಟೆಬಲ್‌ ರಾಜಣ್ಣ ಹಾಗೂ ವಾಹನದ ಚಾಲಕ ಡಿಎಆರ್‌ನ ಮಂಜುನಾಥ್‌ ಶೆಟ್ಟಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

“ರಾತ್ರಿ ವಾಹನದಲ್ಲಿ ಶ್ರೀನಿವಾಸಪುರ ವೃತ್ತದಿಂದ ಅರಹಳ್ಳಿ ಕಡೆ ಗಸ್ತು ತಿರುಗುವಾಗ ಕಿರುಚಿದ ಶಬ್ದ ಬಂತು. ಅದೇ ರಸ್ತೆಯಲ್ಲಿ ಮುಂದೆ ಹೋಗಿದ್ದೆವು. ಶಬ್ದ ಏನಿರಬಹುದೆಂದು ಕುತೂಹಲದಿಂದ ಹಿಂತಿರುಗಿ ಬಂದೆವು” ಎಂದು ಕಾನ್‌ಸ್ಟೆಬಲ್‌ ರಾಜಣ್ಣ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆನೆ ‘ಸುವರ್ಣ’ಗೆ ಸಿಸೇರಿಯನ್‌ ಹೆರಿಗೆ; ಗರ್ಭದಲ್ಲೇ ಮೃತಪಟ್ಟಿದ್ದ ಮರಿ

“ನಾಯಿಗಳು ಬಾಲಕನ ಬಟ್ಟೆ ಹರಿದು ಹಾಕಿದ್ದವು. ಕುತ್ತಿಗೆಯಿಂದ ರಕ್ತ ಬರುತಿತ್ತು. ತಕ್ಷಣವೇ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದೆವು. ಬಳಿಕ ರಾತ್ರಿ ಕರ್ತವ್ಯದಲ್ಲಿದ್ದ ಡಾ.ಕೆ.ಎಂ ವರ್ಣಶ್ರೀ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಶುಕ್ರವಾರ ಬೆಳಿಗ್ಗೆ ಬಾಲಕನಿಗೆ ಪ್ರಜ್ಞೆ ಬಂದಿದೆ. ತಂದೆ ಹೆಸರು, ಮನೆ ವಿಳಾಸ, ಮೊಬೈಲ್‌ ಸಂಖ್ಯೆ ನೀಡಿದ್ದಾನೆ” ಎಂದು ರಾಜಣ್ಣ ತಿಳಿಸಿದರು.

ಬಾಲಕ ರಕ್ಷಣೆ ವೇಳೆ ಕಾನ್‌ಸ್ಟೆಬಲ್‌ ರಾಜಣ್ಣ ಅವರ ಮೇಲೂ ನಾಯಿಗಳು ದಾಳಿ ನಡೆಸಿವೆ. ಲಾಟಿ ಹಾಗೂ ಕಲ್ಲಿನ ಸಹಾಯದಿಂದ ಬೀದಿನಾಯಿಗಳನ್ನು ಓಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...