ಕೋಲಾರ | ಸಿಎಂ ಬದಲಾದರೂ ಗ್ಯಾರಂಟಿ ಯೋಜನೆ ನಿಲ್ಲಲ್ಲ ನೈಜ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ : ವಿ.ಎಂ ಮುನಿಯಪ್ಪ

Date:

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ವಿರೋಧಿಗಳ ಅಪಪ್ರಚಾರಕ್ಕೆ ಕಿವಿ ಕೊಡದೆ ಗ್ಯಾರಂಟಿ ಯೋಜನೆಗಳ ಸವಲತ್ತುಗಳನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಗ್ಯಾರಂಟಿ ಸಮಿತಿಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವೇಮಗಲ್ ವಿ.ಎಂ ಮುನಿಯಪ್ಪ ತಿಳಿಸಿದರು.

- Advertisement -

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೇರಿದಂತೆ ಉಳಿದ ಗ್ಯಾರಂಟಿ ಯೋಜನೆಗಳ ಸಮಗ್ರ ಪರಿಷ್ಕರಣೆ ಹಾಗೂ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ತಡೆಗಟ್ಟಿ, ಕೇವಲ ಅರ್ಹರಿಗೆ ಮಾತ್ರ ಯೋಜನೆಗಳನ್ನು ತಲುಪಿಸಬೇಕು ಸಮಿತಿ ಸದಸ್ಯರು ಅಧ್ಯಕ್ಷರು ಉಪಾಧ್ಯಕ್ಷರು ನಿರಂತರವಾಗಿ ಜನರ ಮಧ್ಯೆ ಇದ್ದು ಅವರಿಗೆ ಜನರ ಕಷ್ಟ ಏನೆಂದು ಗೊತ್ತು ಅವರಿಂದ ಅಧಿಕಾರಿಗಳು ಮಾಹಿತಿ ಪಡೆದು ಫಲಾನುಭವಿಯಾಗಿ ಮಾಡಬೇಕು ಜೊತೆಗೆ ಅಧಿಕಾರಿಗಳು ಫಲಾನುಭವಿಗಳಿಗೆ ಸಂದಾಯವಾದ ಅಷ್ಟು ದಾಖಲೆಗಳು ಪ್ರತಿ ತಿಂಗಳ ಮಾಹಿತಿಯನ್ನು ಕೊಡಬೇಕು ಎಂದು ಸೂಚನೆ ನೀಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಜೀವನ ಮಟ್ಟವನ್ನು ಉತ್ತಮಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ ಅನಿಟ್ಟಿನಲ್ಲಿ ಮುಂದಿನ ವಾರದಿಂದ ಗ್ರಾಪಂ ಮಟ್ಟದಲ್ಲಿ ಕುಂದುಕೊರತೆಗಳ ಸಭೆ ಮಾಡಿ ಅಲ್ಲಿ ಫಲಾನುಭವಿಗಳ ಆಯ್ಕೆಗೆ ಇರುವ ತೊಡಕುಗಳನ್ನು ಸರಿಪಡಿಸಲಾಗುತ್ತದೆ ಗ್ರಾಮ ಪಂಚಾಯಿತಿಯ ಪಿಡಿಒ ನೇತೃತ್ವದಲ್ಲಿ ಅಂಗನವಾಡಿ, ಅಶಾ ಕಾರ್ಯಕರ್ತರ ಮೂಲಕ ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಮೂರು ವರ್ಷಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಒಟ್ಟು ₹ 3,834 ಕೋಟಿ‌ ಅನುದಾನ: ಶಾಸಕ ಕೊತ್ತೂರು ಮಂಜುನಾಥ್ – ಈ ದಿನ.ಕಾಮ್

ಸಭೆಯಲ್ಲಿ ತಾಪಂ ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸಿಡಿಪಿಓ, ಬೆಸ್ಕಾಂ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕೆಎಸ್‌ಆರ್‌ಟಿಸಿ, ಯುವನಿಧಿ ಯೋಜನೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಗ್ಯಾರಂಟಿ ಸಮಿತಿ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...