ಕೋಲಾರ | ಕೇಂದ್ರದಂತೆ ರಾಜ್ಯ ಸರ್ಕಾರವು ಮಾವಿಗೆ ಬೆಂಬಲ ಬೆಲೆ ಘೋಷಣೆಗೆ ರೈತ ಸಂಘ ಒತ್ತಾಯ

Date:

ಮಾವಿಗೆ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆಯನ್ನು ಸ್ವಾಗತಿಸಿ ಅದರಂತೆ ರಾಜ್ಯದ ಸರ್ಕಾರವು ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಿ, ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳ ಹಾವಳಿ ತಡೆಗಟ್ಟಿ ಆಂದ್ರಪ್ರದೇಶ ರಾಜ್ಯದಿಂದ ಮಾರುಕಟ್ಟೆಗೆ ಬರುವ ಮಾವವನ್ನು ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಜಿಲ್ಲಾಧಿಕಾರಿ ಎಂ.ಆರ್ ರವಿ ಅವರನ್ನು ರೈತ ಸಂಘದಿಂದ ಒತ್ತಾಯಿಸಿದರು

- Advertisement -

ಮಾವು ಮಾರುಕಟ್ಟೆಗೆ ಭೇಟಿ ನೀಡಿ ಒತ್ತಾಯಿಸಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಮಾವು ಬೆಳೆಗಾರರ ಮತ್ತು ರೈತರ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸಿ ಮಾವು ಬೆಳೆಗಾರರಿಗೆ ನೆಮ್ಮದಿ ತಂದಿದ್ದಾರೆ ಇದಕ್ಕಾಗಿ ಸಹಕರಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ರೈತರ ಸಮಸ್ಯೆಗಳನ್ನು ಆಲಿಸಿ ಮಾರುಕಟ್ಟೆ ಹಸ್ತಕ್ಷೇಪ ಹಾಗೂ ಖರೀದಿ ವ್ಯವಸ್ಥೆ ಕುರಿತಂತೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ಸರ್ಕಾರದ ಜವಾಬ್ದಾರಿಯುತ ನಿಲುವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಮಾವು ಬೆಳೆಗಾರರ ವಿಚಾರದಲ್ಲಿ ಸಕರಾತ್ಮಕ ನಿಲುವನ್ನು ತೋರಿದೆ ಆದರೆ ಇದು ಕೇವಲ ತಾತ್ಕಾಲಿಕ ಪರಿಹಾರ ಅಷ್ಟೇ ಇಂತಹ ಸಮಸ್ಯೆಗಳನ್ನು ಪ್ರತಿವರ್ಷ ಮರಕಳಿಸದಂತೆ ಶಾಶ್ವತ ಪರಿಹಾರ ನೀಡಬೇಕೆಂದು ಅಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ರಾಜ್ಯದ ಕಾಂಗ್ರೆಸ್ ಸರ್ಕಾರದ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಪಾಲಿನ ಬೆಂಬಲ ಬೆಲೆಯನ್ನು ಈ ಕೂಡಲೇ ಘೋಷಿಸಿ ರೈತರ ಕಷ್ಟಕ್ಕೆ ನಿಲ್ಲಬೇಕಾಗಿದೆ ಮಾವು ಬೆಳೆಗಾರರು ಪ್ರತಿ ವರ್ಷ ಮಳೆ, ಗಾಳಿ ಸಮಸ್ಯೆಯ ಜೊತೆಗೆ ಬೆಲೆಯ ಸಮಸ್ಯೆಗಳನ್ನೂ ನಿರಂತರವಾಗಿ ಎದುರಿಸಬೇಕಾಗಿದ್ದು ಇದಕ್ಕಾಗಿ ಶಾಶ್ವತವಾದ ಪರಿಹಾರವನ್ನು ರೂಪಿಸಿ ಮಾವು ಬೆಳಗಾರರನ್ನು ರಕ್ಷಣೆ ಮಾಡಬೇಕಾಗಿದೆ ಎಂದು ನಾರಾಯಣಗೌಡ ಒತ್ತಾಯ ಮಾಡಿದರು,

ಜಿಲ್ಲೆಯ ಮಾವು ಬೆಳೆಗಾರರ ಸಂಕಷ್ಟವನ್ನು ಅರಿತು ರೈತಪರ ನಿಂತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಅಂಕಿ ಅಂಶಗಳ ಪ್ರಕಾರ ಸರ್ಕಾರಕ್ಕೆ ಕಳುಹಿಸಿ ಬೆಂಬಲ ಬೆಲೆಗೆ ರೈತಪರ ಕಾಳಜಿವಹಿಸಿದ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೂ ರೈತ ಸಂಘದ ಪರವಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ಮಾವು ಖರೀದಿ ಮಿತಿಯನ್ನು ಸಡಿಲ ಮಾಡಬೇಕು ಇಂದಿನಿಂದಲೇ ಬೆಂಬಲ ಬೆಲೆ ಯೋಜನೆಯಲ್ಲಿ ಮಾವು ಖರೀದಿ ಮಾಡಬೇಕು ಜೊತೆಗೆ ಖರೀದಿ ಕೇಂದ್ರಗಳಲ್ಲಿ ಸಮಸ್ಯೆ ಆಗದಂತೆ ಕ್ರಮವಹಿಸಲು ಪ್ರತಿ 5 ಹಳ್ಳಿಗೆ ಒಂದು ಖರೀದಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಮಾವು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಇದು ರೈತ ಪರ ಹೋರಾಟಕ್ಕೆ ಸಂದಜಯ ರಾಜ್ಯದ ರೈತರ ಪ್ರತಿ ಸಮಸ್ಯೆಗೂ ರೈತ ಸಂಘ ನಿರಂತರವಾಗಿ ನಿಲ್ಲುತ್ತದೆ ಇದಕ್ಕೆ 2 ವರ್ಷಗಳಿಂದ ಮಾವು ಬೆಳೆಗಾರರಿಗೆ ನೀಡುತ್ತಿರುವ ಬೆಂಬಲ ಬೆಲೆಯ ಆದೇಶವೇ ಉದಾಹರಣೆಯಾಗಿದೆ. ರೈತರು ಯಾವುದೇ ಸಮಸ್ಯೆಯಿದ್ದರೂ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ನ್ಯಾಯ ಸಿಗುತ್ತದೆ ಜೊತೆಗೆ ಈಗಾಗಲೇ ಮಾವು ಸುಗ್ಗಿಕಾಲ ಮುಗಿಯುವ ಹಂತಕ್ಕೆ ಬಂದಿದ್ದು, ಈಗಾಗಲೇ ಕಟಾವು ಮಾಡಿರುವ ಮಾವಿಗೆ ಬೆಂಬಲ ಬೆಲೆ ಅನ್ವಯಿಸುವಂತೆ ಜಿಲ್ಲಾಧಿಕಾರಿ ಕ್ರಮ ವಹಿಸುವ ಜೊತೆಗೆ ರೈತರ ತೋಟದಲ್ಲಿರುವ ಎಲ್ಲಾ ಮಾವು ಪಸಲನ್ನು ಯಾವುದೇ ಷರತ್ತು ಇಲ್ಲದೇ ಖರೀದಿ ಮಾಡಬೇಕೆಂದು ಅಗ್ರಹಿಸಿದರು.

ಇದನ್ನು ಓದಿದ್ದೀರಾ..?ದಲಿತರ ಭೂಮಿ ವಿವಾದ: ಜೂನ್ 29ರಂದು ಜಿಲ್ಲಾವ್ಯಾಪಿ ಹೋರಾಟದ ಎಚ್ಚರಿಕೆ

ಈ ಸಂದರ್ಭದಲ್ಲಿ ಸಂಘದ ರಾಜ್ಯ ಮುಖಂಡ ಬಂಗವಾದಿ ನಾಗರಾಜ್‌ಗೌಡ, ಮಂಗಸಂದ್ರ ತಿಮ್ಮಣ್ಣ, ತಾಲೂಕು ಅಧ್ಯಕ್ಷ ತರ‍್ನಹಳ್ಳಿ ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ರಾಜೇಂದ್ರರೆಡ್ಡಿ, ಪುತ್ತೇರಿ ರಾಜು, ಗಿರೀಶ್ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...