ಕೋಲಾರ |ರೈತರ ಹಿತರಕ್ಷಣೆ ಮುಖ್ಯ, ಸೌಲಭ್ಯಗಳ ಸದುಪಯೋಗಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಕರೆ

Date:

ಸರ್ಕಾರ ನಿಗದಿಪಡಿಸಿರುವ 3.25 ಲಕ್ಷ ರೂಪಾಯಿ ಮಿತಿಯಿಂದಾಗಿ ಬೋರ್‌ವೆಲ್ ಆಳ ಹೆಚ್ಚಾದಾಗ ಬಡ ರೈತರು ತಮ್ಮ ಕೈಯಿಂದ ಹಣ ಹಾಕಬೇಕಾದ ಪರಿಸ್ಥಿತಿ ಇದೆ. ಬಡ ರೈತರಿಗೆ ಇದು ಹೊರೆಯಾಗಲಿದೆ. ಆದ್ದರಿಂದ ಬೋರ್‌ವೆಲ್ ಎಷ್ಟೇ ಆಳಕ್ಕೆ ಹೋದರೂ, ಅದಕ್ಕೆ ತಗಲುವ ಸಂಪೂರ್ಣ ವೆಚ್ಚ ಹಾಗೂ ಪಂಪ್ ಸೆಟ್ ಸಾಮಗ್ರಿಗಳನ್ನು ಸರ್ಕಾರವೇ ಭರಿಸುವಂತಾಗಬೇಕು ಈ ನಿಟ್ಟಿನಲ್ಲಿ ನಿಯಮಾವಳಿಗಳಿಗೆ ತಿದ್ದುಪಡಿ ತರಲು ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆಸಲಾಗುವುದು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

- Advertisement -

ನಗರದ ತಮ್ಮ ಕಛೇರಿ ಬಳಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಕೊರೆಸಲಾಗಿದ್ದ ಕೊಳವೆ ಬಾವಿಗಳಿಗೆ ಪಂಪು ಮೋಟಾರ್ ಪೈಪುಗಳನ್ನು ವಿತರಿಸಿ ಮಾತನಾಡಿದ ಅವರು ವಿವಿಧ ಕಾರಣಗಳಿಂದಾಗಿ ಕಳೆದ 2021-22 ರಿಂದ 2023-24ನೇ ಸಾಲಿನ ಬೋರ್‌ವೆಲ್ ಮತ್ತು ಪಂಪ್ ಸೆಟ್ ವಿತರಣಾ ಯೋಜನೆಗಳು ನನೆಗುದಿಗೆ ಬಿದ್ದಿದ್ದವು. ನಾವು ನಿರಂತರವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಓಡಾಡಿ, ಬಾಕಿ ಇದ್ದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದೇವೆ.ಇಂದು ಹಳೆಯ ಬಾಕಿ ಸೇರಿದಂತೆ ಒಟ್ಟು 32 ಅರ್ಹ ಫಲಾನುಭವಿಗಳಿಗೆ ಪಂಪ್, ಮೋಟರ್, ಕೇಬಲ್ ಒಳಗೊಂಡ ಸಂಪೂರ್ಣ ಕಿಟ್‌ಗಳನ್ನು ವಿತರಿಸಲಾಗಿದೆ. ಅಲ್ಲದೆ, 2024-25ನೇ ಸಾಲಿನ ಬೋರ್‌ವೆಲ್ ಕೊರೆಯುವ ಕಾಮಗಾರಿಗಳೂ ಪ್ರಗತಿಯಲ್ಲಿವೆ, ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪ್ರತಿ ಫಲಾನುಭವಿಗೆ ಒಟ್ಟು 3,25,000 ರೂಪಾಯಿಗಳ ಅನುದಾನ ನಿಗದಿಯಾಗಿರುತ್ತದೆ. ಇದರಲ್ಲಿ ಬೋರ್‌ವೆಲ್ ಕೊರೆಯಲು ತಗಲುವ ವೆಚ್ಚವನ್ನು ಕಳೆದು, ಇನ್ನುಳಿದ ಬಾಕಿ ಮೊತ್ತದಲ್ಲಿ ಫಲಾನುಭವಿಗಳಿಗೆ ಅಗತ್ಯವಿರುವ ಪಂಪ್, ಮೋಟರ್ ಹಾಗೂ ಇತರ ಸಾಮಗ್ರಿಗಳನ್ನು ಒದಗಿಸಲಾಗುತ್ತದೆ. ಬೋರ್‌ವೆಲ್ ಆಳ ಹೆಚ್ಚಾದಂತೆ ಸಾಮಗ್ರಿಗಳ ಪ್ರಮಾಣದಲ್ಲಿ ವ್ಯತ್ಯಾಸವಾಗುತ್ತದೆ ಇಲಾಖೆಯ ವತಿಯಿಂದ ಸಾಲ ಸೌಲಭ್ಯಗಳನ್ನು ಪಡೆದು ಕೃಷಿ ಚಟುವಟಿಕೆಗಳನ್ನು ನಡೆಸುವಂತೆ ಪಲಾನುಭವಿಗಳಿಗೆ ತಿಳಿಸಿದರು.

ಸಾರ್ವಜನಿಕರೊಬ್ಬರು 2019-20ನೇ ಸಾಲಿನ ‘ಪಂಚಮುಖಿ’ ಯೋಜನೆಯಡಿ ತಮಗೆ ಇನ್ನು ಪಂಪ್ ಸೆಟ್ ಸಿಕ್ಕಿಲ್ಲವೆಂದು ಶಾಸಕರ ಗಮನಕ್ಕೆ ತಂದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಕೊತ್ತೂರು ಮಂಜುನಾಥ್, ಆ ಅವಧಿಯಲ್ಲಿ ಡ್ರಿಲ್ಲಿಂಗ್, ಪಂಪ್ ಹಾಗೂ ಮೋಟರ್ ಎಲ್ಲವನ್ನೂ ಸೇರಿಸಿ ಒಬ್ಬರೇ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿತ್ತು. ಆ ಗುತ್ತಿಗೆದಾರ ಕೆಲವು ಕಡೆ ಕೆಲಸ ಮಾಡಿ, ಬಾಕಿ ಉಳಿಸಿ ನಾಪತ್ತೆಯಾಗಿದ್ದಾನೆ. ಬರುವ ಶುಕ್ರವಾರದಂದು ನಾನೇ ಖುದ್ದಾಗಿ ಬೆಂಗಳೂರಿಗೆ ತೆರಳಿ ಎಂಡಿ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ. ನಿಯಮ ಉಲ್ಲಂಘಿಸಿರುವ ಗುತ್ತಿಗೆದಾರನ ವಿರುದ್ಧ ಪೊಲೀಸ್ ದೂರು ದಾಖಲಿಸಿಯಾದರೂ ಸರಿ, ಬಾಕಿ ಇರುವ ಫಲಾನುಭವಿಗಳಿಗೆ ನ್ಯಾಯ ಕೊಡಿಸುತ್ತೇನೆ, ಎಂದು ಆಶ್ವಾಸನೆ ನೀಡಿದರು.

ಎಸ್‌ಐಆರ್ ರಾಜ್ಯ ನಿವಾಸಿಗಳ ನೋಂದಣಿ ಪ್ರಕ್ರಿಯೆಯ ಕುರಿತು‌ ಪತ್ರಿಕ್ರಿಯೆ ನೀಡಿದ ಶಾಸಕರು. ನಮ್ಮ ತಾಲೂಕನ್ನು ಬಿಟ್ಟು ಬೇರೆ ಯಾವುದೇ ರಾಜಕೀಯ ವಿಷಯಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಸದ್ಯ ಆರಂಭವಾಗುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಅತ್ಯಂತ ಸ್ವಾಗತಾರ್ಹ. ಇದರಿಂದ ನಮ್ಮ ನಿಜವಾದ ನಾಗರಿಕರು ಯಾರು, ಒರಿಜಿನಲ್ ಭಾರತೀಯರು ಯಾರು ಎಂಬುದು ತೀರ್ಮಾನವಾಗುತ್ತದೆ.ಆಂಧ್ರ ಅಥವಾ ತಮಿಳುನಾಡಿನವರು ಅಲ್ಲಿಯೂ ಸೌಲಭ್ಯ ಪಡೆದು, ಇಲ್ಲೂ ಪಡೆಯುವುದನ್ನು ಇದು ತಡೆಯುತ್ತದೆ. ಕರ್ನಾಟಕದಲ್ಲೇ ನೆಲೆಸುವವರು ಇಲ್ಲೇ ಸೌಲಭ್ಯ ಪಡೆಯಲಿ. ಆದರೆ ಬಾಂಗ್ಲಾದೇಶ, ಬರ್ಮಾ, ಶ್ರೀಲಂಕಾ ಅಥವಾ ನೇಪಾಳದಿಂದ ಬಂದು ಲಕ್ಷಾಂತರ ಜನ ಇಲ್ಲಿದ್ದಾರೆ. ನಮ್ಮ ದೇಶದ ನಾಗರಿಕರಿಗೆ ಸಿಗಬೇಕಾದ ಫಲಾನುಭವ ಬೇರೆಯವರ ಪಾಲಾಗಬಾರದು. ಈ ಪ್ರಕ್ರಿಯೆಯನ್ನು ಕಾನೂನುಬದ್ಧವಾಗಿ ಮತ್ತು ಪಾರದರ್ಶಕವಾಗಿ ಮಾಡುವಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಎರಡು ಬಾರಿ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.

ಇದನ್ನು ಓದಿದ್ದೀರಾ..?ಚಿಕ್ಕಬಳ್ಳಾಪುರ | ಸಮಾಜ ನಿರ್ಮಾಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣ ಅತ್ಯಗತ್ಯವಾಗಿದೆ : ಗೋಪಾಲ್ ಗೌಡ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಜಿಲ್ಲಾ ಅಧ್ಯಕ್ಷ ವೈ ಶಿವಕುಮಾರ್ ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಗ್ರಾಮಾಂತರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮೈಲಾಂಡಹಳ್ಳಿ‌ ಮುರಳಿ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಪ್ಸರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಲಿಂಗಪ್ಪ, ಗುತ್ತಿಗೆದಾರ ಬಾಬು, ಕಾಂಗ್ರೆಸ್ ಮುಖಂಡರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಫೈರೋಜ್ ಖಾನ್, ನದೀಂ ಬೇಗ್, ವೀರೇಂದ್ರ ಪಾಟೀಲ್, ಜನ್ನಘಟ್ಟ ನವೀನ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಧನಮಟ್ನಹಳ್ಳಿ ಲೋಕೇಶ್, ಚಿನ್ನಾಪುರ ನಾರಾಯಣಸ್ವಾಮಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...