ಕೋಲಾರ | ವೇಮಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ʼಆಪ್‌ʼನ ನಾಲ್ಕು ಅಭ್ಯರ್ಥಿಗಳು ಕಣಕ್ಕೆ

Date:

ಕೋಲಾರದ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಪಕ್ಷದ 4‌ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅವರೆಲ್ಲರೂ ಭ್ರಷ್ಟಾಚಾರ ಮಾಡುವುದಿಲ್ಲವೆನ್ನುವ ಪ್ರಮಾಣ ಮಾಡಿದ್ದಾರೆ. ಹಾಗೆಯೇ ಜೆಸಿಬಿ ಪಕ್ಷಗಳ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಅಭ್ಯರ್ಥಿಗಳು ಪ್ರಮಾಣ ಮಾಡಲಿ ಎಂದು ಆಮ್ ಆದ್ಮಿ ಪಕ್ಷದ ಕೋಲಾರ ಜಿಲ್ಲಾಧ್ಯಕ್ಷ ವೆಂಕಟಾಚಲಪತಿ ಸವಾಲು ಹಾಕಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 17 ವಾರ್ಡ್‍ಗಳ ಪೈಕಿ 4 ವಾರ್ಡ್‍ಗಳಲ್ಲಿ ಸಾಮಾನ್ಯ ಜನರನ್ನೇ ಅಭ್ಯಥಿಗಳನ್ನಾಗಿ ಆಯ್ಕೆ ಮಾಡಿದ್ದು, ಉತ್ತಮ ಸ್ಪಂದನೆ ಇರುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಪಕ್ಷದ ರಾಜ್ಯ ಮುಖಂಡ ನಾಗರಾಜ್ ಮಾತನಾಡಿ, “ನೆಲೆಯೇ ಇಲ್ಲದ ಪರಿಸ್ಥಿತಿಯಲ್ಲಿ ನಾಲ್ಕು ಮಂದಿ ಅಭ್ಯರ್ಥಿಗಳು ಸಿಕ್ಕಿದ್ದಾರೆ. ಮೊದಲ ಪ್ರಯತ್ನ ಮಾಡುತ್ತಿದ್ದು, ಸಾಮಾನ್ಯ ಜನರಿಗೇ ಅವಕಾಶ ನೀಡಲಾಗಿದೆ ಹೊರತು ಸೂಟ್ ಕೇಸ್ ಪಡೆದು ಟಿಕೆಟ್ ನೀಡುವ ಸಂಸ್ಕೃತಿ ನಮ್ಮಲ್ಲಿಲ್ಲ. ಊರಿನ ಅಭಿವೃದ್ಧಿ ದೆಸೆಯಿಂದ ಇಂತಹ ಅಭ್ಯರ್ಥಿಗಳಿಗೆ ಮತ ನೀಡಿ ಅವಕಾಶ ಮಾಡಿಕೊಡಿ” ಎಂದು ಕೋರಿದರು.

ಪಕ್ಷದ ರಾಜ್ಯ ಕಾರ್ಯದರ್ಶಿ ಸುರೇಶ್ ಮಾತನಾಡಿ, “ಪ್ರತಿ ಮನೆಗೂ ಪ್ರಮಾಣಪತ್ರ ತಲುಪಿಸಿದ್ದು, ಗೆಲ್ಲಿಸಿದ್ದೇ ಆದಲ್ಲಿ ಅನುದಾನದ ಮಾಹಿತಿಯ ಫಲಕವನ್ನು ವಾರ್ಡ್‍ನಲ್ಲಿ ಅಳವಡಿಸಿ, ಪಾರದರ್ಶಕವಾಗ ಆಡಳಿತ ನಡೆಸಿಇಡೀ ಜಿಲ್ಲೆಯಲ್ಲೇ ಮಾದರಿ ವಾರ್ಡ್
ಗಳನ್ನಾಗಿಸಲಾಗುವುದು. ಒಂದು ವೇಳೆ ನಮ್ಮವರು ಭ್ರಷ್ಟಾಚಾರ ಮಾಡಿದರೂ ಇದೇ ಪೊರಕೆಯಿಂದ ಗುಡಿಸುತ್ತೇವೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್‍ನವರು 60%, 40% ಕಮೀಷನ್ ಹಣದ ಹೊಳೆಯನ್ನು ಹರಿಸಲು ಮುಂದಾಗಿದ್ದು, ಒಂದು ದಿನದ ಆಸೆ ಆಮಿಷಕ್ಕೆ ಒಳಗಾಗಬೇಡಿ” ಎಂದು ಮನವಿ ಮಾಡಿದರು.

ವೇಮಗಲ್ ಮುಖಂಡ ವಿಜಯ್ ಕುಮಾರ್ ಮಾತನಾಡಿ, “ಮನೆಮನೆಗೆ ಹೋಗಿ ಪ್ರಚಾರ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ಬಂದಿದೆ. 17 ವಾರ್ಡ್‍ಗಳಲ್ಲಿ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿಯವರು ಹಣದ ಜತೆಗೆ ಹೊರಟಿದ್ದಾರೆ. ಆದರೂ ನಮಗೆ ಮತ ನೀಡಿ ಸ್ವಚ್ಛ ಆಡಳಿತ ಮಾಡಲು ಅವಕಾಶ ಕಲ್ಪಿಸಿಕೊಡಲು ಮನವಿ ಮಾಡಿರುವುದಾಗಿ” ತಿಳಿಸಿದರು.

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ಅಭ್ಯರ್ಥಿಗಳಾದ ಗೌರಿಶಂಕರ್, ಪಿ.ಲಲಿತಮ್ಮ, ಲಕ್ಷ್ಮಮ್ಮ ಮಾತನಾಡಿ, “ನಾವು ಯಾವುದೇ ಭ್ರಷ್ಟಾಚಾರ ಮಾಡಲ್ಲವೆಂದು ಈಗಾಗಲೇ ಪ್ರಮಾಣ ಮಾಡಿದ್ದೇವೆ. ನಮ್ಮಿಂದ ಭ್ರಷ್ಟಾಚಾರ ಆದರೆ ಅಂದೇ ರಾಜೀನಾಮೆ ನೀಡುತ್ತೇವೆ. ಇದೇ ರೀತಿ ಬೇರೆ ಪಕ್ಷದ ಅಭ್ಯರ್ಥಿಗಳೂ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು. ಭ್ರಷ್ಟಾಚಾರ ಮಾಡುವುದಿಲ್ಲ, ಮಾಡಲು ಬಿಡುವುದೂ ಇಲ್ಲ. ಅನುದಾನ ದುರ್ಬಳಕೆಯಾಗಲು ಬಿಡುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...