ಕಣ್ಣಿನ ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಕನಿಷ್ಠ ಆರು ತಿಂಗಳಿಗೆ ಒಮ್ಮೆಯಾದರೂ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವಂತೆ ಹಿರಿಯ ಪತ್ರಕರ್ತರು ಹಾಗೂ ಪ್ರಜಾವಾಣಿ ಪತ್ರಿಕೆಯ ಕೋಲಾರ ಜಿಲ್ಲಾ ವರದಿಗಾರ ಓಂಕಾರ್ ಮೂರ್ತಿ ತಿಳಿಸಿದರು.
ನಗರದ ಕ್ಲಾಕ್ ಟವರ್ ಬಳಿ ಇರುವ ನೇತ್ರದೀಪ ಜಿಇಎಫ್ ಕಣ್ಣಿನ ಆಸ್ಪತ್ರೆ ಮತ್ತು ದ್ರಾವಿಡ ವಿಮೋಚನಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
“ಪ್ರಸ್ತುತ ಹೆಚ್ಚಿನ ಮಕ್ಕಳು ಮೊಬೈಲ್ ನೋಡುವುದನ್ನು ಅಭ್ಯಾಸ ಮಾಡಿಕೊಂಡಿರುವುದರಿಂದ ಹಲವು ರೀತಿಯ ಕಣ್ಣಿನ ಸಮಸ್ಯೆಗಳು ಕಂಡುಬರುತ್ತಿವೆ. ಕಣ್ಣಿನ ಸಮಸ್ಯೆಗಳ ಪರಿಹಾರಕ್ಕೆ ಕನಿಷ್ಟ ಆರು ತಿಂಗಳಿಗೆ ಒಮ್ಮೆ ಮಕ್ಕಳ ಕಣ್ಣುಗಳ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯುವುದು ಸೂಕ್ತ” ಎಂದು ಅಭಿಪ್ರಾಯಪಟ್ಟರು.
ಆಸ್ಪತ್ರೆಯ ವೈದ್ಯ ಡಾ.ವಿನಯ್ ಡಿ ಮಾತನಾಡಿ, “ಬಹುತೇಕ ಸಕ್ಕರೆ ಖಾಯಿಲೆ ಇರುವವರು ಗ್ಲುಕೋಮ ಖಾಯಿಲೆಯಿಂದ ಕಣ್ಣಿನ ದೃಷ್ಟಿ ಕಳೆದುಕೊಂಡು ಕುರುಡಾಗುತ್ತಿದ್ದಾರೆ. ಖಾಯಿಲೆ ಉಲ್ಬಣವಾಗುವ ಮೊದಲೇ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ
ಗ್ಲುಕೋಮ ಖಾಯಿಲೆ ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯವಶ್ಯಕ” ಎಂದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಕರಾವಳಿ ಅಭಿವೃದ್ಧಿ ಪ್ರಾ.ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತ ನಾಯಕರಿಗೆ ನೀಡಿ – ಅಲ್ತಾಫ್ ಅಹಮ್ಮದ್
ವಿಷೇಶವಾಗಿ ಶಾಲಾ ಮಕ್ಕಳಿಗೆ ಶಿಬಿರದಲ್ಲಿ ತಪಾಸಣೆ ಮಾಡಲಾಯಿತು. ಸುಮಾರು ನೂರಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ಪತ್ರಕರ್ತರು ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ರಾಕೇಶ್ ಸಾಯಿ, ದ್ರಾವಿಡ ವಿಮೋಚನಾ ಸಂಘದ ಅಧ್ಯಕ್ಷ ಕೆ ಎಂ ಅನಂತ ಕೀರ್ತಿ
ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.