ಕೋಲಾರ | ಗ್ರಾ.ಪಂ. ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹ: ಜು.28ರಂದು ಬೃಹತ್ ಹೋರಾಟ

Date:

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಿದ್ದರೂ ಕೂಡ ಆಳುವ ಸರ್ಕಾರಗಳು ಗ್ರಾಮ ಪಂಚಾಯಿತಿ ನೌಕರರನ್ನು ನಿರ್ಲಕ್ಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜುಲೈ 28ರಂದು ಕೋಲಾರ ಜಿಲ್ಲಾ ಪಂಚಾಯತ್‌ ಎದುರು ಬೃಹತ್ ಹೋರಾಟ ಕೈಗೊಳ್ಳಲಾಗಿದ್ದು, ಎಲ್ಲ ನೌಕರರೂ ಭಾಗವಹಿಸಬೇಕು ಎಂದು ರೈತ ಕಾರ್ಮಿಕ ಮುಖಂಡ ಪಾತಕೋಟ ನವೀನ್ ಕುಮಾರ್ ಕರೆ ನೀಡಿದರು.

- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮ ಪಂಚಾಯಿತಿ ಎದರು ಜುಲೈ 23ರ ಬುಧವಾರ ಹಮ್ಮಿಕೊಂಡಿದ್ದ ಪಂಚಾಯಿತಿ ನೌಕರ ಸಂಘದ ಹೋಬಳಿ ಮಟ್ಟದ ಸಮಾವೇಶದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕನಿಷ್ಠ ವೇತನ ₹36,000 ನೀಡುವುದಾಗಲಿ, ನಿವೃತ್ತಿ ವೇತನ, ಪ್ರಮೋಷನ್ ನೀಡುವುದು, ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಗೆ ಜಾರಿ ಮಾಡುತ್ತಿಲ್ಲ, ಇತ್ತೀಚೆಗೆ ಕರ ವಸೂಲಿಗಾರ ಮತ್ತು ಜಲಗಾರರಿಂದ ಕಂದಾಯ ವಸೂಲಿ ವಿಚಾರದಲ್ಲಿ ಮೇಲಧಿಕಾರಿಗಳಿಂದ ನಿರಂತರ ಕಿರುಕುಳ ನೀಡುತ್ತಿರುವುದು ನಿಲ್ಲಬೇಕು. ಜಲಗಾರರಿಗೆ ಬ್ಯಾಟರಿ ಮತ್ತು ಶ್ಯೂಗಳನ್ನು ಕೊಡಬೇಕು ಹಾಗೂ ನೌಕರರಿಗೆ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡುವಂತೆ ಒತ್ತಾಯಿಸಲಾಗುವುದು” ಎಂದು ಹೇಳಿದರು.

ಪಂಚಾಯಿತಿ ನೌಕರ ಸಂಘದ ತಾಲೂಕು ಮುಖಂಡ ಟಿ ಎನ್ ಆಂಜನಪ್ಪ ಮಾತನಾಡಿ, “ನಮ್ಮ ನೌಕರರು ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಿಐಟಿಯು ಸಂಘಟನೆಯಲ್ಲಿ ಸಂಘಟಿತರಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ರಾಜ್ಯದಲ್ಲಿ 11.80 ಲಕ್ಷ ಮಂದಿ ಅನಧಿಕೃತ ಪಿಂಚಣಿದಾರರು ಪತ್ತೆ: ಸಚಿವ ಕೃಷ್ಣ ಭೈರೇಗೌಡ

ಈ ಸಂದರ್ಭದಲ್ಲಿ ಹೋಬಳಿ ಮಟ್ಟದ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮುದಿ ಮಡುಗು ರೆಡ್ಡಪ್ಪ, ಕಾರ್ಯದರ್ಶಿಯಾಗಿ ಎರಮವಾರಪಲ್ಲಿ ರಾಜು ಎಸ್ ಎನ್, ಸಂಘಟನಾ ಕಾರ್ಯದರ್ಶಿಯಾಗಿ ರಾಯಲ್ಪಾಡು ರವೀಂದ್ರ, ಖಜಾಂಚಿಯಾಗಿ ಕೂರಿಗೆಪಲ್ಲಿ ಚಲಪತಿ, ಸದಸ್ಯರುಗಳಾಗಿ ಶಿವಪ್ಪ, ನಾಗರಾಜ್, ಅಶೋಕ ಸಿಎನ್, ಗಂಗೆರೆಡ್ಡಿ, ನರಸಿಂಹ ರೆಡ್ಡಿ, ರಾಮರೆಡ್ಡಿ ಟಿಜಿ, ವೆಂಕಟರಾಮರೆಡ್ಡಿ, ಕೆ ವೈ ನಾರಾಯಣಸ್ವಾಮಿ ಆಯ್ಕೆಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...