ಕೋಲಾರ | ಬೆಗ್ಲಿ ಹೊಸಹಳ್ಳಿ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ

Date:

ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಹಾಗೂ ಸವಿ ನೆನಪು ಫೌಂಡೇಶನ್ ಉದ್ಘಾಟನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

- Advertisement -

ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕಿ ಪ್ರೇಮಲತಾ ಉದ್ಘಾಟಿಸಿ, ಮೀನಾಕ್ಷಿ ಆಯೋಜನೆ ಮಾಡಿ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಪಿ ವಿ ಗಾಯತ್ರಿ ವಹಿಸಿದ್ದರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ಸಂದರ್ಭದಲ್ಲಿ ಡಿಐಜಿಪಿ ಡಿ ದೇವರಾಜ್ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಗುರುವಿಗೆ ವಿಶೇಷ ಸ್ಥಾನ ನೀಡಲಾಗಿದೆ. ಗುರು ಎಂದರೆ ಒಬ್ಬ ವ್ಯಕ್ತಿ ಅಲ್ಲ, ಗುರು ಎಂದರೆ ಒಂದು ಶಕ್ತಿ. ಒಬ್ಬ ಗುರು ಪ್ರಕೃತಿಯಲ್ಲಿರುವ ಮರ, ಗಾಳಿ, ನದಿಯಂತೆ ನಿಸ್ವಾರ್ಥಿಯಾಗಿರುತ್ತಾನೆ. ಇಡೀ ಪ್ರಕೃತಿಯೇ ಒಂದು ಗುರುವಿದ್ದಂತೆ ಅದು ನಮಗೆ ಅರಿವು ಮತ್ತು ಜಾಗೃತಿಯನ್ನು ಕಲಿಸುತ್ತದೆ. ನಿಜವಾದ ಶಿಕ್ಷಣ ಎಂದರೆ ಒಬ್ಬ ವ್ಯಕ್ತಿಯ ಮನಸ್ಸಿನ ಒಳಗಿನ ಬೆಳಕನ್ನು ಹೊರಜಗತ್ತಿಗೆ ಪರಿಚಯಿಸುವುದೇ ಅಗಿದೆ. ಅಂತಹ ಶಿಕ್ಷಣವನ್ನು ಕಲಿಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮಾಡುವ ಗುರು ಎಂದು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಮಹತ್ವವನ್ನು ತಿಳಿಸಿಕೊಟ್ಟರು. ಹಾಗೂ ಸವಿನೆನಪು ಫೌಂಡೇಶನ್ ಗೆ ಸಹಕಾರ ಮತ್ತು ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದರು,

ಬೆಗ್ಲಿ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಹಾಗೂ ಗೆಳೆಯರ ಬಳಗದ ಅಧ್ಯಕ್ಷ ಕಲ್ಲಂಡೂರು ನಾರಾಯಣಸ್ವಾಮಿ ಮಾತನಾಡಿ ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯಲ್ಲ ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗೆ ಇರುತ್ತದೆ ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ. ಆ ಮೂಲಕ ಶಾಲೆ ಹಾಗೂ ಗ್ರಾಮದ ಅಭಿವೃದ್ಧಿಯನ್ನು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಸವಿ ನೆನಪು ಫೌಂಡೇಶನ್ ವತಿಯಿಂದ ಒಟ್ಟು 5 ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು, ನಿವೃತ್ತ ಶಿಕ್ಷಕರು ಹಾಗೂ ಸವಿ ನೆನಪು ಫೌಂಡೇಶನ್ ಗೆಳೆಯರ ಬಳಗದ ಅಧ್ಯಕ್ಷ ಕಲ್ಲಂಡೂರು ನಾರಾಯಣಸ್ವಾಮಿ 50 ಸಾವಿರ, ಡಾಕ್ಟರ್ ನೇತ್ರಾವತಿ ರವರ ಪತಿ ಡಾ. ಸುಧಾಕರ್ 10 ಸಾವಿರ, ಸಹಾಯ ನೀಡಿದರು.

ನಿವೃತ್ತ ಮುಖ್ಯ ಶಿಕ್ಷಕಿ ಪ್ರೇಮಲತಾ ಮಾತನಾಡಿ ಸವಿನೆನಪು ಫೌಂಡೇಶನ್ ಉತ್ತಮವಾಗಿ ಬೆಳೆಯಲಿ, ದೊಡ್ಡ ಮಟ್ಟದ ಸಾದನೆ ಮಾಡಿ, ಗುರುಗಳ ಆಶಿರ್ವಾದ ಯಾವಾಗಲೂ ಇರುತ್ತದೆ, ನಿಮ್ಮ ಸ್ನೇಹ ಹೀಗೆ ಇರಲಿ, ಇನ್ನೂ ಒಗ್ಗಟ್ಟಿನಲ್ಲಿ ಕೆಲಸ ಮಾಡಿ ಒಳ್ಳೆಯ ದಾರಿಯಲ್ಲಿ ನಡೆಯಿರಿ ಎಂದು ಮಕ್ಕಳಿಗೆ ಹಿತ ನುಡಿಗಳನ್ನು ಹೇಳಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | 50 ಮಿಲಿಯನ್ ಸಸಿಗಳ ನೆಡುವ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ಮೊದಲ ಪೈಲಟ್ ಜಿಲ್ಲೆ

ಇದೇ ಸಂದರ್ಭದಲ್ಲಿ 2003-2004 ನೇ ಸಾಲಿನ ಶಿಕ್ಷಕರಾದ ಎಚ್.ವೆಂಕಟಸ್ವಾಮಿ, ಟಿ.ಮುನಿವೆಂಕಟಪ್ಪ, ಎಂ. ಅಕ್ಕೆಮ್ಮ, ಎನ್.ಆರ್ ನಾಗರಾಜ್, ಸಹಾಯಕಿ ಬಿ. ಲಲಿತಮ್ಮ, ಸವಿ ನೆನಪು ಫೌಂಡೇಶನ್ ಸಂಸ್ಥಾಪಕಿ ಡಾ. ನೇತ್ರಾವತಿ, ಅಧ್ಯಕ್ಷರಾದ ಎಸ್ ಕೆ ಮುನಿರಾಜು, ಉಪಾಧ್ಯಕ್ಷ ಭಾಸ್ಕರ್, ನಿರ್ದೇಶಕರಾದ ಸತೀಶ್. ಸಿ, ಮತ್ತು ರಾಜೇಶ್, ಕಾರ್ಯದರ್ಶಿ ಸುರೇಶ್ ಬಾಬು, ಉಪ ಕಾರ್ಯದರ್ಶಿ ಶಶಿಕಲಾ ಸಿ, ಖಜಾಂಚಿ ಮಂಜುನಾಥ್. ಆರ್, ಆಡಳಿತ ಕಾರ್ಯದರ್ಶಿ ಸಂತೋಷ್, ಮತ್ತು 2003-2004 ನೇ ಸಾಲಿನ ಹಳೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸವಿ ನೆನಪು ಫೌಂಡೇಶನ್ ನ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...