ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳಿಗೆ ಉತ್ತಮ ವಾತವರಣ, ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೋಂಡಾ ಕಂಪೆನಿಯು ಶಾಲೆಯ ಅಭಿವೃದ್ಧಿಗಾಗಿ ಕೈಜೋಡಿಸಿದ್ದು ಶ್ಲಾಘನೀಯವಾಗಿದೆ ಎಂದು ವಕ್ಕಲೇರಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿಯವರು ಅಭಿಪ್ರಾಯಪಟ್ಟರು.
ಕೋಲಾರ ತಾಲೂಕಿನ ನರಸಾಪುರ ಹೋಂಡಾ ಕಂಪೆನಿಯಿಂದ ವಕ್ಕಲೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಿಎಸ್‌ಆರ್ ಅನುದಾನದಲ್ಲಿ ನೋಟ್ ಬುಕ್, ಕಲಿಕಾ ಸಾಮಾಗ್ರಿ, ಹಾಗೂ ಬ್ಯಾಗ್ ವಿತರಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ನೋಟ್ ಬುಕ್, ಕಲಿಕಾ ಸಾಮಾಗ್ರಿ, ಹಾಗೂ ಬ್ಯಾಗಿನ ಸದುಪಯೋಗ ಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಮುಂದೆ ತಾವುಗಳೂ ಕೂಡ ಇಂತಹ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುವಂತಾಗಬೇಕು” ಎಂದು ಹಾರೈಸಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನ: ಪೊಲೀಸರೊಂದಿಗೆ ವಾಗ್ವಾದ
ಈ ಸಂದರ್ಭದಲ್ಲಿ ಹೋಂಡಾ ಕಂಪೆನಿಯ ಅಧಿಕಾರಿ ಮಲ್ಲಿಕಾರ್ಜುನ್, ವಕ್ಕಲೇರಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹಾಗೂ ಗ್ರಾ.ಪಂ ಸದಸ್ಯ ಬೊಟ್ಟು ರಾಜಪ್ಪ, ಮುಖ್ಯ ಶಿಕ್ಷಕ ಆರ್ ಹರಿನಾಥ್, ಮುಖಂಡ ಚಿನ್ನಾಪುರ ನಾರಾಯಣಸ್ವಾಮಿ ಸೇರಿದಂತೆ ಹೋಂಡಾ ಕಂಪೆನಿಯ ಸಿಬ್ಬಂದಿ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.