ಕೋಲಾರ | ಹಿರಿಯ ದಲಿತ ಹೋರಾಟಗಾರ ಸಿ.ಎಂ.ಮುನಿಯಪ್ಪಆತ್ಮಚರಿತ್ರೆ ‘ಕಾಲಡಿಯ ಕಣ್ಣು ಕಥನವಾಗಿ’ ಲೋಕಾರ್ಪಣೆ

Date:

ದಲಿತ ಚಳವಳಿಯ ಕಥನದ ಕಾಲಡಿಯ ಕಣ್ಣು ಕೃತಿಯನ್ನು ಕೃತಿಕಾರ ಸಿ.ಎಂ.ಮುನಿಯಪ್ಪ ಶುಕ್ರವಾರ ತಮ್ಮ ಸಂಚಿಕೆ ಕಚೇರಿಯಲ್ಲಿ ಸರಳವಾಗಿ ಲೋಕಾರ್ಪಣೆ ಮಾಡಿದರು.

- Advertisement -

ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಪತ್ರಕರ್ತ ಸಿ.ಎಂ.ಮುನಿಯಪ್ಪರ ನಾಲ್ಕು ದಶಕಗಳ ಚಳವಳಿಯ ಬದುಕು ಹಾಗೂ ಕರ್ನಾಟಕದ ದಲಿತ ಸಂಘರ್ಷ ಸಮಿತಿಯ ಚಾರಿತ್ರಿಕ ಹೋರಾಟದ ಕಥನವು ಕಗ್ಗತ್ತಲಲ್ಲಿದ್ದ ದಮನಿತ ಲೋಕದ ಒಡಲಾಳದ ಧ್ವನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಆತ್ಮ ಚರಿತ್ರೆಯ ರೂಪದಲ್ಲಿ ಅನುಭವದ ಕಥನವನ್ನು ಬರವಣಿಗೆಯ ಮೂಲಕ ದಾಖಲಿಸಲು ಮುಂದಾಗಿ ಅಂತಿಮವಾಗಿ ದಲಿತ ಚಳವಳಿಯ ಕಥನವಾಗಿ ಏಳು ಅಧ್ಯಾಯಗಳಲ್ಲಿ ಸಿ.ಎಂ.ಮುನಿಯಪ್ಪರ ಜೀವನ ಮತ್ತು ಚಳವಳಿಯ 140 ಅನುಭವದ ಪ್ರಸಂಗಗಳು 748 ಪುಟಗಳಾಗಿ ಹೊರ ಹೊಮ್ಮಿದೆ.

ಕಳೆದ 11 ವರ್ಷಗಳಿಂದಲೂ ವ್ಯಯಕ್ತಿಕ ಹಾಗೂ ಸಾಂಸ್ಕೃತಿಕವಾದ ಹಲವಾರು ಸಂಕಟ, ಸವಾಲುಗಳ ನಡುವೆ ಸರಿ ಸುಮಾರು 11 ವರ್ಷಗಳ ಕಾಲ ಪರಿಶ್ರಮ ಪಟ್ಟು ದಲಿತ ಲೋಕದ ಅನುಭವ ಕಥನಗಳನ್ನು ಬರೆದಿರುವ ಅವರು, ಕೋಲಾರ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕದ ಇತರೆ ಜಿಲ್ಲೆಗಳ ದಲಿತ ಹೋರಾಟಗಳನ್ನು ದಾಖಲೀಕರಿಸಬೇಕೆಂಬ ಹಂಬಲದಲ್ಲಿ ಬೃಹತ್‌ ಕೃತಿಯು ರೂಪುಗೊಂಡಿದೆ.

ದೊಡ್ಡ ಕಾರ್ಯಕ್ರಮದ ಮೂಲಕ ಈ ಕೃತಿಯನ್ನು ಲೋಕಾರ್ಪಣೆಗೊಳಿಸುವ ಉದ್ದೇಶ ಇತ್ತಾದರೂ, ಕೃತಿಕಾರರ ಆರೋಗ್ಯದಲ್ಲಿನ ಏರುಪೇರಿನ ಕಾರಣ ಕೃತಿಯು ಸರಳವಾಗಿ ಕೃತಿಕಾರರಿಂದಲೇ ಜುಲೈ 10 ಶುಕ್ರವಾರ ಲೋಕಾಪರ್ಣೆಗೊಂಡಿದೆ.

ಸಾಹಿತಿಗಳು, ಚಿಂತಕರು, ದಲಿತ ಸಂಘಟನೆಯ ಒಡನಾಡಿಗಳು, ಮಿತ್ರರ ಪ್ರೀತಿಯ ಕೋರಿಕೆ ಮತ್ತು ನಿರೀಕ್ಷೆಯಂತೆ ಕಾಲಡಿಯ ಕಣ್ಣು ಕೃತಿ ಓದುಗರ ಮುಂದಿದ್ದು, ರಾಜ್ಯಾದ್ಯಂತ ಪ್ರಮುಖ ಪುಸ್ತಕದ ಅಂಗಡಿಗಳಲ್ಲಿ ಶನಿವಾರದಿಂದ ಮಾರಾಟಕ್ಕೆ ಸಿಗುತ್ತದೆ.

ಮಹಾರಾಷ್ಟ್ರದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ರ ಅರಿವಿನ ಮಾರ್ಗದರ್ಶನದಲ್ಲಿ ಮೈದಳೆದಿದ್ದ ದಲಿತ ಪ್ಯಾಂಥರ್ಸ್‌ ಬಿತ್ತಿದ ಹೋರಾಟ ಕಾವು ಕರ್ನಾಟಕಕ್ಕೂ ವ್ಯಾಪಿಸಿ ದಲಿತ ಸಂಘರ್ಷ ಸಮಿತಿಯಾಗಿ ರೂಪುಗೊಂಡು ದಮನಿತ ಸಮುದಾಯಗಳಲ್ಲಿ ಅದಮ್ಯ ಸ್ವಾಭಿಮಾನ ಮೂಡಿಬಂದು, ಜೀವನ ಸುಧಾರಣೆಗೊಂಡು ಸಬಲೀಕರಣ ಸಾಧ್ಯವಾಗಿರುವ ಕರ್ನಾಟಕ ಸಾಂಸ್ಕೃತಿಕ ಚರಿತ್ರೆಗೆ ಸೇರಿದ ಸುವರ್ಣ ಅಧ್ಯಾಯಗಳನ್ನು ಕಾಲಡಿಯ ಕಣ್ಣು ಕೃತಿ ಒಳಗೊಂಡಿದೆ.

ದಲಿತ ಸಂಘರ್ಷ ಸಮಿತಿ ಒಂದು ಸಾಂಸ್ಕೃತಿಕ ಸಂಘಟನೆಯಾಗಿ ಕರ್ನಾಟಕದಲ್ಲಿ 1975 ರಿಂದ 1990 ರವರೆಗೆ ಯಾವುದೇ ರೋಗ ರುಜಿನ, ಭಿನ್ನಾಭಿಪ್ರಾಯ, ಸ್ವಾರ್ಥ, ಸ್ವಜಾತಿ ಹಾಗೂ ಉಪಜಾತಿ ಮಮಕಾರಗಳಿಲ್ಲದೆ ಆರೋಗ್ಯದಿಂದ ಉತ್ತುಂಗದಲ್ಲಿತ್ತು. ಮುಂದಿನ ತಲೆಮಾರಿಗೆ ದಸಂಸ ಚರಿತ್ರೆ ತಿಳಿಯದಿದ್ದರೆ ತುಂಬಲಾರದ ನಷ್ಟವೆಂಬ ಭಾವನೆಯಲ್ಲಿ, ದಲಿತ ಚಳವಳಿ ಆರಂಭವಾಗಿ 50 ವರ್ಷಗಳು ಕಳೆದಿರುವ ಸಂದರ್ಭದಲ್ಲಿ ಸಿಎಂ ಮುನಿಯಪ್ಪ ರ ಆತ್ಮಕಥೆಯು ದಸಂಸ ಆತ್ಮಕಥೆಯಂತೆ ಹೊರಬಂದಿದೆ.

ದಲಿತ ಚಳವಳಿಯ ಮಹಾಸಮುದ್ರದಿಂದ ಒಂದು ಬೊಗಸೆಯಷ್ಟು ನೀರನ್ನು ಮಾತ್ರವೇ ತೆಗೆದುಕೊಂಡಿರುವೆ ಎನ್ನುವ ಕೃತಿಕಾರ ಸಿಎಂ ಮುನಿಯಪ್ಪರ ಅನಿಸಿಕೆಯು ದಲಿತ ಚಳವಳಿಯ ಬೀರಿದ ಸಾಮಾಜಿಕ ಪರಿಣಾಮಗಳ ಅಗಾಧತೆಯ ಸಂಕೇತವಾಗಿದೆ.

ದಲಿತ ಚಳವಳಿಯ ಕುರಿತು ಅನೇಕ ಅಪಕಲ್ಪನೆಗಳು, ಅಪ‍ವ್ಯಾಖ್ಯಾನಗಳು ಆಗುತ್ತಿರುವ ಈ ಸಂದರ್ಭದಲ್ಲಿ ಇವುಗಳ ಹಿಂದಿನ ಸತ್ಯಾಸತ್ಯತೆಯನ್ನು ಅರಿವುದಕ್ಕೆ ಕಾಲಡಿಯ ಕಣ್ಣು ಸಹಕಾರಿಯಾಗಲಿದೆ. ದಲಿತ ಚಳವಳಿಯ ನೈಜ ಕಥನ ಇಲ್ಲಿ ದಾಖಲಾಗಿದೆ. ಹೊಸ ತಲೆ ಮಾರಿನ ಹೋರಾಟಗಾರರು ಹಾಗೂ ಬರಹಗಾರರು ಈ ಕೃತಿಯ ಮೂಲಕ ನಮ್ಮ ನೆಲದ ಗತಚರಿತ್ರೆ ಹಾಗೂ ಸಾಮಾಜಿಕ ವಾಸ್ತವಗಳನ್ನು ಅರಿತುಕೊಂಡು, ತಮ್ಮ ಅರಿವನ್ನು ಇತರರೊಂದಿಗೆ ಹಂಚಿಕೊಳ್ಳುವ ಮೂಲಕ ಸಮಾಜದಲ್ಲಿ ದ್ವೇಷರಹಿತ ಸಾಮರಸ್ಯ ಹಾಗೂ ಸದ್ವಿವೇಕಗಳು ಸದೃಢವಾಗಿ ಬೆಳೆಯುವಂತಾಗಲಿ ಎಂಬ ಆಶಯವನ್ನು ಕಾಲಡಿಯ ಕಣ್ಣು ಕೃತಿಯು ಹೊಂದಿದೆ.

ಇದನ್ನು ಓದಿದ್ದೀರಾ..?ಕೋಲಾರ | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸ್ಕೀಮ್ ನೌಕರರಿಂದ ಡಿಸಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದಲೇ ವಂಚಿತವಾಗಿದ್ದ ಸಮುದಾಯದ ಕಥನವನ್ನು ಹೊಂದಿರುವ ಕಾಲಡಿಯ ಕಣ್ಣು ಕೃತಿಯನ್ನು ಕನ್ನಡ ನಾಡು ಪ್ರೀತಿಯಿಂದ ಸ್ಪೀಕರಿಸಿ, ಮುಕ್ತ ಮನಸ್ಸಿನಿಂದ ಓದಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಜನಪರ ಚಳವಳಿ ಚೇತನಗಳಿಗೆ ಬೆಂಬಲವಾಗಿ ನಿಲ್ಲಬೇಕೆಂದು ಕೃತಿಕಾರ ಸಿ.ಎಂ.ಮುನಿಯಪ್ಪ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...