ಕೋಲಾರ |ಕೃಷಿ ಪರಿಕರ ಮಾರಾಟಗಾರರ ಮುಷ್ಕರಕ್ಕೆ ಕೆ.ಪಿ.ಆರ್.ಎಸ್ ಬೆಂಬಲ

Date:

ಡಿಎಪಿ ಹಾಗೂ ಯೂರಿಯಾ ರಸಗೊಬ್ಬರಗಳ ಜೊತೆ ಇತರೆ ರಸಗೊಬ್ಬರ ಉತ್ಪನ್ನಗಳ ಕಡ್ಡಾಯ ಖರೀದಿ ಜೋಡಣೆ ವಿರೋಧಿಸಿ ರಸಗೊಬ್ಬರ ಸರಕು ಸಾಗಾಣಿಕೆ ವೆಚ್ಚದ ಹೊಣೆಯನ್ನು ಉತ್ಪಾದಕ ಕಂಪನಿಗಳೇ ಹೊರಬೇಕು, ರಸಗೊಬ್ಬರ ಖರೀದಿಗೆ ರೈತರ ಗುರುತು ಸಂಖ್ಯೆ ಪಡೆಯಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿ ದೇಶದಾದ್ಯಂತ ಏಪ್ರಿಲ್ 27 ರಂದು ಕೃಷಿ ಪರಿಕರ ಮಾರಾಟಗಾರರು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆರ್.ಎಸ್) ಜಿಲ್ಲಾ ಸಮಿತಿಯು ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದು ಜಿಲ್ಲಾ ಅಧ್ಯಕ್ಷ ನುಕ್ಕನಹಳ್ಳಿ ಎನ್.ಎನ್ ಶ್ರೀರಾಮ್ ತಿಳಿಸಿದ್ದಾರೆ

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಸಗೊಬ್ಬರ, ಕೀಟನಾಶಕ, ಬಿತ್ತನೆ ಬೀಜ ,ಕ್ರಿಮಿನಾಶಕ ಮುಂತಾದ ಕೃಷಿ ಪರಿಕರಗಳ ಕಾಳಸಂತೆ ಮಾರಾಟ, ಕಳಪೆ ಗುಣಮಟ್ಟ ಸರಕುಗಳ ಮಾರಾಟ, ನಮೂದಾಗಿರುವ ಗರಿಷ್ಠ ಚಿಲ್ಲರೆ ದರಕ್ಕಿಂತ ಹೆಚ್ಚು ಹಣಕ್ಕೆ ಮಾರಾಟ, ತಮ್ಮ ಬೆಳೆಗೆ ಬೇಕಾದ ಕೃಷಿ ಪರಿಕರಗಳ ಜೊತೆಗೆ ಅಗತ್ಯ ಇಲ್ಲದ ಕೃಷಿ ಪರಿಕರಗಳ ಕಡ್ಡಾಯ ಖರೀದಿಗೆ ಒತ್ತಾಯ ಮುಂತಾದ ಶೋಷಣೆಗೆ, ರೈತರು ನಿರಂತರವಾಗಿ ಗುರಿಯಾಗುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕೃಷಿ ವ್ಯಾಪಾರದಲ್ಲಿ ಕೆಲವು ದೈತ್ಯ ಬಹುರಾಷ್ಟ್ರೀಯ ಕಾರ್ಪೊರೇಟ್ ಕಂಪನಿಗಳು, ಕೃಷಿ ಪರಿಕರಗಳ ಉತ್ಪಾದನೆ ಮತ್ತು ಮಾರಾಟದ ಮೇಲೆ ಏಕಸ್ವಾಮ್ಯ ಸಾಧಿಸಿರುವುದು ನಿರಂತರವಾಗಿ ರೈತರ ಮೇಲೆ ನಡೆಯುತ್ತಿರುವ ಶೋಷಣೆಗೆ ಪ್ರಧಾನ ಕಾರಣವಾಗಿದೆ.ಇಂತಹ ಏಕಸ್ವಾಮ್ಯ ಹಿಡಿತವನ್ನು ರಾಷ್ಟ್ರವ್ಯಾಪಿ ಮುಷ್ಕರದ ಮೂಲಕ ಕೃಷಿ ಪರಿಕರಗಳ ಚಿಲ್ಲರೆ ಮಾರಾಟಗಾರರು ಪ್ರಶ್ನಿಸಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘವು ಸ್ವಾಗತಿಸುತ್ತದೆ.

ಇದನ್ನು ಓದಿದ್ದೀರಾ..? ಕೋಲಾರ |ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರೋದು ಗೊತ್ತು, ನಮ್ಮನ್ನು ದೂರ ಮಾಡಿದ್ರೆ ಅಧಿಕಾರದಿಂದ ಇಳಿಸೋದು ಗೊತ್ತು

ದೇಶದ ಆಹಾರ ಭದ್ರತೆಯಲ್ಲಿ ,ಭಾರತದ ಆಹಾರ ಉತ್ಪಾದನೆಯ ಸ್ವಾವಲಂಬನೆಯಲ್ಲಿ, ಸುಧಾರಿತ ಬಿತ್ತನೆ ಬೀಜ , ರಸಗೊಬ್ಬರ,ಕೀಟನಾಶಕಗಳ ಬಳಕೆ ಅತ್ಯಮೂಲ್ಯ ಕೊಡುಗೆ ನೀಡಿರುವುದನ್ನು ಉದಾಸೀನ ಮಾಡಲಾಗದು. ಆಮೇರಿಕನ್ ಸಾಮ್ರಾಜ್ಯಶಾಹಿಯ ಯುದ್ದಕೋರ ದುರಾಕ್ರಮಣದ ಕಾರಣದಿಂದಾಗಿ ರಸಗೊಬ್ಬರ ಉತ್ಪಾದನೆ ಮತ್ತು ಲಭ್ಯತೆ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗಿದ್ದು ,ದೇಶದ ಕೃಷಿ ಉತ್ಪಾದನೆಯು ತೀವ್ರ ಕಷ್ಟಕ್ಕೆ ಸಿಲುಕಲಿದೆ. ಕೃಷಿ ಉತ್ಪಾದನೆಯಲ್ಲಿ ಆಗುವ ನಕಾರಾತ್ಮಕ ಬೆಳವಣಿಗೆ ಆಹಾರ ಭದ್ರತೆ ಮೇಲೆ ಮಾತ್ರವೇ ಅಲ್ಲದೇ ಕೈಗಾರಿಕಾ ಉತ್ಪಾದನೆ ಸೇರಿದಂತೆ ಒಟ್ಟಾರೆ ಆರ್ಥಿಕತೆಯನ್ನು ಗಂಭೀರವಾಗಿ ಬಾಧಿಸಲಿದೆ. ತಕ್ಷಣವೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಪರಿಕರಗಳ ಬೆಲೆ ಮೇಲೆ ನಿಯಂತ್ರಣ ಸಾಧಿಸಿ, ಸಕಾಲಕ್ಕೆ ಹಾಗೂ ರೈತರ ಕೈಗೆಟುಕುವ ದರಕ್ಕೆ ಸಿಗುವಂತೆ ಕ್ರಮ ವಹಿಸಬೇಕು ಎಂದು ನುಕ್ಕನಹಳ್ಳಿ ಎನ್.ಎನ್ ಶ್ರೀರಾಮ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...