ಕೋಲಾರ ಜಿಲ್ಲೆಯ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಬಾಜಾನ್ (53) ಮೃತಪಟ್ಟ ನೌಕರ.
ಮುತ್ತಕಪಲ್ಲಿ ಗ್ರಾಮದ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸದ್ಯ ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಅವರು ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಕಾರಣ ಘಟಕದಲ್ಲಿ ಬಸ್ಸುಗಳಿಗೆ ಡೀಸೆಲ್ ಭರ್ತಿ ಮಾಡುವ ಕೆಲಸ ಮಾಡುತ್ತಿದ್ದರು. ಭಾನುವಾರ ಕೂಡ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದರು.
ಅವರ ನಿವಾಸಕ್ಕೆ ಕೆಎಸ್‌ಆರ್‌ಟಿಎಸ್ ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್, ಘಟಕ ವ್ಯವಸ್ಥಾಪಕ ವೆಂಕಟೇಶ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿದ್ದು, ಕಾರ್ಮಿಕ ಕಲ್ಯಾಣ ನಿಧಿಯನ್ನು ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿ: ಕೋಲಾರ | ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ-2025ರ ತರಬೇತಿ
ಕುಟುಂಬದವರಿಗೆ ಅನುಕಂಪ ಆಧಾರದ ನೌಕರಿ ನೀಡುವ ಸಂಬಂಧ ಪರಿಶೀಲಿಸಿ, ಮೇಲಧಿಕಾರಿಗಳ ಜೊತೆ ಚರ್ಚಿಸುವುದಾಗಿ ಕೆಎಸ್‌ಆರ್‌ಟಿಸಿ ಕೋಲಾರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್ ತಿಳಿಸಿದ್ದಾರೆ.