ಕೋಲಾರ |ಕಾರ್ಪೋರೇಟ್ ಹಿಡಿತದಲ್ಲಿ ಕಾರ್ಮಿಕರ ಕಾನೂನು ಮೀನಾಕ್ಷಿ ಸುಂದರಂ ಆಕ್ರೋಶ

Date:

ಕಾರ್ಮಿಕರಿಗೆ ನೀಡುತ್ತಿದ್ದ ಕೆಲಸದ ಅವಧಿ, ಭದ್ರತೆ, ಸುರಕ್ಷತೆ, ಹಲವು ಸೌಲಭ್ಯಗಳನ್ನು ಕಾನೂನು ಬದ್ದವಾಗಿಯೇ ಕಡಿತ ಮಾಡಿರುವ ಪ್ರಧಾನಿ ಮೋದಿರವರು ಕಾರ್ಪೋರೇಟ್ ಕಂಪನಿಗಳು ಕಾರ್ಮಿಕರನ್ನು ದುಡಿಮೆಯನ್ನು ಲೂಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಿಐಟಿಯು ರಾಜ್ಯಾಧ್ಯಕ್ಷ ಮೀನಾಕ್ಷಿಸುಂದರಂ ಆಕ್ರೋಷ ವ್ಯಕ್ತಪಡಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಹಿರಿಯರು ನಡೆಸಿದ ಸಮರಧೀರ ಹೋರಾಟಗಳಿಂದ ಹತ್ತಾರು ಕಾರ್ಮಿಕ ಕಾಯ್ದೆಗಳು ಜಾರಿಯಾಗಿ, ಇಲ್ಲಿಯ ತನಕ ಕಾರ್ಮಿಕರಿಗೆ ಹಲವು ಸೌಲಭ್ಯಗಳು ದೊರೆಯುತ್ತಿದ್ದವು. ಇವುಗಳನ್ನು ಮೋದಿರವರು ಪ್ರಧಾನಿಯಾದ ನಂತರ ಸೌಲಭ್ಯಗಳನ್ನು ಹೆಚ್ಚು ಮಾಡಲಾಗುತ್ತಿದೆ ಎಂದು ಸುಳ್ಳು ಹೇಳಿ ಈ ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಿ, ಕಾರ್ಮಿಕರಿಗೆ ದ್ರೋಹ ಬಗೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೆಲಸದ ಅವಧಿಯನ್ನು ಹೆಚ್ಚು ಮಾಡಲು ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ, ಊಟದ ಸಮಯವನ್ನು ಹೊರತುಪಡಿಸಿ 8 ಗಂಟೆಗೆ ದುಡಿಯಬೇಕು, ಕಾರ್ಮಿಕರು ಸಂಘವನ್ನು ರಚಿಸಿಕೊಳ್ಳಲು ಇರುವ ಸಂವಿಧಾನ ಬದ್ದ ಹಕ್ಕನ್ನು ಕಠಿಣಗೊಳಿಸಲಾಗಿದೆ, ಹೆಚ್ಚುವರಿ ಕೆಲಸ ಮಾಡಿದರೆ ಓಟಿ ಇಲ್ಲ, ಸಣ್ಣ ಪುಟ್ಟ ಕಾರಣಗಳನ್ನು ಮುಂದು ಮಾಡಿ ಕಾರ್ಮಿಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಕನಿಷ್ಠ ವೇತನ ನಿಗದಿಪಡಿಸಲು ಇಲ್ಲಿಯ ತನಕ ಇದ್ದ ಮಾನದಂಡಗಳನ್ನು ಕೈಬಿಟ್ಟು, ಯಾವುದೇ ಚರ್ಚೆ ನಡೆಸದೇ ಸರ್ಕಾರವೇ ಏಕಪಕ್ಷೀಯವಾಗಿ ಕನಿಷ್ಠ ವೇತನ ನಿಗದಿಪಡಿಸಲು ಅವಕಾಶ ನೀಡಲಾಗಿದೆ ಎಂದು ಟೀಕಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಿ.ಎನ್.ಮಂಜುನಾಥ್ ಮಾತನಾಡಿ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು, ಬಿಜೆಪಿಯ ಕಾರ್ಮಿಕ ವಿರೋಧಿ ನೀತಿಗಳನ್ನೇ ರಾಜ್ಯದಲ್ಲಿ ಜಾರಿಗೊಳಿಸುತ್ತಿದ್ದಾರೆ. ಇದರಿಂದ ಕಾರ್ಮಿಕರು ಕಡಿಮೆ ವೇತನಕ್ಕೆ ಹೆಚ್ಚಿನ ಕೆಲಸ ಮಾಡುವ ಪರಿಸ್ಥಿತಿ ಇದೆ. 9 ವರ್ಷ ಕಳೆದರೂ ರಾಜ್ಯದಲ್ಲಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿಲ್ಲ. ಈ ಕುರಿತು ಮೇ 30 ರಂದು ರಾಜ್ಯಾದ್ಯಾಂತ ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿಗಳ ಮುತ್ತಿಗೆ ಹಾಕಲಾಗುತ್ತಿದ್ದು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ಕೋಲಾರ| ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಗರದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್‌ ವಹಿಸಿದ್ದರು, ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಸಂಘಟನಾ ಕಾರ್ಯ ಯೋಜನೆಯನ್ನು ಮಂಡಿಸಿದರು. ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎ.ಆರ್.ಬಾಬು, ಆಂಜಲಮ್ಮ ಉಪಸ್ಥಿತರಿದ್ದರು, ಎಂ.ಭೀಮರಾಜ್ ಸ್ವಾಗತಿಸಿದರು. ಹೆಚ್.ಬಿ.ಕೃಷ್ಣಪ್ಪ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...