ಮಳೆ ಆಶ್ರಯದಲ್ಲಿ ಬೆಳೆಯುವ ಬೆಳೆಗಳು ಮಳೆ ಕೊರತೆಯಿಂದಾಗಿ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮುಖ್ಯ ಆಹಾರ ಬೆಳೆ ರಾಗಿ ಬಿತ್ತನೆ ಮಾಡಿದ್ದು, ಬೆಳೆ ಹಲವು ಹಂತದಲ್ಲಿದೆ. ಕೆಲವು ಕಡೆ ಬೆಳೆ ತೆನೆಗಟ್ಟುತ್ತಿದ್ದರೆ, ಇನ್ನೂ ಕೆಲವು ಕಡೆ ತೆನೆ ಹೊರಡುವ ಹಂತದಲ್ಲಿದೆ. ತಡವಾಗಿ ಬಿತ್ತನೆ ಮಾಡಿರುವ ಕಡೆ ಪೈರು ಹಂತದಲ್ಲಿ ಮಳೆ ಇಲ್ಲದೆ ಬೆಳೆ ಒಣಗುತ್ತಿದೆ.
ತಾಲ್ಲೂಕಿನಲ್ಲಿ ನೆಲಗಡಲೆ, ತೊಗರಿ, ಅವರೆ, ಅಲಸಂದೆ ಸೇರಿದಂತೆ ಮತ್ತಿತರ ಬೆಳೆಗಳ ಪರಿಸ್ಥಿತಿಯೂ ಅದೇ ಆಗಿದೆ. ಮಳೆ ಕೊರತೆಯಿಂದಾಗಿ ಬೆಳೆ ಒಣಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳಕ್ಕೆ ನಿರಾಕರಣೆ; ಅಂಗಡಿ ಪರವಾನಗಿ ರದ್ದತಿಗೆ ಆಗ್ರಹ
ನೆಲಗಡಲೆ ಕಾಯಿ ಕಟ್ಟುವ ಹಂತದಲ್ಲಿದೆ. ಮಳೆ ವಿಳಂಬದಿಂದ ಬೆಳೆಗೆ ಮಾರಕವಾಗಿ ಪರಿಣಮಿಸಿದೆ. ಈಗ ಮಳೆ ಬರದಿದ್ದರೆ ಕಾಯಿ ಬೀಜ ಕಟ್ಟುವುದಿಲ್ಲ ಎಂಬುದು ರೈತರ ಅಳಲಾಗಿದೆ. ಬೆಳೆ ಉಳಿಸಿಕೊಳ್ಳಲು ಕೆಲವು ರೈತರು ಟ್ಯಾಂಕರ್ ಮೂಲಕ ಹಾಗೂ ಬೋರ್‌ವೆಲ್ ಮೂಲಕ ಕೊಲಗಳಿಗೆ ನೀರು ಹಾಯಿಸುತ್ತಿದ್ದಾರೆ.