ಕೋಲಾರ | ಭೂ ಸಂತ್ರಸ್ತರ ಹೋರಾಟ ಸಮಿತಿ, ಪ್ರಾಂತ ರೈತ ಸಂಘ ಹಾಗೂ ರೈತರಿಂದ ಅನಿರ್ದಿಷ್ಟಾವಧಿ ಧರಣಿ

Date:

ಅರಣ್ಯ ಇಲಾಖೆಯಿಂದ ಕಂದಾಯ ಭೂಮಿ ೧೮೦ ಎಕರೆ ಜೊತೆಗೆ ರೈತರ ಹಿಡುವಳಿ ಜಮೀನು ೨೦೦ ಎಕರೆ ನಾಶ ಮಾಡಿದ್ದಾರೆ ಎಂದು ಜಂಟಿ ಸರ್ವೆಯಲ್ಲಿ ಸಾಬೀತಾಗಿದ್ದು ಕೂಡಲೇ ತಹಶಿಲ್ದಾರ್ ನಕ್ಷೆಗೆ ಸಹಿ ಮಾಡಿ ರೈತರಿಗೆ ಮತ್ತು ಅರಣ್ಯ ಇಲಾಖೆಗೆ ನೀಡುವಂತೆ ಒತ್ತಾಯಿಸಿ ಭೂ ಸಂತ್ರಸ್ತರ ಹೋರಾಟ ಸಮಿತಿ, ಪ್ರಾಂತ ರೈತ ಸಂಘ ಹಾಗೂ ರೈತರು ಶುಕ್ರವಾರ ತಹಶಿಲ್ದಾರ್ ಕಛೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

- Advertisement -

ಭೂ ಸಂತ್ರಸ್ತರ ಹೋರಾಟ ಸಮಿತಿ ಸಂಚಾಲಕ ಆರ್ ಶ್ರೀನಿವಾಸನ್ ಮಾತನಾಡಿ ಕೋಲಾರ ತಾಲೂಕು ಹುತ್ತೂರು ಹೋಬಳಿ ಶಿಳ್ಳೆಂಗೆರೆ, ಹರಟಿ, ಮಲ್ಲಂಡಹಳ್ಳಿ, ಕೋಟಿಗಾನಹಳ್ಳಿ, ಅಬ್ಬಣಿ, ಹಾಗೂ ಹರಳಕುಂಟೆ ಜಮೀನುಗಳ ಕಂದಾಯ ದಾಖಲೆಗಳನ್ನು ಮತ್ತು ಅರಣ್ಯ ಇಲಾಖೆಯ ೧೯೪೧ ಫಾರೆಸ್ಟ್ ಸೆಟಲ್ಮೆಂಟ್ ಕಾಫಿಯನ್ನು ಪರಿಶೀಲಿಸದೆ ಅಂದಿನ ಭೂ ದಾಖಲೆಗಳ ಸರ್ವೆಯರ್ ಸಂದೀಪ್ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ೧೦೦ ವರ್ಷದ ಹಿಂದಿನ ದಾಖಲೆಗಳನ್ನು ಮರೆಮಾಚಿ ರೈತರಿಗೆ ನೀಡಿದಂತಹ ಕಂದಾಯ ಭೂಮಿಯಲ್ಲಿ ಬೆಳೆಗಳನ್ನು, ಪಾಲಿ ಹೌಸ್ ಕಾಂಪೌಂಡ್ ಮರಗಳನ್ನು ಕಳೆದ ವರ್ಷ ಮಾರ್ಚ್ ನಲ್ಲಿ ಮೂರು ದಿನಗಳ ಕಾಲ ಸುಮಾರು ೧೦ ರಿಂದ ೧೫ ಜೆಸಿಬಿಗಳೊಂದಿಗೆ ಅರಣ್ಯ ಒತ್ತುವರಿಯ ಹೆಸರಿನಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳ ಬೆಂಗಾಲಿನಲ್ಲಿ ನಾಶ ಮಾಡಿ ರೈತರಿಗೆ ತೊಂದರೆ ಕೊಟ್ಟಿದ್ದಾರೆ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಅರಣ್ಯ ಇಲಾಖೆಯ ದೌರ್ಜನ್ಯ ವಿರುದ್ದ ರೈತರು ನ್ಯಾಯಾಲಯಕ್ಕೆ ಹೋಗಿದ್ದು ಅದರಂತೆ ಜಂಟಿ ಸರ್ವೆ ಮಾಡಲು ಆದೇಶಿಸಿದ್ದಾರೆ, ಜಿಲ್ಲಾಧಿಕಾರಿ ಜಿಲ್ಲಾ ಉಸ್ತುವಾರಿ ಸಚಿವರು ಜನಪ್ರತಿನಿಧಿಗಳು ಜಂಟಿ ಸರ್ವೆ ಮಾಡಿ ರೈತರ ಹಿಡುವಳಿ ಜಮೀನುಗಳು ಯಾವುದು ಅರಣ್ಯ ಭೂಮಿ ಯಾವುದು ಎಂಬುದನ್ನು ಸ್ಪಷ್ಟವಾಗಿ ನಕ್ಷೆ ತಯಾರಿಸಿ ಎಂದು ತಹಶಿಲ್ದಾರ್ ರವರಿಗೆ ಆದೇಶಿಸಿದ್ದು ಅದರಂತೆ ತಹಶೀಲ್ದಾರ್ ತಾಲ್ಲೂಕು ಭೂ ಮಾಪನ ಅಧಿಕಾರಿಗಳು ಕಳೆದ ವರ್ಷ ಆಗಸ್ಟ್ ನಲ್ಲಿ ಮರು ಜಂಟಿ ಅಳತೆ ಮಾಡಲು ಕಂದಾಯ ಇಲಾಖೆಯೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತರು ಭಾಗವಹಿಸಲು ಆದೇಶ ಮಾಡಿದ್ದರು ಎಂದು ವಿವರಿಸಿದರು.

ಕಿರು ಅರಣ್ಯ ಪ್ರದೇಶವನ್ನು ರಾಜ್ಯ ಅರಣ್ಯವನ್ನಾಗಿ ಅಂದಿನ ಮಹಾರಾಜರ ಕಾಲದಲ್ಲಿಯೇ ೧೯೪೧ರಲ್ಲಿ ಫೈನಲ್ ಸೆಟಲ್ಮೆಂಟ್ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ದಾಖಲೆಗಳು ಇವೆ. ಈ ಸಂಬಂಧ ಅನೇಕ ಬಾರಿ ಇಲಾಖೆಯಲ್ಲಿ ಇರುವುದರಿಂದ ಕೋಲಾರ ಜಿಲ್ಲೆಯಲ್ಲಿ ಅರಣ್ಯ ಭೂಮಿಯನ್ನು ರೈತರಿಗೆ ಕಂದಾಯ ಇಲಾಖೆ ನೀಡಿರುವುದಿಲ್ಲ. ಆದ್ದರಿಂದಲೇ ಈ ಭೂಮಿಗಳು ಯಾವುದೇ ಎಸ್.ಐ.ಟಿ. ವ್ಯಾಪ್ತಿಗೆ ಒಳಪಡುವುದಿಲ್ಲ ಅರಣ್ಯ ಇಲಾಖೆಯವರು ಅನಾವಶ್ಯಕವಾಗಿ ಕಿರು ಅರಣ್ಯ ಪ್ರದೇಶಗಳು ಇವೆ ಎಂದು ಬಾಯಿ ಮಾತಿನಲ್ಲಿ ಹೇಳುತ್ತಿದ್ದಾರೆ. ಅದಕ್ಕೆ ಸಂಬಂಧಪಟ್ಟಂತಹ ಸರಿಯಾದ ದಾಖಲೆಗಳು ಇರುವುದಿಲ್ಲ ಎಂಬುದಕ್ಕೆ ಅಬ್ಬಣಿ ಕಿರು ಅರಣ್ಯವೇ ಸಾಕ್ಷಿಯಾಗಿದೆ ಎಂದರು.

ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೆ ಒಳಗಾದ ರೈತರು ಹೋರಾಟ ಮಾಡಿ, ಜಿಲ್ಲಾಧಿಕಾರಿಗಳನ್ನು ಮತ್ತು ಕಂದಾಯ ಇಲಾಖಾ ಅಧಿಕಾರಿಗಳನ್ನು ಭೇಟಿ ಮಾಡಿ ಜಂಟಿ ಸರ್ವೆಯ ನಕ್ಷೆಯನ್ನು ನೀಡುವಂತೆ ಈ ಹಿಂದೆ ತಾಲೂಕು ಕಚೇರಿ ಮುಂದೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭೂಸಂತ್ರಸ್ತರ ಹೋರಾಟ ಸಮಿತಿಯ ಸದಸ್ಯರು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಸತ್ಯಾಗ್ರಹವನ್ನು ಮಾಡಿದ್ದು, ಇದುವರೆಗೂ ಜಂಟಿ ಸರ್ವೆ ನಕ್ಷೆ ನೀಡಿರುವುದಿಲ್ಲ. ತಾಲ್ಲೂಕು ತಹಶೀಲ್ದಾರ್ ರವರು ಜಂಟಿ ಸರ್ವೆ ನಕ್ಷೆಗೆ ಸಹಿ ಮಾಡಿ ನೀಡುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಚಿಂತಾಮಣಿ | ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಭೂ ಸಂತ್ರಸ್ತರ ಹೋರಾಟ ಸಮಿತಿಯ ಸಂಚಾಲಕ ಸಿಪಿಎಂ ಗೋಪಾಲ್, ಹರಟಿ ಪ್ರಕಾಶ್, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ ಆರ್ ಸೂರ್ಯನಾರಾಯಣ ಜಿಲ್ಲಾಧ್ಯಕ್ಷ ಎನ್.ಎನ್ ಶ್ರೀರಾಮ್ ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ಕಾರ್ಯದರ್ಶಿ ನಾರಾಯಣರೆಡ್ಡಿ, ಜಿಲ್ಲಾ ಮುಖಂಡರಾದ ಶ್ರೀಧರ್, ಸೋಮಶೇಖರ್ ಗೌಡ, ಚಿನ್ನಮ್ಮ, ಬಿ.ಜಿ ಆನಂದ್, ವೆಂಕಟರಮಣಪ್ಪ ಭಟ್ರಹಳ್ಳಿ ಮಂಜುನಾಥ್, ಶ್ರೀನಿವಾಸ್ ಸೇರಿದಂತೆ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನ. 16ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್...

ಉಡುಪಿ | ನೇಜಾರು ನಾಲ್ವರ ಹತ್ಯೆ ಪ್ರಕರಣಕ್ಕೆ ಮೂರು ವರ್ಷ: ನ್ಯಾಯದ ನಿರೀಕ್ಷೆಯಲ್ಲಿ ಸಂತ್ರಸ್ತ ಕುಟುಂಬ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದ...

ಕೋಲಾರ | ಜನರ ಕೆಲಸಗಳಿಗೆ ಅಧಿಕಾರಿಗಳು ಅಲೆದಾಡಿಸಬೇಡಿ, ನಿರ್ಲಕ್ಷ್ಯ ಸಹಿಸುವುದಿಲ್ಲ: ಕೊತ್ತೂರು ಮಂಜುನಾಥ್ ಎಚ್ಚರಿಕೆ

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಕರ್ತವ್ಯ. ಜನರನ್ನು ಕಚೇರಿಯಿಂದ...

ಬಾಗಲಕೋಟೆ |ವಿದ್ಯಾರ್ಥಿನಿಯರ ಪ್ರತಿಭೆಗೆ ವೇದಿಕೆಯಾದ ‘ಸೃಜನ-2026’ ಮಹಿಳಾ ಸಂಭ್ರಮ

ವಿದ್ಯಾರ್ಥಿನಿಯರಲ್ಲಿನ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ...