ಕೋಲಾರ| ಕ್ರೀಡೆ ಮಕ್ಕಳ ಭವಿಷ್ಯದ ಅವಿಭಾಜ್ಯ ಅಂಗವಾಗಲಿ: ಸಿಎಂಆರ್ ಶ್ರೀನಾಥ್

Date:

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದಷ್ಟೇ ಕ್ರೀಡೆಗೂ ಪೋಷಕರು ಆದ್ಯತೆ ನೀಡಬೇಕು. ಕ್ರೀಡೆ ಕೇವಲ ಮನರಂಜನೆ ಅಥವಾ ಆಟವಲ್ಲ, ಅದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಮಹತ್ವದ ಸಾಧನವಾಗಿದೆ ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಹೇಳಿದರು.

- Advertisement -

ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಯಂಗ್ ಸ್ಟಾರ್ ಸ್ಪೋರ್ಟ್ಸ್ ಪ್ರಮೋಟರ್ಸ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ 2ನೇ ವರ್ಷದ ಬೆಂಗಳೂರು ವಿಭಾಗ ಮಟ್ಟದ ಶಾಲಾ ಒಲಿಂಪಿಕ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಕೋಲಾರ ಜಿಲ್ಲೆಯಲ್ಲಿ ಮಕ್ಕಳನ್ನು ಕ್ರೀಡಾಕೂಟಗಳಿಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿರುವುದು ಕಂಡುಬರುತ್ತಿದೆ. ಮಕ್ಕಳ ಭವಿಷ್ಯ ಕೇವಲ ಅಂಕಗಳಿಗೆ ಸೀಮಿತವಾಗಬಾರದು. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದಾಗ ಕುಟುಂಬ ಮತ್ತು ಶಾಲೆಯವರು ಸಂತೋಷಪಡುತ್ತಾರೆ. ಆದರೆ ಕ್ರೀಡೆಯಲ್ಲಿ ಸಾಧನೆ ಮಾಡಿದರೆ ಇಡೀ ಜಿಲ್ಲೆ, ರಾಜ್ಯ ಹಾಗೂ ದೇಶವೇ ಹೆಮ್ಮೆ ಪಡುವಂತಾಗುತ್ತದೆ. ಆದ್ದರಿಂದ ಪೋಷಕರು ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಆದರೆ ಸ್ಪರ್ಧೆಯಲ್ಲಿ ಭಾಗವಹಿಸುವ ಮನೋಭಾವ ಅತ್ಯಂತ ಮುಖ್ಯ. ಕ್ರೀಡೆ ಮಕ್ಕಳಲ್ಲಿ ಸಮಯಪ್ರಜ್ಞೆ, ಶಿಸ್ತು, ತಾಳ್ಮೆ, ಪರಸ್ಪರ ಸಹಕಾರ ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸುತ್ತದೆ. ಇಂದಿನ ಮಕ್ಕಳು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವುದರೊಂದಿಗೆ ದೇಶದ ಕೀರ್ತಿ ಹೆಚ್ಚಿಸುವ ಕ್ರೀಡಾಪಟುಗಳಾಗಿ ಬೆಳೆಯಬೇಕು ಎಂದು ಆಶಿಸಿದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಮಾತ್ರವಲ್ಲದೆ ವಿವಿಧ ಕ್ರೀಡೆಗಳಿಗೂ ಉತ್ತೇಜನ ದೊರೆಯುತ್ತಿದೆ. ಯುಕೆಜಿ ಹಂತದಿಂದಲೇ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿದರೆ ಉತ್ತಮ ಕ್ರೀಡಾಪಟುಗಳನ್ನು ರೂಪಿಸಲು ಸಾಧ್ಯ. ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಕ್ರೀಡಾಕೂಟದ ಆಯೋಜಕ ರಮೇಶ್, ರವಿ ವಿದ್ಯಾಸಂಸ್ಥೆ ಹಾಗೂ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಜಿ. ನರೇಶ್ ಬಾಬು ಹಿರಿಯ ಮುಖಂಡ ಎಚ್.ಆರ್. ವೇಣು, ವೆಂಕಟೇಶ್ವರ ವಿದ್ಯಾಸಂಸ್ಥೆಯ ಸುಧಾಕರ್, ರಾಜೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕನ್ನಡ ಶಾಲೆ ಉಳಿಸುವ ಸಂಕಲ್ಪ ಮಾಡಿ: ಬರಗೂರು ರಾಮಚಂದ್ರಪ್ಪ

ಕನ್ನಡ ಶಾಲೆಗಳು ತಾವಾಗಿಯೇ ಮುಚ್ಚಿದರೆ ಅದು ಆತ್ಮಹತ್ಯೆ; ಸರ್ಕಾರವೇ ಮುಚ್ಚಿದರೆ ಹತ್ಯೆಯಾಗುತ್ತದೆ....

ಎಸ್‌ಡಿಎಂಸಿ ಸಂಘದ ಹೋರಾಟಕ್ಕೆ ಫಲ: 45 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 45 ಸಾವಿರಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ...

ಉತ್ತರ ಕನ್ನಡ | ಡಿ. 1ರಿಂದ ಎಫ್‌ಎಫ್‌ಎಸ್ ಮೂಲಕ ರಸಗೊಬ್ಬರ ಮುಂಗಡ ಬುಕ್ಕಿಂಗ್ ಕಡ್ಡಾಯ

ರೈತರು ತಮಗೆ ಅಗತ್ಯವಿರುವ ರಸಗೊಬ್ಬರವನ್ನು ಮೊಬೈಲ್ ಮೂಲಕವೇ ಮುಂಗಡವಾಗಿ ಬುಕ್ಕಿಂಗ್‌ ಮಾಡಿ,...

ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ರವಿ ಹಂಚ್ ವಿರುದ್ಧ ಕ್ರಮಕ್ಕೆ ಆಗ್ರಹ

ವಿಶ್ವಗುರು ಬಸವಣ್ಣನವರ ಕುರಿತು ಬಸವ ಮಂಟಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅನಿವಾಸಿ...