ಕೋಲಾರ | ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಕೆ ಕಡ್ಡಾಯ ಅಭಿಯಾನ : ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಮಂಜುಳಾ

Date:

ಕೃಷಿ ಚಟುವಟಿಕೆ ಕಾರ್ಯಗಳಿಗೆ ಕೃಷಿ ಇಲಾಖೆ ಯೋಜನೆಯಲ್ಲಿ ನಿರ್ಮಿಸಿಕೊಂಡಿರುವ ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಕೆ ಕಾರ್ಯ ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಮಂಜುಳಾ ಹೇಳಿದರು.

ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೋಲಾರ ಜಿಲ್ಲೆಯಾಧ್ಯಂತ ಸುಮಾರು 1,472 ಕೃಷಿ ಹೊಂಡಗಳು ನಿರ್ಮಾಣಗೊಂಡಿದ್ದು, ಅದರಲ್ಲಿ 1,121 ಕೃಷಿ ಹೊಂಡಗಳಿಗೆ ಈಗಾಗಲೇ ಬೇಲಿ ಅಳವಡಿಸಲಾಗಿದೆ ಎಂದರು.
ಇನ್ನೂ 55 ಕೃಷಿ ಹೊಂಡಗಳಲ್ಲಿ ಬೇಲಿ ಹಾಕುವ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇದರೊಂದಿಗೆ ಜಿಲ್ಲೆಯ ಬಹುತೇಕ ಕೃಷಿ ಹೊಂಡಗಳು ಸುರಕ್ಷತಾ ಬೇಲಿಯಿಂದ ಸಂರಕ್ಷಿತವಾಗಿವೆ ಎಂದು ತಿಳಿಸಿದರು.

ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ನಿರ್ಮಿಸಿರುವ ಎಲ್ಲಾ ಕೃಷಿ ಹೊಂಡಗಳಿಗೆ ಭೇಟಿ ನೀಡಿ, ರೈತರಲ್ಲಿ ಬೇಲಿ ಅಳವಡಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಉಳಿದಿರುವ ಕೃಷಿ ಹೊಂಡಗಳಿಗೂ ಶೀಘ್ರವಾಗಿ ಬೇಲಿ ನಿರ್ಮಿಸಿಕೊಳ್ಳುವಂತೆ ಪ್ರೇರೇಪಿಸಲಾಗುತ್ತಿದೆ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಸುಳ್ಳು ಹೇಳುವವರ ಬಾಯಿ ಲೌಡ್ ಸ್ಪೀಕರ್ ಆಗಿದೆ, ಸತ್ಯ ಹೇಳುವವರ ಬಾಯಿಗೆ ಲಕ್ವಾ ಹೊಡೆದಿದೆ : ರಮೇಶ್ ಕುಮಾರ್

ಕೃಷಿ ಇಲಾಖೆಯ ಯೋಜನೆಗಳಡಿ ಹಾಗೂ ವೈಯಕ್ತಿಕವಾಗಿ ನಿರ್ಮಿಸಿರುವ ಎಲ್ಲಾ ಕೃಷಿ ಹೊಂಡಗಳು,ನೀರು ಸಂಗ್ರಹಣಾ ತೊಟ್ಟಿಗಳು ಹಾಗೂ ಇನ್ನಿತರೆ ನೀರು ಸಂಗ್ರಹಣಾ ಸ್ಥಳಗಳ ಸುತ್ತ ಬೇಲಿ ಅಳವಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು.
ಮಾನವ ಜೀವ ಅತ್ಯಮೂಲ್ಯ. ಕೃಷಿ ಹೊಂಡಗಳಲ್ಲಿ ಸಂಭವಿಸಬಹುದಾದ ಅನಾಹುತಗಳು ಹಾಗೂ ಅನಗತ್ಯ ಸಾವು-ನೋವುಗಳನ್ನು ತಡೆಗಟ್ಟಲು ಪ್ರತಿಯೊಬ್ಬ ಕೃಷಿ ಹೊಂಡ ಮಾಲೀಕರೂ ಕಡ್ಡಾಯವಾಗಿ ಸುರಕ್ಷತಾ ಬೇಲಿಯನ್ನು ಅಳವಡಿಸಬೇಕು. ಮಕ್ಕಳ, ಸಾರ್ವಜನಿಕರ ಹಾಗೂ ಜಾನುವಾರುಗಳ ಸುರಕ್ಷತೆಯ ದೃಷ್ಟಿಯಿಂದ ಇದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಕೃಷಿ ಹೊಂಡಗಳ ಸುತ್ತ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಗ್ರಾಮೀಣ ಪರಿಸರ ನಿರ್ಮಾಣಕ್ಕೆ ರೈತರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೃಷಿ ಇಲಾಖೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...