ಕೋಲಾರ | ಕಾನೂನು ಕಾಲೇಜನ್ನು ಮಾದರಿ ಶಿಕ್ಷಣ ಸಂಸ್ಥೆಯಾಗಿ ಅಭಿವೃದ್ಧಿಪಡಿಸಲು ಕ್ರಮ: ಕೊತ್ತೂರು ಮಂಜುನಾಥ್

Date:

ನಗರದ ಹೊರವಲಯದ ಅರಹಳ್ಳಿ ಬಳಿಯ ಸರ್ಕಾರಿ ಕಾನೂನು ಕಾಲೇಜನ್ನು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸುವ ಉದ್ದೇಶದಿಂದ ಹಂತ ಹಂತವಾಗಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

- Advertisement -

ಸರ್ಕಾರಿ ಕಾನೂನು ಕಾಲೇಜು ಆವರಣದಲ್ಲಿ ₹6.8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡವನ್ನು ಶನಿವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಕಾಲೇಜಿಗೆ ಹಸ್ತಾಂತರಿಸಿ ಮಾತನಾಡಿದ ಅವರು ಕಾಲೇಜಿನ ಕಟ್ಟಡದ ಗುಣಮಟ್ಟ, ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣ, ಮೂಲಸೌಕರ್ಯ ಹಾಗೂ ಆವರಣದ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ ಈ ಹೊಸ ಕಟ್ಟಡ ಜೊತೆಗೆ ಹೆಚ್ಚುವರಿಯಾಗಿ ₹2.50 ಕೋಟಿ ವೆಚ್ಚದಲ್ಲಿ ಮತ್ತೊಂದು ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಹಳೆಯ ಕಟ್ಟಡಕ್ಕೆ ಸುಮಾರು ₹5 ಲಕ್ಷ ವೆಚ್ಚದಲ್ಲಿ ದುರಸ್ತಿ ಹಾಗೂ ಸುಣ್ಣಬಣ್ಣ ಮಾಡಿಸಿ ನವೀಕರಿಸುವುದರ ಜೊತೆಗೆ ಕಾಲೇಜಿನ ಸುತ್ತಮುತ್ತ ಸ್ವಚ್ಛತೆ, ಕಾಂಕ್ರೀಟ್ ರಸ್ತೆ, ಆಟದ ಮೈದಾನ ನಿರ್ಮಾಣಕ್ಕೂ ಕ್ರಮ ಕೈಗೊಂಡು ಕಾನೂನು ಕಾಲೇಜಿನಲ್ಲಿ ಮೂರು ವರ್ಷದ ಎಲ್‌ಎಲ್‌ಬಿ ಹಾಗೂ ಎರಡು ವರ್ಷದ ಎಲ್‌ಎಲ್‌ಎಂ ಕೋರ್ಸ್‌ಗಳನ್ನು ಆರಂಭಿಸಲು ಕ್ರಮ ವಹಿಸಲಾಗುತ್ತಿದೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಾನೂನು ಶಿಕ್ಷಣ ದೊರೆಯುವಂತೆ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕಾಲೇಜು ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಹಸಿರು ಪರಿಸರ ನಿರ್ಮಿಸುವಂತೆ ಸೂಚಿಸಿದರು.

ಹಿಂದಿನ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಕೋಲಾರ ಕ್ಷೇತ್ರದ ಕಾಲೇಜುಗಳ ಅಭಿವೃದ್ಧಿಗೆ ₹100 ಕೋಟಿ ಅನುದಾನ ನೀಡಿದ್ದರು. ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವಷ್ಟು ಅನುದಾನ ಒದಗಿಸಲು ಸಿದ್ಧರಿದ್ದರಿಂದ ಅಷ್ಟು ಅನುದಾನ ಕೊಡಲು ಸಾಧ್ಯವಾಗಿತ್ತು, ಈಗಾಗಲೇ ₹150 ಕೋಟಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದರೆ ಆರು ತಿಂಗಳೊಳಗೆ ಉದ್ದೇಶಿತ ಕಾಮಗಾರಿಗಳನ್ನು ಗುರುತಿಸಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು

ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು, ಶಾಲೆಗಳ ದುರಸ್ತಿ, ಕಾಂಪೌಂಡ್ ನಿರ್ಮಾಣ ಹಾಗೂ ಸುಣ್ಣಬಣ್ಣದಂತಹ ಮೂಲಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ ಒದಗಿಸುವ ಮೂಲಕ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಲಾಗುವುದು ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಕಾನೂನು ಕಾಲೇಜು ಪ್ರಾಂಶುಪಾಲ ಅಂಬೇಡ್ಕರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಎಇಇ ಗೋವಿಂದಪ್ಪ , ಗುತ್ತಿಗೆದಾರ ಚಂದ್ರು ಸೇರಿದಂತೆ ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಜ. 20ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ; ಆಕ್ಷೇಪಣಾ ಅರ್ಜಿ ಸಲ್ಲಿಕೆಗೆ ಡಿ. 31 ಕೊನೆಯ ದಿನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ...

ಬಾಗಲಕೋಟೆ |ರೈತರನ್ನು ಸಬಲರನ್ನಾಗಿಸಿದಾಗ ತೋಟಗಾರಿಕೆ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕ;ಆರ್. ಗಿರೀಶ್

ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ, ತೋಟಗಾರಿಕೆಯಲ್ಲಿ ಯುವಕರಿಗೆ ಉದ್ಯಮಶೀಲತೆಯ ಅವಕಾಶ ಕಲ್ಪಿಸಿದಾಗ ಮಾತ್ರ...

ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ...

ಬಾಗೇಪಲ್ಲಿ | ಪ್ರಜಾ ಸೇವಾ ಆಂದೋಲನ ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ವೇದಿಕೆ : ತಹಶೀಲ್ದಾರ್ ಮನೀಷಾ

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜೊತೆಗೆ,...