ಕೋಲಾರ | ರಸ್ತೆ ಅಭಿವೃದ್ಧಿಗೆ ಶಾಸಕರಿಂದ 80 ಲಕ್ಷ ಅನುದಾನ: ಶೀಘ್ರದಲ್ಲೇ ಗುದ್ದಲಿ ಪೂಜೆ

Date:

ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಹಾಗೂ ದುರಸ್ತಿ ಕಾಮಗಾರಿಗಳಿಗೆ 80 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ.

- Advertisement -

ನಗರದ ಪ್ರಮುಖ ಸಂಪರ್ಕ ರಸ್ತೆಗಳಾದ ಡೂಮ್ ಲೈಟ್ ವೃತ್ತದಿಂದ ಕೆ.ಇ.ಬಿ. ಕಚೇರಿವರೆಗೆ ಹಾಗೂ ಡೂಮ್ ಲೈಟ್ ವೃತ್ತದಿಂದ ಕೆನರಾ ಬ್ಯಾಂಕ್ ರಸ್ತೆಯವರೆಗೆ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರು ಶಾಸಕರ ಗಮನಕ್ಕೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಸಾರ್ವಜನಿಕರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು ತಮ್ಮ ವಿಶೇಷ ಅನುದಾನದಿಂದ 80 ಲಕ್ಷ ಬಿಡುಗಡೆಗೊಳಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ ನೀಡಿದ್ದಾರೆ.

ಬುಧವಾರ ಡೂಮ್ ಲೈಟ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾಮಗಾರಿಗೆ ಪ್ರಾಥಮಿಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮುಖಂಡರು ಸಾರ್ವಜನಿಕರ ಅನುಕೂಲಕ್ಕಾಗಿ ಕಾಮಗಾರಿಯನ್ನು ತಕ್ಷಣ ಆರಂಭಿಸಲಾಗಿದ್ದು, ಇನ್ನೂ ಮೂರು ದಿನಗಳಲ್ಲಿ ಶಾಸಕ ಕೊತ್ತೂರು ಜಿ. ಮಂಜುನಾಥ್ ನೇತೃತ್ವದಲ್ಲಿ ಅಧಿಕೃತವಾಗಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ನಗರದ ರಸ್ತೆ ಅಭಿವೃದ್ಧಿಗೆ ತ್ವರಿತವಾಗಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಿರುವ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರ ಕಾರ್ಯವನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯರಾದ ಸೈಯದ್ ಆಫ್ಸರ್, ಮಂಜುನಾಥ್, ಅಮರ್, ಕೀಲುಕೋಟೆ ಕಾಶಿ, ಗಂಗಮ್ಮನಪಾಳ್ಯ ರಾಮಯ್ಯ, ಕಾಂಗ್ರೆಸ್ ಮುಖಂಡರಾದ ಕಠಾರಿಪಾಳ್ಯ ಗಂಗಣ್ಣ, ಅಮರನಾಥ, ಗೋವಿಂದರಾಜ ಮುದ್ದಪ್ಪ, ಶಿಕ್ಷಣ ಸುಧಾರಣಾ ಸಮಿತಿ ಸದಸ್ಯ ಬಾಲು, ಲಕ್ಷ್ಮೀಸಾಗರ ಸುನಿಲ್ ಕುಮಾರ್ ಭರತ್, ಲೋಕೇಶ್, ಮಾರ್ಕೊಂಡಪ್ಪ ಸೇರಿದಂತೆ ಹಲವಾರು ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...