ಕೋಲಾರ | ಸುಳದೇನಹಳ್ಳಿ ಶುದ್ದ ನೀರಿನ ಘಟಕಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಗುದ್ದಲಿ ಪೂಜೆ

Date:

Advertisements

ಕೋಲಾರ ತಾಲೂಕಿನ ಸುಳದೇನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಕೊಡಲು ಕೂಡಲೇ ಪೈಪ್ ಲೈನ್ ಕೆಲಸ ಪ್ರಾರಂಭಿಸಲಾಗುತ್ತದೆ. ಜೊತೆಗೆ ಶುದ್ದ ನೀರಿನ ಘಟಕ, ಹೈಮಾಸ್ಕ್ ಲೈಟ್ ಅಳವಡಿಸಲಾಗುತ್ತದೆ. ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಬದ್ದವಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಸುಳದೇನಹಳ್ಳಿ ಗ್ರಾಮದಲ್ಲಿ ಶುದ್ದ ನೀರಿನ ಘಟಕ, ಹೈಮಾಸ್ಕ್ ಲೈಟ್ ಮತ್ತು ಚಂದ್ರಶೇಖರಪುರ ಗ್ರಾಮದಲ್ಲಿ ಶುದ್ದ ನೀರಿನ ಘಟಕ ಗುದ್ದಲಿ ಪೂಜೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮಗಳ ಅಭಿವೃದ್ಧಿಯೇ ಕಾಂಗ್ರೆಸ್ ಸರಕಾರದ ಮುಖ್ಯ ಉದ್ದೇಶವಾಗಿದೆ. ನಿಮ್ಮ ಗ್ರಾಮಕ್ಕೆ ಅವಶ್ಯಕತೆ ಇರುವುದರ ಬಗ್ಗೆ ಗಮನಕ್ಕೆ ತನ್ನಿ ಅಭಿವೃದ್ಧಿ ಮಾಡುತ್ತೇವೆ. ಸುಮಾರು 3.50 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸಹ ಮಾಡಲಾಗುತ್ತದೆ ಎಂದರು.

Advertisements
WhatsApp Image 2025 07 18 at 7.23.52 PM 1

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್ ಅನಿಲ್ ಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಉರಟಿ ಅಗ್ರಹಾರ ಚೌಡರೆಡ್ಡಿ, ಸೀಸಂದ್ರ ಗೋಪಾಲಗೌಡ, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಮುನಿಯಪ್ಪ, ಗ್ರಾಪಂ ಸದಸ್ಯರಾದ ಕಡಗಟ್ಟೂರು ದೇವರಾಜ್, ಹರೀಶ್, ಮೇಡಿಹಾಳ ಮುನಿ ಆಂಜಿನಪ್ಪ, ತಿಪ್ಪೇನಹಳ್ಳಿ ನಾಗೇಶ್, ಮೆಡಿಕಲ್ ಮುನಿರಾಜು, ಕುರುಗಲ್ ರಮೇಶ್, ಅಟ್ರಾಸಿಟಿ ಕಮಿಟಿ ಸದಸ್ಯ ಬೈರಂಡಹಳ್ಳಿ ನಾಗೇಶ್, ವೇಮಗಲ್ ಕೌಶಿಕ್, ಮುಂತಾದವರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X