ಕೋಲಾರ | ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ, ವ್ಯವಸ್ಥೆ ಪರಿಶೀಲನೆ

Date:

ಕ್ಷೇತ್ರದ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಮತ್ತು ಗುಣಮಟ್ಟವನ್ನು ಅರಿಯುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ. ಚಿಕ್ಕಹಸಾಳದಲ್ಲಿರುವ ಬಾಲಕಿಯರ ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟವನ್ನು ಸ್ವತಃ ಪರೀಕ್ಷಿಸಿದ ಶಾಸಕ ಕೊತ್ತೂರು ಮಂಜುನಾಥ್ ಅವರು, ಹಾಸ್ಟೆಲ್‌ನಲ್ಲಿ ಸಿದ್ಧಪಡಿಸಲಾಗಿದ್ದ ಮಧ್ಯಾಹ್ನ ಉಪಹಾರವನ್ನು ಸವಿದರು. ಈ ವೇಳೆ ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಅನಿಲ್‌ಕುಮಾರ್ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ಶ್ರೀನಿವಾಸ್ ಅವರು ಸಹ ಉಪಹಾರ ಸೇವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹಾಸ್ಟೆಲ್‌ನಲ್ಲಿನ ಸ್ವಚ್ಛತೆ, ಕಿಚನ್ ಹಾಗೂ ಶೌಚಾಲಯಗಳ ನಿರ್ವಹಣೆಯನ್ನು ಕಂಡು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ಕೋಲಾರದಲ್ಲಿ ಇರುವಂತಹ ಹಾಸ್ಟೆಲ್ ನಿರ್ವಹಣೆ ಬೇರೆಲ್ಲೂ ನೋಡಲು ಸಾಧ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಅವರು ಶ್ಲಾಘಿಸಿದರು.

ಊಟದ ನಂತರ ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ನೇರವಾಗಿ ಮಾತುಕತೆ ನಡೆಸಿದ, ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿ ದಿನದ ಆಹಾರದ ಮೆನು ಚಾರ್ಟ್ ವೀಕ್ಷಿಸಿದ ಅವರು, ಅದರಂತೆಯೇ ನಿತ್ಯ ತಿಂಡಿ ಮತ್ತು ಊಟ ನೀಡಲಾಗುತ್ತಿದೆಯೇ ಎಂದು ವಿದ್ಯಾರ್ಥಿನಿಯರನ್ನು ಪ್ರಶ್ನಿಸಿ ಖಚಿತಪಡಿಸಿಕೊಂಡರು.
ಇದೇ ವೇಳೆ ಹಾಸ್ಟೆಲ್‌ನಲ್ಲಿ ಮೋಡ ಮುಚ್ಚಿಕೊಂಡಾಗ ಬಿಸಿ ನೀರಿನ ಕೊರತೆ ಎದುರಾಗುದರಿಂದ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಶಾಸಕರ ಗಮನಕ್ಕೆ ತಂದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಶಾಸಕರು, ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಕೂಡಲೇ ಗೀಸರ್ ಅಳವಡಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ..?ಚಿಕ್ಕಬಳ್ಳಾಪುರ | ಸತ್ಯ ಸಾಯಿ ಗ್ರಾಮದಲ್ಲಿ ಸಂಭ್ರಮ: ವಾರ್ಷಿಕ ಕ್ರೀಡಾ ಸಾಂಸ್ಕೃತಿಕ ಉತ್ಸವ

ಹಾಸ್ಟೆಲ್ ಸಿಬ್ಬಂದಿಯು ವಿದ್ಯಾರ್ಥಿನಿಲಯದಲ್ಲಿ ಎದುರಾಗುತ್ತಿರುವ ನೀರಿನ ಸಮಸ್ಯೆಯ ಬಗ್ಗೆ ಶಾಸಕರಿಗೆ ವಿವರಿಸಿದರು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ನೀರಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವುದಾಗಿ ಭರವಸೆ ನೀಡಿದರು.

ಈ ದಿಢೀರ್ ಭೇಟಿಯ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...