ಕೋಲಾರ | ಬೆಟ್ಟಹೊಸಪುರ ಅಂಗನವಾಡಿಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ

Date:

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಬೆಟ್ಟಹೊಸಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಅಂಗನವಾಡಿ ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಇದ್ದರೂ ಟ್ಯಾಂಕ್ ಇಲ್ಲದೇ ಸಮಸ್ಯೆ ಆಗಿದೆ. ಈ ಕುರಿತು ಕೂಡಲೇ ಪೈಪ್‌ಲೈನ್‌ ಅಳವಡಿಕೆಗೆ ಕ್ರಮವಹಿಸಲಾಗುವುದು ಎಂದ ಅವರು, ಮಕ್ಕಳಿಗೆ ನೀಡುವ ಆಹಾರಧಾನ್ಯ ಹಾಗೂ ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ಪರಿಶೀಲನೆ ಮಾಡಿದರು. ಎಲ್ಲ ಪೌಷ್ಟಿಕಾಂಶ ಇರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದ ಆಹಾರ ಧಾನ್ಯಗಳನ್ನು ಮಾತ್ರ ಬಳಸಬೇಕು. ಅಡುಗೆ ಮಾಡಲು ಬಳಸುವ ಪಾತ್ರೆ ಹಾಗೂ ಕೊಠಡಿಯನ್ನು ಸ್ವಚ್ಛವಾಗಿಟ್ಟುಕೊಂಡು, ಅಡುಗೆಗೆ ಶುದ್ಧ ನೀರನ್ನು ಬಳಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅಂಗನವಾಡಿಗಳ ಬಗ್ಗೆ ಯಾವುದೇ ದೂರು ಬಂದಲ್ಲಿ ಸಂಬಂಧಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವಂತೆ ಅಂಗನವಾಡಿ ಪರಿಸರವನ್ನು ಇಟ್ಟುಕೊಳ್ಳಬೇಕು. ಸರ್ಕಾರ ಒದಗಿಸುವ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವ್ಯವಸ್ಥಿತವಾಗಿ ಮಕ್ಕಳಿಗೆ ನೀಡಬೇಕು. ಯಾವುದೇ ಮಗು ಅಪೌಷ್ಟಿಕತೆಯಿಂದ ಬಳಲುವಂತೆ ಆಗಬಾರದು. ಮಗುವಿನ ಬೆಳವಣಿಗೆ ಹಾಗೂ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದರು.

ಇದನ್ನೂ ಓದಿ: ಕೋಲಾರ | ರೈತರ ಕೃಷಿ ಭೂಮಿ ತಂಟೆಗೆ ಸರ್ಕಾರ ಬರೋದು ಸರಿಯಲ್ಲ: ನಳಿನಿ ಗೌಡ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಷಂಷೀರ್, ಕಾಂಗ್ರೆಸ್ ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಬೆಟ್ಟಹೊಸಪುರ ಜಗನ್, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...