ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Date:

ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಸೋಮವಾರ ನಗರದ ತಮ್ಮ ಕಚೇರಿಯಲ್ಲಿ ಕ್ಷೇತ್ರದ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕೆಲವರಿಗೆ ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು. ಇನ್ನೂ ಕೆಲವರಿಗೆ ಸ್ಥಳ ಪರಿಶೀಲನೆ ನಡೆಸಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

- Advertisement -

ಬೆಳಿಗ್ಗೆಯಿಂದಲೇ ಮಧ್ಯಾಹ್ನದ ವರೆಗೆ ವಿವಿಧ ಭಾಗಗಳಿಂದ ಆಗಮಿಸಿದ ಕೋಲಾರ ವಿಧಾನಸಭಾ ಕ್ಷೇತ್ರದ ನಾಗರಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತಂದರು ಪ್ರಮುಖವಾಗಿ ನೀರು, ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ವಿದ್ಯುತ್ ಸಮಸ್ಯೆಗಳು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕುರಿತ ಅಹವಾಲುಗಳು ಹೆಚ್ಚು ಗಮನ ಸೆಳೆದವು. ಕೆಲವು ನಾಗರಿಕರು ತಮ್ಮ ವೈಯಕ್ತಿಕ ಸಮಸ್ಯೆಗಳಾದ ಪಿಂಚಣಿ, ಭೂಮಿ ದಾಖಲೆ, ಮನೆ ನಿರ್ಮಾಣ ಅನುಮತಿ ಸೇರಿದಂತೆ ವಿವಿಧ ಆಡಳಿತಾತ್ಮಕ ವಿಚಾರಗಳನ್ನೂ ಶಾಸಕರ ಮುಂದೆ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರತಿ ಅಹವಾಲನ್ನು ಶಾಸಕರು ಶ್ರದ್ಧೆಯಿಂದ ಆಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದಾಗಿ ಭರವಸೆ ನೀಡಿದ ಅವರು, ಜನರೊಂದಿಗೆ ನೇರ ಸಂಪರ್ಕದಲ್ಲಿದ್ದು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದು ತಮ್ಮ ಕರ್ತವ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಅಹವಾಲುಗಳನ್ನು ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲು ಸಹಕರಿಸಿದರು ಇನ್ನೂ ವಿದ್ಯಾಭ್ಯಾಸದ ಸಹಾಯಕ್ಕಾಗಿ ಮನವಿ ಸಲ್ಲಿಸಿದವರಿಗೆ ತಮ್ಮ ಸ್ವಂತ ಹಣದಲ್ಲಿ ಹಾಗೂ ಶಾಸಕರ ಸಂಬಳದ ಹಣವನ್ನು ಚೆಕ್ ಮೂಲಕ ನೀಡಿದರು.

ಇದನ್ನು ಓದಿದ್ದೀರಾ..?ಕೋಲಾರ| ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಗರದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಸೇರಿದಂತೆ ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...