ಕೋಲಾರ | ನೀಟ್‌‌ ಸೋರಿಕೆ‌ ಪ್ರಕರಣ; ಕೇಂದ್ರ‌ ಸಚಿವ ಪ್ರಧಾನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ‌ ಪ್ರಧಾನ್ ರಾಜೀನಾಮೆ‌ ನೀಡಬೇಕು, ಪ್ರಧಾನಿ ನರೇಂದ್ರ ಮೋದಿ ಮಧ್ಯ‌ಪ್ರವೇಶಿಸಿ ತಮ್ಮ ಅಭಿಪ್ರಾಯ ತಿಳಿಸಬೇಕು.‌ ಪ್ರಕರಣದ‌ ಆರೋಪಗಳ ‌ಮೇಲೆ‌ ಕೂಡಲೇ ಕ್ರಮ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಆಗ್ರಹಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಕಳೆದ 12 ವರ್ಷಗಳಲ್ಲಿ ಸತತವಾಗಿ ನೀಟ್ ಪಶ್ನೆ‌‌ ಪತ್ರಿಕೆ ಸೋರಿಕೆ ಆಗುತ್ತಲೇ ಇದೆ. ಇಷ್ಟಾಗಿಯೂ ಕ್ರಮ ಆಗಿಲ್ಲ. ಹೀಗಾಗಿ, ಮತ್ತೆ ಮತ್ತೆ ಹಗರಣ‌ ನಡೆಯುತ್ತಿದೆ. ಇದಕ್ಕೆ ಯಾರು ಹೊಣೆ? ಇದರಿಂದ ಎಷ್ಟೆಲ್ಲಾ ಅನಾಹುತ ಆಗುತ್ತಿದೆ. ಕೇಂದ್ರ ಸರ್ಕಾರ,‌ ಶಿಕ್ಷಣ ಸಚಿವ,‌‌ ಅಧಿಕಾರಿಗಳೇ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಯುದ್ಧದ ರೀತಿ ಮರು ಪರೀಕ್ಷೆ ನಡೆಸಿದ್ದಾರೆ ಮಿಲಿಟರಿ ಬಳಸಿಕೊಂಡಿದ್ದ ಹಾಸ್ಯಾಸ್ಪದ ಎಂದರು.

1984ರಲ್ಲಿ ವೀರಪ್ಪ ಮೊಯ್ಲಿ ಅವರು ಸಿಇಟಿ ಜಾರಿ ಮಾಡಿದರು. ಜನಸಾಮಾನ್ಯರಿಗೆ ಸೀಟು ಸಿಗಬೇಕೆಂದು ಅವರ ಉದ್ದೇಶ ಆಗಿತ್ತು. ಅದನ್ನೇ ಮಾದರಿಯಾಗಿಟ್ಟುಕೊಂಡು 2013ರಲ್ಲಿ ಯುಪಿಎ ಸರ್ಕಾರ ದೇಶದಾದ್ಯಂತ ನೀಟ್ ‌ಜಾರಿ ಮಾಡಿತು. ಆದರೆ, ಎನ್ ಡಿ‌ ಎ ಸರ್ಕಾರ ಪಾರದರ್ಶಕವಾಗಿ ಪರೀಕ್ಷೆ ನಡೆಸುವಲ್ಲಿ ವಿಫಲವಾಗಿದೆ ಎಂದು‌ ಆರೋಪಿಸಿದರು.

ಪ್ರಕರಣದ ‌ಬಗ್ಗೆ ಪ್ರಧಾನಿ ಮೋದಿ ಏಕೆ ಉತ್ತರಿಸುತ್ತಿಲ್ಲ? ಸಾರ್ವಜನಿಕರ ಸಮಸ್ಯೆಗೆ ಏಕೆ ಬಾಯಿ ಬಿಡುವುದಿಲ್ಲ. ಯಾವ ವಿಷಯಕ್ಕೂ ಮಾತನಾಡುವುದಿಲ್ಲ. ಇದು ಸರ್ವಾಧಿಕಾರಿ ಆಡಳಿತವೇ? ಮುಂದೆ ಮತ್ತೆ ಈ ರೀತಿ ‌ಸೋರಿಕೆ ಆಗಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದರು.

ಪದೇಪದೇ ಸೋರಿಕೆ‌ ಆದರೆ ಪರೀಕ್ಷೆಗೆ ಸಿದ್ಧತೆ ನಡೆಸುವ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪರೀಕ್ಷೆಯ ವಿಧಾನ ಸರಿ ಇಲ್ಲ. ಕೆಲವೊಂದು ‌ಮಾರ್ಪಾಡು‌‌‌ ಮಾಡಬೇಕು. ನೀಟ್ ಪರೀಕ್ಷೆಯ ಶೇ‌ 50‌ ಅಂಕ ಹಾಗೂ ದ್ವಿತೀಯ ಪರೀಕ್ಷೆಯ ಶೇ 50 ಅಂಕವನ್ನು ಪರಿಗಣಿಸಿ ಸೀಟ್‌ ನೀಡಬೇಕು. ಈ ಸಂಬಂಧ ಸಮಿತಿ ರಚನೆ ಮಾಡಿ ಅಧ್ಯಯನ ಮಾಡಿ ಸರಿಪಡಿಸಿಕೊಳ್ಳಬೇಕು. ನಮ್ಮ ಮಕ್ಕಳಿಗೆ ಪದೇಪದೇ ಅನ್ಯಾಯ ಆಗಬಾರದು ಎಂದು ಸಲಹೆ ‌ನೀಡಿದರು‌.

ಪ್ರದೀಪ್ ಈಶ್ವರ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಯಾರೇ ಆಗಲಿ ಅನ್ಯ ಮಾರ್ಗದಲ್ಲಿ ಹೋಗಬಾರದು. ಅವರ ಮೇಲೆ ಚಪ್ಪಾಲಿ ಬಿಸಾಡಿದ್ದು ತಪ್ಪು ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮ್ಯಾಕಲ್ ನಾರಾಯಣಸ್ವಾಮಿ ಮಾತನಾಡಿ, ನೀಟ್ ಪ್ರಕರಣ ಬರೀ ಪ್ರಶ್ನೆ ಪತ್ರಿಕೆ ಸೋರಿಕೆ ಮಾತಲ್ಲ: ಇದೊಂದು ಉದ್ದೇಶಪೂರ್ವಕವಾಗಿ ನಡೆಸಿರುವ ದೇಶದ ದೊಡ್ಡ ಹಗರಣ ಎಂದು ತಿಳಿಸಿದರು.

ದೇಶದ ವಿವಿಧೆಡೆ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕು. ಮರು ಪರೀಕ್ಷೆ ವೇಳೆ ಮಿಲಿಟರಿ ಸಹಾಯ ಪಡೆದಿದ್ದಾರೆ. ದೇಶ ಕಾಯವು ಮಿಲಿಟರಿಯವರು ಪ್ರಶ್ನೆ ಪತ್ರಿಕೆ ಕಾಯಲು ಬರಬೇಕೇ? ಪ್ರಶ್ನೆ ಪತ್ರಿಕೆ ಕದಿಯುವ ಭಯೋತ್ಪಾದಕರು ಇದ್ದಾರೆಯೇ ಎಂದು ಪ್ರಶ್ನಿಸಿದರು.

ನೀಟ್ ಬಿಟ್ಟು ಬೇರೆ ಪರೀಕ್ಷೆ ಮಾಡಬೇಕು. ಹಗರಣದ ಆರೋಪಿಗಳ ವಿರುದ್ಧ ಕ್ರಮ ಆಗಬೇಕು. ಇಲ್ಲದಿದ್ದರೆ ಈ ಬಗ್ಗೆ ಕಾಂಗ್ರೆಸ್ ನಿಂದ ಉಗ್ರ ಪ್ರತಿಭಟನೆ ನಡೆಸುತ್ತೇವೆ, ಮಕ್ಕಳಿಗೆ ನ್ಯಾಯ ಕೊಡಿಸುತ್ತೇವೆ ಎಂದರು.

ಆರ್ ಎಸ್ ಎಸ್ ನೋಂದಣಿ ಮಾಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಳಬಾರದೇ? ಪ್ರತಿಯೊಂದಕ್ಕೆ ಲೆಕ್ಕಕೊಡಬೇಕು. ಎಲ್ಲಿಂದ ದುಡ್ಡು ಬರುತ್ತಿದೆ? ಖರ್ಚು ವೆಚ್ಚ ತೋರಿಸಿ. ಕೇಳಿದರೆ ಹಿಂದೂಗಳ ವಿರೋಧಿ ಎನ್ನುತ್ತಾರೆ. ಪ್ರತಿ ನಾಗರಿಕರಿಗೆ ಹಕ್ಕು ಇದೆ. ರಾಜ್ಯದ ಗೃಹ ಮಂತ್ರಿ ಕೇಳಬಾರದೇ ಎಂದು ಹೇಳಿದರು.

ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ನಿಹಾಲ್ ತರೀನ್ ಮಾತನಾಡಿ, ವರ್ಷ ಪೂರ್ತಿ ಕಷ್ಟಪಟ್ಟು ಓದಿ ಪ್ರಶ್ನೆ ‌ಪತ್ರಿಕೆ‌‌ ಸೋರಿಕೆಯಾದರೆ ಎಷ್ಟು ಕಷ್ಟ? ಕೇಂದ್ರ ಸರ್ಕಾರದ ಕೈಯಲ್ಲಿ ‌ಪರೀಕ್ಷೆ ನಡೆಸಲು ಆಗುತ್ತಿಲ್ಲ. ತಮಿಳುನಾಡು ನಿಟ್ ತೆಗೆಯುತ್ತಿದ್ದಾರೆ. ನಮ್ಮ‌ ರಾಜ್ಯದಲ್ಲೂ ತೆಗೆಯಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ: ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿ

ಪತ್ರಿಕಾಗೋಷ್ಠಿಯಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ,‌ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಪ್, ಗ್ಯಾರಂಟಿ ‌ಜಿಲ್ಲಾ ಅಧ್ಯಕ್ಷ ವೈ‌.ಶಿವಕುಮಾರ್, ಖಾದ್ರಿಪುರ ಬಾಬು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...