ಕೋಲಾರ | ಗುಣಮಟ್ಟದಲ್ಲಿ ರಾಜಿಯಿಲ್ಲ ಸಮಯ ಮಿತಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ : ಶಾಸಕ ಕೊತ್ತೂರು ಮಂಜುನಾಥ್

Date:

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹಮ್ಮಿಕೊಂಡಿರುವ ಎಲ್ಲಾ ಪ್ರಗತಿ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಖಡಕ್ ಸೂಚನೆ ನೀಡಿದರು.

- Advertisement -

ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು ತಾಲ್ಲೂಕಿನ ಪೆಮ್ಮಶೆಟ್ಟಿಹಳ್ಳಿ ಬಳಿ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಸುಸಜ್ಜಿತ 26 ಕೋಟಿ ರೂ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣ ಮಾಡಲಾಗುತ್ತಿದೆ. ಈ ಹಿಂದೆ ನಾಲ್ಕು ಕಡೆ ಜಾಗ ಗುರುತಿಸಿದ್ದರೂ ಕಾನೂನು ತೊಡಕುಗಳಿಂದಾಗಿ ಕಾಮಗಾರಿ ವಿಳಂಬವಾಗಿತ್ತು. ಈಗ ಪೆಮ್ಮಶೆಟ್ಟಿಹಳ್ಳಿ ಬಳಿ ಜಾಗ ಅಂತಿಮಗೊಂಡು ಕಾಮಗಾರಿ ಆರಂಭವಾಗುತ್ತಿದ್ದು, ಈ ಭಾಗದ ಮಕ್ಕಳಿಗೆ ಅತ್ಯುತ್ತಮ ಮೂಲಭೂತ ಸೌಕರ್ಯಗಳು ಸಿಗಲಿವೆ. ಈ ನಿಟ್ಟಿನಲ್ಲಿ ಈ ಭಾಗದ ಜನರೇ ಅದೃಷ್ಟವಂತರು ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ದಿನಕ್ಕೆ ಹತ್ತು ಕಾರ್ಯಕ್ರಮಗಳಂತೆ ಕ್ಷೇತ್ರದಲ್ಲಿ ಹಂತ-ಹಂತವಾಗಿ 150ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಗುರಿ ಹೊಂದಲಾಗಿದೆ. ಗ್ರಾಮಸ್ಥರು ಯಾವುದೇ ತೊಂದರೆ ನೀಡದೆ, ಜೊತೆಯಲ್ಲಿದ್ದುಕೊಂಡು ಕೆಲಸದ ಗುಣಮಟ್ಟವನ್ನು ಪರಿಶೀಲಿಸಬೇಕು. ಇಂಜಿನಿಯರ್‌ಗಳು ಸಹ ಗುಣಮಟ್ಟದ ಕಡೆಗೆ ಹೆಚ್ಚಿನ ಗಮನಹರಿಸಿ, ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಾಲ್ಕು ಜನ ಕೈ ತಟ್ಟಿದಾಗ ಮಾತ್ರ ಶಬ್ದ ಬರಲು ಸಾಧ್ಯ. ಅದೇ ರೀತಿ ಎಲ್ಲರ ಸಹಕಾರವಿದ್ದಾಗ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯ. ಕ್ಷೇತ್ರದಲ್ಲಿ ಕಷ್ಟಪಟ್ಟು ಅನುದಾನ ತರಲಾಗುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ. ನನ್ನ ಮೇಲಿನ ನಂಬಿಕೆಯಿಂದ ಕೇವಲ 20 ದಿನಗಳ ನನ್ನನ್ನು ಕ್ಷೇತ್ರದ ಜನತೆ ಗೆಲ್ಲಿಸಿದ್ದಾರೆ. ಆ ನಂಬಿಕೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜನರ ಋಣ ತೀರಿಸುತ್ತೇನೆ ಎಂದು ನುಡಿದರು.

ನರಸಾಪುರ ಕೈಗಾರಿಕೆ ಪ್ರದೇಶದಲ್ಲಿ ಮಹಿಳಾ ಉದ್ಯೋಗಿಗಳಿಗೆ 170 ಕೋಟಿ ವೆಚ್ಚದಲ್ಲಿ ವಸತಿ ನಿಲಯ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಕೋಲಾರಕ್ಕೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಕಟ್ಟಡ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿದ್ದು, ಈ ವರ್ಷದ ಶೈಕ್ಷಣಿಕ ವರ್ಷದಿಂದಲೇ ತರಗತಿಗಳನ್ನು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಾಮಗಾರಿಗಳ ವಿವರ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಮೂರಾಂಡಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ 30 ಲಕ್ಷ, ಯಳಚೀಪುರ ಗ್ರಾಮದಲ್ಲಿ ಬಿ ಆರ್ ಅಂಬೇಡ್ಕರ್ ಭವನ 30 ಲಕ್ಷ, ಟಮಕ ಕುಡಾ ಬಡಾವಣೆಯಲ್ಲಿ ಕಾರ್ಮಿಕ ಇಲಾಖೆಗೆ ಕಾರ್ಮಿಕ ಭವನ ಕಟ್ಟಡ ನಿರ್ಮಾಣ 3.06 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಚುಂಚದೇನಳ್ಳಿ ಗ್ರಾಮದವರೆಗೆ ಡಾಂಬರು ರಸ್ತೆ ಕಾಮಗಾರಿ ಒಂದು ಕೋಟಿ, ಪೆಮ್ಮಶೆಟ್ಟಿಹಳ್ಳಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ವಸತಿ ನಿಲಯಕ್ಕೆ 14 ಕೋಟಿ ಒಟ್ಟು 17 ಕೋಟಿ 66 ಲಕ್ಷ ಅನುದಾನದ ಕಾಮಗಾರಿಗಳಿಗೆ ಗುದ್ದಲಿ‌ ಪೂಜೆ ನೆರವೇರಿಸಿದರು.

ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ‌ ಮಹಿಳಾ ಕಾರ್ಮಿಕರ ಸುರಕ್ಷತೆ ಹಾಗೂ ಉತ್ತಮ ವಾತಾವರಣ ಕಲ್ಪಿಸಲು 173 ಕೋಟೆ ವೆಚ್ಚದಲ್ಲಿ ಸುಮಾರು 6000 ಸಾಮರ್ಥ್ಯದ ಮಹಿಳಾ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತಿರುವ ಕಾಮಗಾರಿಯನ್ನು ಅಧಿಕಾರಿಗಳು ಗುತ್ತಿಗೆದಾರರೊಟ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತ್ವರಿತ ಗತಿಯಲ್ಲಿ ‌ಹಾಗೂ ನಿಗದಿತ ಅವಧಿಯೊಳಗೆ ಪೂರ್ಣ ಗೊಳಿಸಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಗುತ್ತಿಗೆದಾರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ. ಉರಟಅಗ್ರಹಾರ ಚೌಡರೆಡ್ಡಿ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್, ಮುಖಂಡರಾದ ಕೆಂದಟ್ಟಿ ಶಿವಕುಮಾರ್, ಯಳಚಿಪುರ ಮಂಜುನಾಥ್, ಮುನೇಗೌಡ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೇಮಗಲ್ ಮುನಿಯಪ್ಪ, ಖಾದ್ರಿಪುರ ಬಾಬು,ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ..? ಕೆಜಿಎಫ್ | ಬಿಜೆಪಿ ಮುಖಂಡರಿಂದ ದುಡಿಯುವ ರೈತನಿಗೆ ‘ಚಡ್ಡಿ ಚಂದ್ರಯ್ಯ’ ಎಂದು ಅವಮಾನ

ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ‌ ಮಹಿಳಾ ಕಾರ್ಮಿಕರ ಸುರಕ್ಷತೆ ಹಾಗೂ ಉತ್ತಮ ವಾತಾವರಣ ಕಲ್ಪಿಸಲು 173 ಕೋಟೆ ವೆಚ್ಚದಲ್ಲಿ ಸುಮಾರು 6000 ಸಾಮರ್ಥ್ಯದ ಮಹಿಳಾ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತಿರುವ ಕಾಮಗಾರಿಯನ್ನು ಅಧಿಕಾರಿಗಳು ಗುತ್ತಿಗೆದಾರರೊಟ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತ್ವರಿತ ಗತಿಯಲ್ಲಿ ‌ಹಾಗೂ ನಿಗದಿತ ಅವಧಿಯೊಳಗೆ ಪೂರ್ಣ ಗೊಳಿಸಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಗುತ್ತಿಗೆದಾರಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...