ಕೋಲಾರ | ಜಿಲ್ಲಾ ಮಟ್ಟದ ನೈಸರ್ಗಿಕ ಕೃಷಿ ನಿರ್ವಹಣೆಯ ಬಗ್ಗೆ ಒಂದು ದಿನದ ಕಾರ್ಯಾಗಾರ

Date:

ರೈತರು ಬೆಳೆ ಪರಿವರ್ತನೆಯ ಜೊತೆಗೆ ಮಣ್ಣು ಸಹ ಪರಿವರ್ತನೆಗೆ ಒತ್ತು ನೀಡಬೇಕು, ಕೃಷಿ ಜಮೀನನ್ನು ರಾಸಾಯನಿಕ ಮುಕ್ತವಾಗಿ ಪರಿವರ್ತಿಸಲು ಜಾಗೃತಿ ಮೂಡಿಸುವ ಮತ್ತು ಮಾರ್ಗದರ್ಶನ ಪಡೆಯಬೇಕು ರಸಾಯನಿಕ ಗೊಬ್ಬರ ದೂರವಿಡಿ ಸಾವಯವ ಪದ್ದತಿಗೆ ಒತ್ತು ನೀಡಬೇಕಾಗಿದೆ ಎಂದು ತೋಟಗಾರಿಕೆ ವಿಶ್ವವಿದ್ಯಾಲಯದ ಡೀನ್ ಡಾ.ಎಂ.ಅಂಜಿನಪ್ಪ ತಿಳಿಸಿದರು.

- Advertisement -

ನಗರದ ಹೊರವಲಯದ ಟಮಕದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಹಾಗೂ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೋಮವಾರ ನೈಸರ್ಗಿಕ ಕೃಷಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಭೂಮಿಯ ಫಲವತ್ತತೆಯನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ರಾಸಾಯನಿಕ ಮುಕ್ತ ಕೃಷಿಯ ಕಡೆಗೆ ಗಮನ ಹರಿಸಬೇಕಾಗಿದೆ. ರಾಜ್ಯ ಸರ್ಕಾರವು ನೈಸರ್ಗಿಕ, ಸಾವಯವ ಕೃಷಿಯ ಜಾಗೃತಿ ಹಾಗೂ ಪ್ರೋತ್ಸಾಹಕ್ಕೆ ವಿಶೇಷವಾದ ಕ್ರಮಗಳನ್ನು ಕೈಗೊಳ್ಳಲಿದೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಈ ಸಂಬಂಧ ಪ್ರಯೋಗಗಳನ್ನು ಹೆಚ್ಚಿಸಿವೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕೋಲಾರ ಜಿಲ್ಲೆಯ ತರಕಾರಿಗಳು ವಿಷವಾಗಿದೆ ಇದಕ್ಕೆ ಕಾರಣ ಹೆಚ್ಚು ಹೆಚ್ಚು ರಸಾಯನಿಕ ಗೊಬ್ಬರ ಬಳಕೆಯಾಗಿದೆ ಮಣ್ಣು, ನೀರು, ಅರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮ ಮಾಡಿದರೆ ಸಾಲದು ಅದರ ಪಾಲನೆ ಮಾಡಬೇಕು ಒಂದು ಬೆಳೆಯ ಜೊತೆಯಲ್ಲಿ ನಾಲ್ಕೈದು ರೀತಿಯ ಬೆಳೆಗಳನ್ನು ಬೆಳೆಯಬೇಕು ಸಾಧ್ಯವಾದಷ್ಟು ರಸಾಯನಿಕ ಗೊಬ್ಬರಗಳನ್ನು ದೂರ ಮಾಡಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಮಾತನಾಡಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಹತ್ವಾಕಾಂಕ್ಷಿ ಖೇತ್ ಬಚಾವ್ ಕೃಷಿ ಜಾಗೃತಿ ಅಭಿಯಾನದ ಅಂಗವಾಗಿ ರೈತರಲ್ಲಿ ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವಾಗಿದ್ದು ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚು ರಾಸಾಯನಿಕ ಗೊಬ್ಬರವನ್ನು ಬಳಸಲಾಗುತ್ತಿದೆ. ಹಾಗಾಗಿ ನೈಸರ್ಗಿಕ ಕೃಷಿಯನ್ನು ಮುಖ್ಯವಾಹಿನಿಗೆ ತರಬೇಕೆಂಬ ಉದ್ದೇಶದಿಂದ ಈ ತರಬೇತಿಯನ್ನು ಆಯೋಜಿಸಲಾಗಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ತರಬೇತಿಯಲ್ಲಿ ವಿವಿಧ ಕೃಷಿ ಪಂಡಿತರು ವಿಜ್ಞಾನಿಗಳು, ಕೃಷಿಕರಿಗೆ ನೈಸರ್ಗಿಕ ಕೃಷಿ ಮಹತ್ವ, ತತ್ವಗಳು, ಮಣ್ಣಿನ ಮಹತ್ವ, ಮಣ್ಣಿನ ಪೋಷಕಾಂಶಗಳ ನಿರ್ವಹಣೆಗಾಗಿ ಜೀವಾಮೃತ ಬಳಕೆ, ಹೊದಿಕೆಯ ಮಹತ್ವ, ಜೈವಿಕಗೊಬ್ಬರಗಳ ಬಳಕೆ, ನಿರ್ವಹಣೆ, ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ, ನೀರಿನ ನಿರ್ವಹಣೆ, ಸಮಗ್ರ ಕೃಷಿ ಪದ್ಧತಿ, ಬೀಜ ಮತ್ತು ಸಸಿಗಳ ನಿರ್ವಹಣೆ ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ..?ದಿವಾಳಿ ಘೋಷಣೆ: ‘ವಾಸ್ತವ ಬೇರೆ ಇದೆ, ಕಾನೂನು ಹೋರಾಟ ನಡೆಸುತ್ತೇನೆ’ – ನಸೀರ್ ಅಹ್ಮದ್

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಶಿವಾನಂದ ಹೊಂಗಲ ವಹಿಸಿದ್ದು ವೇದಿಕೆಯಲ್ಲಿ ರಾಜ್ಯ ಮಾವು ಮಂಡಳಿ ಅಧ್ಯಕ್ಷ ವಾಸುದೇವ್ ರಾವ್, ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಸಸ್ಯ ಸಂರಕ್ಷಣಾಧಿಕಾರಿ ಡಾ.ಜಯಸಿಂಹ, ತೋಟಗಾರಿಕೆ ವಿವಿ ನಿವೃತ್ತ ಸಂಶೋಧನಾ ನಿರ್ದೇಶಕ ಡಾ.ನಾಚೇಗೌಡ, ಬಿಜೆಪಿ ರೈತ ಮೋರ್ಚಾ ಮುಖಂಡರಾದ ಲಕ್ಷ್ಮಣಗೌಡ, ಬಿಜೆಪಿ ಶಿವಣ್ಣ, ಗೋಪಸಂದ್ರ ನಾರಾಯಣಸ್ವಾಮಿ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...