ಕೋಲಾರ | ಕಂದಾಯ ಭೂಮಿ ಎಸ್ಐಟಿಗೆ ವಿರೋಧ, ಡಿಸಿಗೆ ಭೂ ಸಂತ್ರಸ್ತರಿಂದ ಮನವಿ

Date:

ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಕುತಂತ್ರಕ್ಕೆ ಬಲಿಯಾದ ರೈತರ ಕಂದಾಯ ಭೂಮಿಗಳನ್ನು ಯಾವುದೇ ಕಾರಣಕ್ಕೂ ಎಸ್ಐಟಿಗೆ ನೀಡಬಾರದು ಎಂದು ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಭೂ ಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಆರ್ ಶ್ರೀನಿವಾಸನ್ ನೇತೃತ್ವದಲ್ಲಿ ಗುರುವಾರ ಮನವಿ ಮಾಡಿ ಒತ್ತಾಯಿಸಿದರು.

- Advertisement -

ಈ ಸಂದರ್ಭದಲ್ಲಿ ಆರ್ ಶ್ರೀನಿವಾಸನ್ ಮಾತನಾಡಿ ಜಿಲ್ಲೆಯಲ್ಲಿ ನದಿಗಳಿಲ್ಲದೆ ಸ್ವತಂತ್ರ ಪೂರ್ವದಲ್ಲಿ ಮಹಾರಾಜರು ಕೊಟ್ಟಂತಹ ಕಂದಾಯ ಗೋಮಾಳ ಒಣ ಭೂಮಿಯಲ್ಲಿ ರೈತರು ಕಷ್ಟಪಟ್ಟು ಬೆಳೆ ಬೆಳೆದುಕೊಂಡು ನೂರಾರು ವರ್ಷಗಳಿಂದ ಆ ಭೂಮಿಗಳನ್ನು ಅದ ಮಾಡಿ ಈಗ ಸಮೃದ್ಧಿಗೆ ತಂದು ನೀರಾವರಿ ಗಿಡ ಮರ ಬೆಳೆಸಿಕೊಂಡು ಇರುವಂತಹ ಸಮಯದಲ್ಲಿ ಏಕಾಏಕಿ ಅರಣ್ಯ ಇಲಾಖೆಯವರು 1931 ರಲ್ಲಿ ಮಾಡಿದಂತಹ ಜಿಲ್ಲಾಧಿಕಾರಿಗಳ ನೋಟಿಫಿಕೇಷನ್ ಗಳನ್ನು ಸುಪ್ರೀಂ ಕೋರ್ಟ್ ಆದೇಶ ಮಹಾರಾಜರ ಆದೇಶ ಕೇಂದ್ರ ಸರ್ಕಾರದ ಆದೇಶ ಎಂದು ಮೂರು ವಿಧವಿಧವಾದ ಆದೇಶವನ್ನು ತಂದು ರೈತರನ್ನು ಕಂದಾಯ ಅಧಿಕಾರಿಗಳನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಾಲೂಕಿನ ಹುತ್ತೂರು ಹೋಬಳಿ ಶಿಳ್ಳೆಂಗೆರೆ, ಹರಟಿ, ಮಲ್ಲಂಡಳ್ಳಿ, ಕೋಟಿಗಾನಹಳ್ಳಿ, ಅಬ್ಬಣಿ, ಅರಳಕುಂಟೆ ಗ್ರಾಮಗಳ ಸುಮಾರು 200 ಎಕರೆ ಅರಣ್ಯ ಜಮೀನುಗಳನ್ನು ನಾಶ ಮಾಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಎಲ್ಲಾ ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ಯಾವುದು ಅರಣ್ಯ ಭೂಮಿ, ಯಾವುದು ರೈತರ ಭೂಮಿ ಎಂಬುದನ್ನು ಜಂಟಿ ಸರ್ವೆ ಮೂಲಕ ದೃಢೀಕರಿಸಿ ಎಂದು ಕೆಡಿಪಿ ಸಭೆಯಲ್ಲಿ ನಿರ್ಣಯ ಕೈಗೊಂಡ ನಂತರ ಜಂಟಿ ಸರ್ವೆಯಾಗಿದ್ದರೂ ವಿನಾಕಾರಣ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು,

ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಸುಮಾರು ಎರಡು ಲಕ್ಷ ಗಿಡ ಮರಗಳನ್ನು ನಾಶ ಮಾಡಿದ್ದಾರೆ ಇದರ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಬಡ ರೈತರ ಕಂದಾಯ ಒಣ ಭೂಮಿಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಯಾಮಾರಿಸಿ ಪೊಲೀಸರ ಬೆಂಗಾವಿಲಿನಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾನೂನು ಬಹಿರವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಇತರೆ ಹಿಂದುಳಿದ ಜನಾಂಗಗಳ ಭೂಮಿಗಳನ್ನು ನಾಶ ಮಾಡಿದ್ದಾರೆ ಕಂದಾಯ ಇಲಾಖೆಯವರು ಯಾವುದೇ ಕಾರಣಕ್ಕೂ ಕಂದಾಯ ಭೂಮಿಗಳನ್ನು ಅರಣ್ಯ ಭೂಮಿ ಎಂದು ತಪ್ಪಾಗಿ ಎಸ್ಐಟಿಗೆ ವರದಿ ನೀಡಬಾರದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಮಾದಕ ವಸ್ತುಗಳ ಪಿಡುಗನ್ನು ನಿಲ್ಲಿಸಿ ಯುವಕರನ್ನು ರಕ್ಷಸಿ, ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕೋಲಾರ ಯುವಕರಿಂದ ಒತ್ತಾಯ.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್ ರವಿ ಕಂದಾಯ ಇಲಾಖೆಯಿಂದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಎಸ್ಐಟಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ನಿಯೋಗದಲ್ಲಿ ಭೂ ಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ವೆಂಕಟರವಣಪ್ಪ ಭಟ್ರಹಳ್ಳಿ ಮಂಜುನಾಥ್ ಇದ್ದರು

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...

ರಾಯಚೂರು | ಚಾಕಲೇಟ್ ಖರೀದಿ ನೆಪದಲ್ಲಿ ಬಂದು ಮಹಿಳೆಯ ಏಳು ತೊಲೆ ಬಂಗಾರದ ತಾಳಿ ಕಳವು

ತಾಲೂಕಿನ ಯರಗೇರಾ ಗ್ರಾಮದಲ್ಲಿ ಕಿರಾಣಿ ಅಂಗಡಿ ಚಾಕಲೇಟ್ ಖರೀದಿ ನೆಪದಲ್ಲಿ ಬಂದು...