ಕೋಲಾರ | ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಸಾಮಾನ್ಯ ವರ್ಗದ ಬದುಕಿಗೆ ಸಂಕಷ್ಟ: ಸುನಿಲ್ ಕುಮಾರ್ ಖಂಡನೆ

Date:

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿದ್ದನ್ನು ಕೂಡಲೇ ಹಿಂಪಡೆದು ಸಾಮಾನ್ಯ ವರ್ಗದ ಜನರ ರಕ್ಷಣಗೆ ನಿಲ್ಲುವಂತೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಮುಖಂಡ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಹಲವಾರು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮವಾಗಿದೆ ಇತ್ತೀಚಿಗೆ ನಡೆದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸಿದ್ದಾರೆ ಈ ಬೆಲೆ ಏರಿಕೆಯಿಂದ ದಿನನಿತ್ಯದ ವಸ್ತುಗಳ ಮೇಲೆಯೂ ಏರಿಕೆಯಾಗಿದೆ ಎಲ್.ಪಿ.ಜಿ ಗ್ಯಾಸ್ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ ಈ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ಭೀಮ ಕೋರೆಗಾಂವ್ ಚಿತ್ರ ಬಿಡುಗಡೆ ಮಾಡಿದ ಎಂಎಲ್‌ಸಿ ಅನಿಲ್‌ ಕುಮಾರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಮೆರಿಕಾ ಮತ್ತು ಇಸ್ರೇಲ್‌ ದೇಶಗಳ ಸಂಘರ್ಷದ ದಾಳಿಗಳ ಪರಿಣಾಮವಾಗಿ ಈ ಬೆಲೆ ಏರಿಕೆಯಾಗಿದೆ ನಾಗರಿಕರ ಹಿತರಕ್ಷಣೆಗಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳ ಬೇಕಾದ ಕೇಂದ್ರ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ ಇದರಿಂದಾಗಿ ಭಾರತದಲ್ಲಿನ ಜನಸಾಮಾನ್ಯರ ಬದುಕಿನ ಮೇಲೆ ಹೆಚ್ಚುವರಿ ಹೊರೆ ಹಾಕಲಾಗುತ್ತಿದೆ. ಜನ ಹಿತಕ್ಕಿಂತ ಚುನಾವಣಾ ರಾಜಕೀಯವೇ ಬಿಜೆಪಿ ಪಕ್ಷಕ್ಕೆ ಮುಖ್ಯವಾಗಿದೆ ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿಸುವ ಬದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಗಳನ್ನು ಕಡಿತಗೊಳಿಸಬೇಕಿತ್ತು. ಇಂಧನ ದರ ಏರಿಕೆಯ ಸಂಪೂರ್ಣ ಹೊರೆ ಜನರ ಮೇಲೆ ಹಾಕಬಾರದು ಎಂದು ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...