ಕೋಲಾರ |ರಾಜಕೀಯ ಪಕ್ಷಗಳ ಏಜೆಂಟರಿಗೆ ಅಟ್ರಾಸಿಟಿ ಸಮಿತಿಯಲ್ಲಿ ಸ್ಥಾನ

Date:

ಜಿಲ್ಲಾ ದೌರ್ಜನ್ಯ ತಡೆ (ಅಟ್ರಾಸಿಟಿ) ಸಮಿತಿಗೆ ದಲಿತ ಸಂಘಟನೆಗಳನ್ನು ನಿರ್ಲಕ್ಷ್ಯ ಮಾಡಿ ಯಾವುದೇ ಅರ್ಜಿ ಆಹ್ವಾನಿಸದೆ ಪ್ರಚಾರವಿಲ್ಲದೆ ಸಮಿತಿಯನ್ನು ರಚನೆ ಮಾಡಿದ್ದು ಕೂಡಲೇ ಸಮಿತಿಯನ್ನು ರದ್ದು ಮಾಡಿ ಹೊಸ ಸಮಿತಿ ರಚನೆ ಮಾಡಬೇಕು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸನ್ ಅವರನ್ನು ಮಾತೃ ಇಲಾಖೆಯಾದ ತೋಟಗಾರಿಕೆ ಇಲಾಖೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ನಗರದ ಸಮಾಜ ಕಲ್ಯಾಣ ಇಲಾಖೆಯ ಕಛೇರಿ ಮುಂದೆ ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ದಮನಿತರ ಸೇವಾ ಸಮಿತಿ ರಾಜ್ಯ ಅಧ್ಯಕ್ಷ ಮೇಡಿಹಾಳ ಮುನಿಅಂಜಿನಪ್ಪ ಮಾತನಾಡಿ ಜಿಲ್ಲಾ ಮಟ್ಟದಲ್ಲಿ ದಲಿತರ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಯಲು ಇದ್ದ ಅಟ್ರಾಸಿಟಿ ಸಮಿತಿಯಲ್ಲಿ ದಲಿತ ಸಂಘಟನೆಗಳ ಮುಖಂಡರನ್ನು ನಿರ್ಲಕ್ಷ್ಯ ಮಾಡಲಾಗಿದೆ ಸಮಿತಿ ರಚನೆಯ ಪೂರ್ವಭಾವಿಯಾಗಿ ಪತ್ರಿಕಾ ಹೇಳಿಕೆಯಾಗಲಿ , ಅರ್ಜಿಗಳ ಅಹ್ವಾನವಾಗಲಿ ಯಾವುದನ್ನು ನಿಯಮಾನುಸಾರ ನಡೆಸದೆ ಏಕಪಕ್ಷೀಯ ತೀರ್ಮಾನದಂತೆ ಸಮಿತಿಗೆ ನೇಮಕ ಮಾಡಲಾಗದೆ ಎಸ್ಸಿ, ಎಸ್ಟಿ ಮಹಿಳೆಯರು, ಬೋವಿ ಸೇರಿದಂತೆ ಎಲ್ಲಾ ಸಮುದಾಯಕ್ಕೂ ಅವಕಾಶ ನೋಡಬೇಕಾಗಿತ್ತು ಅದನ್ನು ಧಿಕ್ಕರಿಸಿದ್ದಾರೆ ಕೂಡಲೇ ಸಮಿತಿಯನ್ನು ರದ್ದು ಮಾಡಿ ಹೊಸದಾಗಿ ಸಮಿತಿ ನೇಮಕ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕೆಡಿಪಿ ಸಭೆ ಸೇರಿದಂತೆ ಪ್ರತಿಯೊಂದು ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ಸಂದರ್ಭದಲ್ಲಿ ದಲಿತ ಸೇನೆ ರಾಜ್ಯ ಅಧ್ಯಕ್ಷ ದಲಿತ್ ನಾರಾಯಣಸ್ವಾಮಿ ಮಾತನಾಡಿ ದಲಿತರು ಹೆಚ್ಚು ಜನಸಂಖ್ಯೆ ಇರುವ ಕೋಲಾರ ಜಿಲ್ಲೆಯಲ್ಲಿ ದಲಿತರ ಕುಂದುಕೊರತೆಗಳ ಚರ್ಚೆಯ ಸಮಿತಿಗೆ ನಿರ್ಲಕ್ಷ್ಯ ತೋರಿದ್ದ್ದು ದಲಿತ ಸಂಘಟನೆಗಳಿಗೆ ಸಮಾಜ ಕಲ್ಯಾಣ ಇಲಾಖೆ ಮಾಡಿದ ಅವಮಾನವಾಗಿದೆ ಕನಿಷ್ಠ ದಲಿತರ ಸಮಸ್ಯೆಗಳು ಅರಿತವರು ಆಗಲಿ ಸಂಘಟನೆಗಳಿಂದ ಬಂದವರಾಗಲಿ ಕನಿ ಜ್ಞಾನವಿಲ್ಲದವರನ್ನು ನೇಮಕ ಮಾಡಲಾಗಿದೆ ಸಮಿತಿಯನ್ನು ರದ್ದು ಮಾಡಬೇಕು ಇದು ಈಗೇ ಮುಂದುವರೆದರೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಕೂಡಲೇ ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ತಪ್ಪನ್ನು ತಿದ್ದಿಕೊಂಡು ಹೊಸದಾಗಿ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.

ಗಾಂಧಿನಗರ ರಾಜಕುಮಾರ್ ಮಾತನಾಡಿ ಅಟ್ರಾಸಿಟಿ ಸಮಿತಿ ರಚನೆಯಲ್ಲಿ ದಲಿತ ಸಂಘಟನೆಗಳಿಗೆ ದ್ರೋಹ ಬಗೆದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಕನಿಷ್ಠ ಮಾತು ಬರದ, ವಿಚಾರ ಗೊತ್ತಿಲ್ಲದವರನ್ನು ಆಯ್ಕೆ ಮಾಡಿ ಸಮಿತಿಯ ಉದ್ದೇಶವನ್ನು ಹಾಳು ಮಾಡಲಾಗಿದೆ ಕೂಡಲೇ ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳ ಮುಖಂಡರ ಸಭೆ ಮಾಡಿ ಚರ್ಚೆ ನಡೆಸಿ ಹೊಸದಾಗಿ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿ | ಎಸ್. ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಾಜ್ಯಕ್ಕೆ 4ನೇ ಟಾಪರ್ ಆದ ಬಾಗೇಪಲ್ಲಿ ಯಶಸ್ವಿನಿ

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಂಯುಕ್ತ ರಂಗದ ಅಧ್ಯಕ್ಷ ಡಿಪಿಎಸ್ ಮುನಿರಾಜು, ಮುಖಂಡರಾದ ಮತ್ತಿಕುಂಟೆ ಕೃಷ್ಣಪ್ಪ, ಪಿವಿಸಿ ಕೃಷ್ಣಪ್ಪ, ಸಂಗಸಂದ್ರ ವಿಜಯಕುಮಾರ್, ಮಂಜುಳಾ, ಚೇತನ್ ಬಾಬು, ಯುವರಾಜ್, ಮೋಚಿಪಾಳ್ಯ ನಾಗೇಶ್, ಮಂಜುನಾಥ್, ಹರಳಕುಂಟೆ ರಾಜ್, ಆನಂದ್, ಶ್ರೀರಾಮಪುರ ರವಿ, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...