ಕೋಲಾರ | ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

Date:

Advertisements

ಉತ್ತಮ ರೀತಿಯಲ್ಲಿ ಬಾಳಿಕೆ ಬರುವಂತೆ ಹಾಗೂ ಕ್ರೀಡಾಪಟುಗಳಿಗೆ ಉಪಯುಕ್ತವಾದ ರೀತಿಯಲ್ಲಿ ಕ್ರೀಡಾಂಗಣವನ್ನು ಮಾಡಿಕೊಡಬೇಕು. ಗುತ್ತಿಗೆದಾರ ಗುಣಮಟ್ಟದ ಕಾಮಗಾರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಪಕ್ಕದಲ್ಲಿ ಶುಕ್ರವಾರ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ವಲಯದ ₹45 ಲಕ್ಷ ಅನುದಾನದಲ್ಲಿ ಸಿಂಥೆಟಿಕ್ ಬಾಲ್ ಅಂಕಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

“ಕಾಮಗಾರಿ ನಡೆಯುವಾಗ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳು ಗಮನ ಹರಿಸಬೇಕು, ಕಳಪೆ ಕಾಮಗಾರಿ ಕಂಡುಬಂದರೆ ತಡೆದು ಉತ್ತಮ ರೀತಿಯಲ್ಲಿ ನಡೆಸುವಂತೆ ಸೂಚಿಸಬೇಕು. ಹಣ ಬಿಡುಗಡೆ ಮಾಡಿದ್ದೇವೆ, ಕೆಲಸವೂ ಪ್ರಾರಂಭವಾಗಿದೆ. ನಿಮಗೆ ಬೇಕಾಗುವ ರೀತಿಯಲ್ಲಿ ಕೆಲಸ ಮಾಡಿಸಿಕೊಳ್ಳಿ” ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.

“ಸರ್ಕಾರವು ಅನುದಾನ ಬಿಡುಗಡೆ ಮಾಡುತ್ತದೆ. ಗುತ್ತಿಗೆದಾರರು ಕಾಲಮೀತಿಯಲ್ಲಿ ಕಾಮಗಾರಿಯನ್ನು ಮುಗಿಸಿಕೊಡಬೇಕು. ಯಾವುದೇ ದೂರುಗಳು ಬರಬಾರದು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ, ಸಾಮೂಹಿಕ ಸ್ವಚ್ಛತಾ ಕಾರ್ಯ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವೇಮಗಲ್ ನರಸಾಪುರ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ನಗರಸಭೆ ಸದಸ್ಯ ಅಂಬರೀಷ್, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ಕುಮಾರ್, ಚಿನ್ನಾಪುರ ನಾರಾಯಣಸ್ವಾಮಿ, ಕ್ರೀಡಾಪಟುಗಳಾದ ಅಂಚೆ ಅಶ್ವಥ್ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X