ಕೋಲಾರ | ಜಮೀರ್ ನಸೀರ್ ಗೆ ಉನ್ನತ ರಾಜಕೀಯ ಸ್ಥಾನಮಾನಕ್ಕೆ ಒತ್ತಾಯಿಸಿ ಮುಸ್ಲಿಂರಿಂದ ಪ್ರತಿಭಟನೆ

Date:

ಮುಂಬರುವ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಬಿ.ಜೆಡ್ ಜಮೀರ್ ಅಹಮದ್ ಖಾನ್ ಮತ್ತು ನಸೀರ್ ಅಹಮದ್ ಅವರಿಗೆ ಉನ್ನತ ಮಟ್ಟದ ರಾಜಕೀಯ ಸ್ಥಾನಮಾನವನ್ನು ನೀಡುವಂತೆ ಒತ್ತಾಯಿಸಿ ಶುಕ್ರವಾರ ಮುಸ್ಲಿಂ ಸಮಾಜದ ಮುಖಂಡರು ನಗರದ ಬಂಬುಬಜಾರ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನಿರ್ದೇಶಕ ಸಚೀನ್ ಜಾವೀದ್ ಮಾತನಾಡಿ ಅಲ್ಪಸಂಖ್ಯಾತ ಸಮುದಾಯದ ಹಿರಿಯ ನಾಯಕ ಬಿ.ಜೆಡ್ ಜಮೀರ್ ಅಹಮದ್ ಅವರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು, ಇಡೀ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಇವರ ಹಿಂದೆ ಇದೆ, ಕಾಂಗ್ರೆಸ್ ಪಕ್ಷದ ಪರವಾಗಿ ತೆಲಂಗಾಣ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ಬರಲು ಕಾರಣವಾಗಿದ್ದಾರೆ 2023ರ ಕರ್ನಾಟಕ ರಾಜ್ಯದ ಚುನಾವಣೆಯಲ್ಲಿ ಎಲ್ಲಾ ಮುಸ್ಲಿಮರು ಒಂದುಗೂಡಿಸಿ ಕಾಂಗ್ರೆಸ್ ಪರವಾಗಿ ಮತ ಸೆಳೆಯಲು ಯಶಸ್ವಿಯಾದರು ಕಳೆದ ತಿಂಗಳು ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ನೇರ ಕಾರಣವಾಗಿದ್ದು ಅವರಿಗೆ ಉನ್ನತಮಟ್ಟದ ಸ್ಥಾನಕ್ಕೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು ಪ್ರಾಮಾಣಿಕವಾಗಿ ಮತ ಚಲಾವಣೆ ಮಾಡಿದ್ದಾರೆ ಅದರಲ್ಲೂ ಜಮೀರ್ ಅಹಮದ್ ಖಾನ್ ಮತ್ತು ನಸೀರ್ ಅಹಮದ್ ಅವರ ಪ್ರಮಾಣಿಕತೆಗೆ ಕಾಂಗ್ರೆಸ್ ಪಕ್ಷವು ಸೂಕ್ತವಾದ ಸ್ಥಾನಮಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಮಾದಕ ವಸ್ತುಗಳ ಪಿಡುಗನ್ನು ನಿಲ್ಲಿಸಿ ಯುವಕರನ್ನು ರಕ್ಷಸಿ, ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕೋಲಾರ ಯುವಕರಿಂದ ಒತ್ತಾಯ.

ಪ್ರತಿಭಟನೆಯ ನೇತೃತ್ವವನ್ನು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಮುಲ್ ನಿರ್ದೇಶಕ ಷಂಷೀರ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಫೈರೋಜ್ ಖಾನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೈಯದ್ ಆಫ್ರೀದ್, ಮುಖಂಡರಾದ ಸೈಫ್, ರಫೀ, ಪಾಷ, ಫಾರೂಕ್, ಸೈಯದ್, ಮೊಹಮ್ಮದ್ ನೂರ್, ಬಾಬರ್, ಸುಹೈಬ್, ಹಿದಾಯತ್ , ಯಾಸೀನ್, ಸುಹೈಲ್ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...