ಕೋಲಾರ | ಸಕಾಲದಲ್ಲಿ ಪಿಂಚಣಿ ವಿತರಣೆ, ಬಲವಂತ ಭೂ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

Date:

ವಿಧವೆಯರಿಗೆ ಮಾಸಾಶನ ಮತ್ತು ವೃದ್ದಾಪ್ಯ ಪಿಂಚಣಿಯನ್ನು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಹಾಗೂ ರಾಜ್ಯದಲ್ಲಿ ಕೈಗಾರಿಕೆಗಾಗಿ ರೈತರ ಜಮೀನುಗಳನ್ನು ಬಲವಂತವಾಗಿ ಭೂ ಸ್ವಾದೀನ ಪಡಿಸಿಕೊಂಡ ಭೂ ಸಂತ್ರಸ್ಥ ಕುಟುಂಬಗಳಿಗೆ ಅದ ಮೋಸವನ್ನು ಸರಿಪಡಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಪ್ರಾಂತ ರೈತ ಸಂಘ(ಕೆ.ಪಿ.ಆರ್.ಎಸ್) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್ ಶ್ರೀರಾಮ್ ಮಾತನಾಡಿ ರಾಜ್ಯದ ಅರ್ಹ ಕಡುಬಡವರಿಗೆ ನೀಡುತ್ತಿರುವ ಮಾಸಾಶನ ಮತ್ತು ವೃದ್ದಾಪ್ಯ ಪಿಂಚಣಿಯು ಕಳೆದ ಮೂರು ತಿಂಗಳುಗಳಿಂದ ಬಿಡುಗಡೆಯಾಗಿಲ್ಲ ಅವರ ಆರೋಗ್ಯಕ್ಕಾಗಿ ಔಷಧಿಗಳು, ದಿನನಿತ್ಯದ ವೆಚ್ಚಗಳಿಗಾಗಿ ಹಣ ಇಲ್ಲದೇ ಕಡು ಬಡವರು ಹಲವು ಸಂಕಷ್ಠದಲ್ಲಿ ಜೀವನ ನಡೆಸುವಂತಾಗಿದೆ ಪ್ರತಿ ತಿಂಗಳು ನಿಗದಿತ ದಿನದಂತೆ ತಪ್ಪದೇ ಹಣವನ್ನು ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಮಾಸಾಶನ ಪಿಂಚಣಿ 800, ವೃದ್ದಾಪ್ಯ ಪಿಂಚಣಿ ಕೆಲವರಿಗೆ 1000, ಮತ್ತೆ ಕೆಲವರಿಗೆ 1200 ರೂ. ಬರುತ್ತಿದ್ದು, ಆಂದ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಎಲ್ಲ ನಿರ್ಗತಿಕ ಪಿಂಚಣಿಯನ್ನು 3000 ರೂ.ಗಳಿಗೆ ಹೆಚ್ಚಿಸಲಾಗಿದೆ. ನಮ್ಮ ರಾಜ್ಯದಲ್ಲಿಯೂ ಇದೇ ರೀತಿ ಎಲ್ಲಾ ನಿರ್ಗತಿಕರ ಪಿಂಚಣಿಯನ್ನು 3000 ರೂ.ಗಳಿಗೆ ಹೆಚ್ಚಿಸಬೇಕು ಪ್ರತಿ ತಿಂಗಳು ನಿಗದಿತ ದಿನ ಬರುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು

ಸಿಐಟಿಯು ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ ಬಳ್ಳಾರಿ ಜಿಲ್ಲೆಯ ಕುಡಿತೆನಿ ಪ್ರದೇಶದ 7 ಗ್ರಾಮಗಳ ಸುಮಾರು 5,000 ರೈತ ಕುಟುಂಬಗಳ 12,887 ಎಕರೆ ಜಮೀನುಗಳನ್ನು ಕೈಗಾರಿಕೆಗಳಿಗಾಗಿ, ಕಂಪನಿ ಮಾಲೀಕರೊಂದಿಗೆ ಶಾಮೀಲಾಗಿ, ಭೂ ಬೆಲೆ ನಿಗದಿಯಲ್ಲಿ ಅನುಸರಿಸಬೇಕಾದ ಮಾನದಂಡಗಳನ್ನು ಧಿಕ್ಕರಿಸಿ, ಮೋಸದ ಭೂ ಬೆಲೆ ನಿಗದಿಸಿ, ಬಲವಂತವಾಗಿ ಸ್ವಾಧೀನ ಪಡಿಸಿಕೊಂಡಿದ್ದಾರೆ ಅದೇ ಮಾದರಿಯಲ್ಲಿ ಬೆಂಗಳೂರಿಗೆ ಹತ್ತಿರದಲ್ಲಿರುವ ಬಿಡದಿಯಲ್ಲಿ ಟೌನ್ ಶಿಫ್ ಹೆಸರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು,

ಮೋಸದ ಭೂ ಬೆಲೆಯೊಂದಿಗೆ, ಬಲವಂತವಾಗಿ ಭೂ ಸ್ವಾಧೀನ ಮಾಡಿಕೊಂಡು ಸುಮಾರು 16 ವರ್ಷಗಳಾದರೂ ಯಾವುದೇ ಕೈಗಾರಿಕೆಗಳು ಸ್ಥಾಪಿಸದೆ ಭೂ ಸಂತ್ರಸ್ಥ ಕುಟುಂಬಗಳಿಗೆ ಉದ್ಯೋಗ ನೀಡದೆ, ಪ್ರತಿ ಕುಟುಂಬಕ್ಕೆ ಲಕ್ಷಾಂತರ ರೂಗಳ ಉದ್ಯೋಗ ನಷ್ಟ ಉಂಟು ಮಾಡಿದ್ದಾರೆ ರೈತರು ಮತ್ತು ಸರ್ಕಾರದ ಬೊಕ್ಕಸಕ್ಕೆ ಉಂಟು ಮಾಡಲಾದ ಈ ಪ್ರಕರಣಗಳ ತನಿಖೆಗಾಗಿ ಮತ್ತು ರೈತರಿಗೆ ಮಾಡಲಾದ ಮೋಸ ಮತ್ತು ಅನ್ಯಾಯವನ್ನು ಸರಿ ಪಡಿಸುವಂತೆ ಹಾಗೂ ತಕ್ಷಣವೇ ಅಲ್ಲಿನ ಭೂ ಸಂತ್ರಸ್ಥರ ಜೊತೆ ಚರ್ಚಿಸಿ ನ್ಯಾಯ ಒದಗಿಸಲು ಸರ್ಕಾರವನ್ನು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ದಲಿತ ಚಳುವಳಿಯ ಹೆಜ್ಜೆ ಗುರುತುಗಳೇ ಯುವಕರಿಗೆ ಸ್ಪೂರ್ತಿಯಾಗಬೇಕು: ಎಂಎಲ್ಸಿ ಅನಿಲ್ ಕುಮಾರ್

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್, ಉಪಾಧ್ಯಕ್ಷರಾದ ಗಂಗಮ್ಮ, ವೆಂಕಟಮ್ಮ, ಸಹ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಡಿ.ರಂಗನಾಥ್, ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಮುಖಂಡರಾದ ಆಶಾ. ಚಿನ್ನಮ್ಮ, ಕೇಶವರಾವ್, ಮುನಿರತ್ನಮ್ಮ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...