ಕೋಲಾರ | ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

Date:

ಕೋಲಾರ: ರಾಜ್ಯಸರ್ಕಾರವು ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸದೆ ವಿಳಂಭ ದೋರಣೆಯನ್ನು ತೋರುತ್ತಿರುವುದನ್ನು ಖಂಡಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಬೃಹತ್ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಾದ ಎಂ.ಆರ್.ರವಿ ಅವರಿಗೆ ಮನವಿ ಸಲ್ಲಿಸಿದರು.

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರಪ್ಪ ಮಾತನಾಡಿ, ಸರ್ಕಾರಿ ಇಲಾಖೆಗಳಲ್ಲಿ ಸುಮಾರು ೨.೮೪ ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಉಳಿದಿವೆ. ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸುವುದಾಗಿ ಸರ್ಕಾರ ಹುಸಿ ಭರವಸೆಗಳನ್ನು ನೀಡುತ್ತಾ ಬರುತ್ತಿದೆ. ಪ್ರಸ್ತುತ ವರ್ಷದಲ್ಲಿ ೫೬,೪೩೨ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ ಇದೂ ಸಹ ಕೇವಲ ಭರವಸೆಗೆ ಸೀಮಿತವಾಗಿಯೇ ಉಳಿದಿದೆ ಎಂದು ಆಪಾಧಿಸಿದರು.

ಸರ್ಕಾರಿ ಉದ್ಯೋಗವನ್ನು ಪಡೆಯಬೇಕೆಂಬ ಉದ್ದೇಶದಿಂದ ಸಾಕಷ್ಟು ಅಭ್ಯರ್ಥಿಗಳು ತಮ್ಮ ಮನೆ ಬಿಟ್ಟು ಕುಳಿತು ಸಿದ್ದತೆ
ನಡೆಸುತ್ತಿದ್ದಾರೆ. ಆದರೆ ವರ್ಷಗಳು ಕಳೆದರೂ ಸಹ ಸರ್ಕಾರ ಯಾವುದೇ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿಲ್ಲ.
ಇದರಿಂದ ಅಭ್ಯರ್ಥಿಗಳಿಗೆ ಮುಂದಿನ ಜೀವನದ ದಾರಿಯೇ ತಿಳಿಯದಂತಹ ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಈ ಅಸಡ್ಡೆಯ
ಧೋರಣೆಯು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ದ ಉಗ್ರ ಹೋರಾಟವನ್ನು ನಡೆಸಲಾಗುತ್ತದೆ
ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿರುವ ಹುದ್ದೆಗಳಿಗೆ ಈ ಕೂಡಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಬೇಕು. ಕೆಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲವಾಗಿರುವುದಿಂದ ವಯೋಮಿತಿಯನ್ನು ಹೆಚ್ಚಿಸಬೇಕು. ಕೆ.ಪಿ.ಎಸ್.ಸಿ ನಡೆಸಿದ ಕೆ.ಎ.ಎಸ್, ಸಿ.ಟಿ.ಐ, ಪಿಡಿಓ ಇತ್ಯಾದಿ ಪರೀಕ್ಷೆಗಳಲ್ಲಿ ಅಕ್ರಮಗಳು ಕಂಡುಬAದಿದ್ದು ಇವುಗಳ ಬಗ್ಗೆ ತನಿಖೆ ಮಾಡಲು ಸಿ.ಬಿ.ಐಗೆ ಒಪ್ಪಿಸಬೇಕು. ಜಿಲ್ಲಾ ಗ್ರಂಥಾಲಯದಲ್ಲಿ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಎನ್.ಕೆ.ನಾಗೇಶ್ ಮಾತನಾಡಿ ಕೋಲಾರ ಜಿಲ್ಲೆಯ ಸ್ಪರ್ಧಾರ್ಥಿಗಳಿಗೆ ಅಧ್ಯಯನ ಮಾಡಲು ಜಿಲ್ಲಾ ಗ್ರಂಥಾಲಯದಲ್ಲಿ ಸ್ಥಳಾವಕಾಶದ ಕೊರತೆ ಇದೆ. ಇದರಿಂದ ಅಭ್ಯರ್ಥಿಗಳು ಅಧ್ಯಯನ ಮಾಡಲು ಸಮಸ್ಯೆಯಾಗುತ್ತಿದೆ. ಗ್ರಂಥಾಲಯದ ಹೊರಗಿನ ಮರಗಳ ಕೆಳಗೆ ಕುಳಿತು ಅಧ್ಯಯನ ಮಾಡುವ ಸ್ಥಿತಿ ಬಂದೊದಗಿದೆ. ಹಾಗಾಗಿ ಸರ್ಕಾರವು ಈ ಕೂಡಲೇ ಜಿಲ್ಲೆಗೆ ೫೦೦ ಆಸನಗಳ ಸಾಮರ್ಥ್ಯದ ಹೊಸ ಗ್ರಂಥಾಲಯವನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ

- Advertisement -

ಈ ಸಂದರ್ಭದಲ್ಲಿ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ. ಪ್ರಮೋದ್
ಕುಮಾರ್, ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಖೇಶ್, ಅಭ್ಯರ್ಥಿಗಳಾದ ಜಿ. ಅಂಬರೀಶ್, ಕೆ.ಎಂ. ವೆಂಕಟೇಶ್, ಜಿತೇಂದ್ರ, ಸಂತೋಷ್, ಪ್ರವೀಣ್,ದೇವರಾಜ್, ಬ್ಯಾಟರಾಯ, ದರ್ಶನ್, ಗಂಗರಾಜು, ನರೇಶ್, ಶಾಂತಪ್ಪ, ಎಸ್.
ಮುಕ್ತಾನಂದ, ಎಂ.ಸಿ. ಪ್ರಸನ್ನ, ಕಿರಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...