ಕೋಲಾರ | ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

Date:

Advertisements

ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ1964ರ ಕಾನೂನು ರೂಪಿಸಬೇಕು ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ 12 ರೂ ಪರಿಷ್ಕರಿಸಲು ಅಗತ್ಯ ಕ್ರಮ ವಹಿಸಲು ಒತ್ತಾಯಿಸಿ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘವು ಪ್ರತಿಭಟನೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ, “ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ. ಹೋರಾಟ ನಡೆಸಿದ್ದೇವೆ. ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ. ಕೂಡಲೇ ರಾಜ್ಯ ಸರ್ಕಾರವು ಕುಕ್ಕಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು. ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು 3 ಕೋಟಿ ಮಂದಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗಿದೆ. ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸವನ್ನು ಆಳುವ ಸರ್ಕಾರಗಳು ಮಾಡಬೇಕಾಗಿದೆ” ಎಂದು ಮನವಿ ಮಾಡಿದರು.

“ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಹಿಡಿದು ಹಿಂದೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಕುಮಾರಸ್ವಾಮಿ ಸರ್ಕಾರದವರೆಗೂ ಹಲವು ಬಾರಿ ಮನವಿ ಮಾಡಿದರೂ ಕಾನೂನು ರೂಪಿಸಿಲ್ಲ. ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆ, ಕೋಳಿ ಸಾಕಾಣಿಕೆದಾರರು ಮತ್ತು ಕಂಪನಿಗಳ ನೇತೃತ್ವದಲ್ಲಿ ಸಭೆ ನಡೆದರು ಮರಿ ಸರಬರಾಜು, ಕನಿಷ್ಠ ಸಾಕಾಣಿಕೆ ದರ, ಪಾವತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ಕೋಳಿ ಸಾಕಾಣಿಕೆದಾರರ ಪರವಾಗಿ ಸಿದ್ದಪಡಿಸಿರುವ ಕರಡನ್ನು ರಾಜ್ಯ ಸರ್ಕಾರವು ಇವತ್ತಿನ ಅಧಿವೇಶನದಲ್ಲಿ ಮಂಡಿಸಬೇಕು ರೈತರ ಜೀವನೋಪಾಯವನ್ನು ರಕ್ಷಿಸಬೇಕು. ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ದ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಂತರ ಉಪ ತಹಶಿಲ್ದಾರ್ ಅವರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕೋಳಿ ಸಾಕಾಣಿಕೆದಾರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ ನಾರಾಯಣರೆಡ್ಡಿ ಕೋಳಿ ಸಂಘದ ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X