ಕೋಲಾರ | ಇಂಧನದ ಬೆಲೆ ಏರಿಕೆ ವಿರುದ್ದ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

Date:

ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿ ಮುಂದೆ ಸೇರಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಡುಗೆ ಅನಿಲದ ಸಿಲಿಂಡರ್ ಸಮೇತ ಮೋದಿ ವಿರೋಧಿ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮೆಕ್ಕೆ ವೃತ್ತದವರಗೂ ಕಾಲ್ನಡಿಗೆ ಜಾಥಾ ಮೂಲಕ ಆಗಮಿಸಿ ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪ್ರತಿಭಟನೆಯನ್ನು ಉದ್ದೇಶಿಸಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಒಳ್ಳೆಯ ದಿನಗಳು ಬರಲಿವೆ ಎಂದು ದೇಶದ ಜನರಿಗೆ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅದರಂತೆ ನಡೆದುಕೊಂಡಿಲ್ಲ ನಿರಂತರವಾಗಿ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡುವ ಮೂಲಕ ಅಗತ್ಯ ದಿನಬಳಕೆಯ ವಸ್ತುಗಳ ಬೆಲೆಗಳನ್ನು ಏರಿಕೆಗೆ ಕಾರಣವಾಗಿದ್ದಾರೆ ಅಡುಗೆ ಅನಿಲಕ್ಕೆ ಪ್ರಾರಂಭದಲ್ಲಿ ಸಬ್ಸಿಡಿ ಕೊಡುತ್ತೇವೆ ಎಂದು ಹೇಳಿ ಇವತ್ತು ಸಬ್ಸಿಡಿಯನ್ನು ಸಹ ತೆಗೆದಿದ್ದಾರೆ. ಜನರಿಗೆ ಇದರಿಂದ ಹೊರೆಯಾಗಿದೆ ಇದು ಸಾಂಕೇತಿಕವಾದ ಹೋರಾಟ ಇಂಧನಗಳ ಬೆಲೆ ಇಳಿಸದಿದ್ದರೆ ಜಿಲ್ಲಾ ಕೇಂದ್ರದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಉಗ್ರವಾದ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ದೇಶದಲ್ಲಿ ಯುಪಿಎ ನೇತೃತ್ವದ ಸರ್ಕಾರವಿದ್ದ ಸಂದರ್ಭದಲ್ಲಿ ಅಡುಗೆ ಅನಿಲವು ಕೇವಲ 400 ರಿಂದ 450 ರೂ ಮಾತ್ರ ಇತ್ತು ಅದೇ ಮೋದಿ ಸರ್ಕಾರವು ಬಂದ ನಂತರ ಅದನ್ನು 1000 ರೂಪಾಯಿಗೆ ತಂದು ನಿಲ್ಲಿಸಿದ್ದಾರೆ ಡಿಸೇಲ್ 60 ರೂ ಇತ್ತು ಇವತ್ತು 100 ರೂಗೆ ಹೋಗಿದೆ ಪೆಟ್ರೊಲ್ 75 ರಿಂದ 110 ಮಾಡಿದ್ದೇ ಮೋದಿ ಸರ್ಕಾರದ ಸಾಧನೆಯಾಗಿದೆ ಅಷ್ಟೇ ಅಲ್ಲದೇ ನೋಟು ಅಮಾನ್ಯೀಕರಣ, ನರೇಗಾದ ಮೂಲ ಉದ್ದೇಶ ರದ್ದು, ಮಹಿಳಾ ಮೀಸಲಾತಿಗೆ ಯುಪಿಎ ಸರ್ಕಾರದಲ್ಲಿ ಜಾರಿ ಮಾಡಿದ್ದನ್ನು ಮೋದಿ ಸರ್ಕಾರವು ಅನುಷ್ಠಾನಕ್ಕೆ ತಂದಿಲ್ಲ ದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗೆ ಇಳಿಸುವ ತನಕ ಕಾಂಗ್ರೆಸ್ ಪಕ್ಷವು ನಿರಂತರವಾಗಿ ಹೋರಾಟ ಮುಂದುವರೆಯಲಿದೆ ಎಂದರು.

ಇವತ್ತು ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ, ಬೆಲೆ ಏರಿಕೆ ನಿಯಂತ್ರಣ ಮಾಡಲು ಅಸಮರ್ಥರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆ ರದ್ದಾಗಿರುವುದು ಕೇಂದ್ರ ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ. ಸರ್ಕಾರದ ನಿರ್ಧಾರದಿಂದಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀಟ್ ಅಕ್ರಮ ತಡೆಗಟ್ಟಲು ಸಾಧ್ಯವಾಗಿಲ್ಲ ವಿದ್ಯಾರ್ಥಿಗಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..? ಕೋಲಾರದಲ್ಲಿ ಕುಡಿಯುವ ನೀರು, ಮೇವಿನ ಸಮಸ್ಯೆಗೆ ತಕ್ಷಣ ಕ್ರಮ ವಹಿಸಿ: ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷರಾದ ಊರಬಾಗಲು ಶ್ರೀನಿವಾಸ್, ಮ್ಯಾಕಲ ನಾರಾಯಣಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಕೋಮುಲ್ ನಿರ್ದೇಶಕರಾದ ಚಂಜಿಮಲೆ ರಮೇಶ್, ಕೆ.ಕೆ ಮಂಜುನಾಥ್, ಷಂಷೀರ್ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೀಸಂದ್ರ ಗೋಪಾಲಗೌಡ, ಸೈಯದ್ ಆಫ್ಸರ್, ಲಿಂಗಾಪುರ ಕಿಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್, ಮಹಿಳಾ ಘಟಕದ ಅಧ್ಯಕ್ಷೆ ಹೇಮಾಮಾಲಿನಿ, ಮುಖಂಡರಾದ ಖಯ್ಯಾಮ್, ಹನೀಫ್, ಒಬಿಸಿ ಮಂಜುನಾಥ್, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಗಂಗಣ್ಣ, ಫೈರೋಜ್ ಖಾನ್, ಲಕ್ಷ್ಮೀಸಾಗರ ಸುನಿಲ್ ಕುಮಾರ್, ಕುರಿಗಳ ರಮೇಶ್, ಮುದವತ್ತಿ ಕೃಷ್ಣಪ್ಪ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...