ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, “ದೇಶದಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿ, ರಾಜ್ಯದಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದ್ದರು. ಹತ್ತು ಹಲವು ಯೋಜನೆಗಳ ಮೂಲಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದರು. ಸರ್ವರಿಗೂ ಸಮಪಾಲು, ಸಮಬಾಳು ಕಲ್ಪನೆಯನ್ನು ಜಾರಿಗೆ ತಂದವರು ದೇವರಾಜ ಅರಸು. ಶಿಕ್ಷಣ, ರಾಜಕೀಯದಲ್ಲಿ ಮೀಸಲಾತಿ ತಂದ ರಾಜೀವ್ ಗಾಂಧಿ ಕೂಡ ಧೀಮಂತ ನಾಯಕರು” ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ, “ಕೆಲವರು ಭಾಷಣದಲ್ಲಿ ಹೇಳಿದಂತೆ ನಡೆದುಕೊಳ್ಳಲ್ಲ ಸಾಮಾಜಿಕ ನ್ಯಾಯ ಎತ್ತಿಹಿಡಿಯುತ್ತಿಲ್ಲ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರೋದು ಕಾಂಗ್ರೆಸ್‌ನವರು ಮಾತ್ರ” ಎಂದರು.
ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ, ವಕ್ತಾರ ಎಲ್.ಎ ಮಂಜುನಾಥ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಅಧ್ಯಕ್ಷ ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್, ಮೀನುಗಾರಿಕೆ ವಿಭಾಗದ ಅಧ್ಯಕ್ಷ ರಂಗನಾಥ್, ತಾಪಂ ಮಾಜಿ ಅಧ್ಯಕ್ಷ ಸಿ.ಆರ್ ಯುವರಾಜ್, ಒಬಿಸಿ ಮಂಜುನಾಥ್, ಲಾಲ್ ಬಹಾದ್ದೂರ್ ಶಾಸ್ತ್ರೀ, ತಮ್ಮಣ್ಣ, ಹರೀಶ್ ಮುಂತಾದವರು ಇದ್ದರು,
https://shorturl.fm/q20zb