ಕೋಲಾರ | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 30 ವರ್ಷ ಜೈಲು

Date:

ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗೆ ಕೋಲಾರ ಸೆಷನ್ಸ್ ನ್ಯಾಯಾಲಯ 30 ವರ್ಷ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.

ಕಳೆದ ವರ್ಷ 2022ರ ಅಕ್ಟೋಬರ್ 9ರಂದು ಮುಳಬಾಗಿಲು ತಾಲೂಕಿನ ಗ್ರಾಮವೊಂದರಲ್ಲಿ ಎಂಟು ವರ್ಷದ ಬಾಲಕಿಯನ್ನು ಪುಸಲಾಯಿಸಿ ಚಾಕೊಲೇಟ್‌ ಕೊಡುವ ನೆಪದಲ್ಲಿ ಮುರುಗೇಶ್ (32) ಎಂಬಾತ ತನ್ನ ಮನೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಭಿಯೋಜಕಿ ಡಿ. ಲಲಿತ ಕುಮಾರಿ ಸಂತ್ರಸ್ತೆ ಪರವಾಗಿ ವಾದ ಮಂಡಿಸಿದ್ದರು. ಇದೀಗ ಆರೋಪಿಗೆ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಸಂತ್ರಸ್ಥ ಬಾಲಕಿಗೆ ₹5 ಲಕ್ಷ ಪರಿಹಾರ ಘೋಷಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಯುವತಿಯೊಂದಿಗೆ ಅಸಭ್ಯ ವರ್ತನೆ, ಲಾರಿ ವಿಚಾರಕ್ಕೆ ಗಲಾಟೆ: ಮಧ್ಯಸ್ಥಿಕನ ಹತ್ಯೆ; 17 ಮಂದಿ ಬಂಧನ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...