ಕೋಲಾರ | 106 ಅಕ್ರಮ ವೈದ್ಯಕೀಯ ಕ್ಲಿನಿಕ್‌ಗಳು ಪತ್ತೆ; ಕೂಡಲೇ ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶ

Date:

Advertisements

ಅನಧಿಕೃತವಾಗಿ ಸ್ಥಾಪಿಸಿರುವ ವೈದ್ಯಕೀಯ ಕ್ಲಿನಿಕ್‌ಗಳು ಮತ್ತು ಅನಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಪಿಎಂಇ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕೋಲಾರ ಜಿಲ್ಲೆಯಲ್ಲಿ 106 ಅಕ್ರಮ ವೈದ್ಯಕೀಯ ಕ್ಲಿನಿಕ್‌ಗಳನ್ನು ಗುರುತಿಸಲಾಗಿದ್ದು, ಮುಂದಿನ 15 ದಿನಗಳೊಳಗೆ ಅನಧಿಕೃತ ಕ್ಲಿನಿಕ್‌ಗಳನ್ನು ತೆರವುಗೊಳಿಸಬೇಕು” ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್ ಅವರಿಗೆ ತಿಳಿಸಿದರು.

Advertisements

“ತಾಲೂಕು ಆರೋಗ್ಯಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ಅಕ್ರಮ ಕ್ಲಿನಿಕ್‌ಗಳು, ಅನಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳ ಬಗ್ಗೆ ವಿವರವಾದ ಮಾಹಿತಿಯನ್ನು ಕಾಲಕಾಲಕ್ಕೆ ಜಿಲ್ಲಾ ಆರೋಗ್ಯಾಧಿಕಾರಿಗೆ ನೀಡಬೇಕು” ಎಂದು ತಿಳಿಸಿದರು.

“ಡಿಎಚ್‌ಒ ಅವರು ವಿಳಂಬ ನೀತಿಯನ್ನು ಅನುಸರಿಸದೇ ಸೀಜರ್‌ಗಳೊಂದಿಗೆ ಕ್ಷಿಪ್ರ ಗತಿಯಲ್ಲಿ ರೈಡ್‌ ನಡೆಸಿ ಅನಧಿಕೃತ ಸಂಸ್ಥೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಿಗೆ ಪೂರಕ ದಾಖಲೆಗಳ ಸಾಕ್ಷಿಯನ್ನು ಹುಡುಕದೇ ವಿಡಿಯೋ ಚಿತ್ರೀಕರಣದಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಪೂರಕ ಸಾಕ್ಷಾಧಾರಗಳನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಲ್ಲಿ ಅನಧಿಕೃತ ಸಂಸ್ಥೆಗಳನ್ನು ಮುಚ್ಚುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಯಾವುದೇ ಮುಲಾಜಿಗೆ ಒಳಪಡದೇ ತಮ್ಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬೇಕು” ಎಂದು ಸಲಹೆ ನೀಡಿದರು.

“ಅನಧಿಕೃತ ಕ್ಲಿನಿಕ್‌ಗಳು ಕಂಡು ಬಂದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮೊದಲು ವೈದ್ಯರ ಮತ್ತು ವೈದ್ಯಕೀಯ ಸಂಸ್ಥೆಯ ಅಥವಾ ವೈದ್ಯಕೀಯ ಉಪಕರಣಗಳ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ನೋಟೀಸ್ ನೀಡಬೇಕು. ನಿಗಧಿತ ಅವಧಿಯೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸದಿರುವವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶಿಫಾರಸು ಮಾಡಬೇಕು. ಈ ಮೂಲಕ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ಮಾತ್ರ ಲಭ್ಯವಾಗುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನೌಕರಿ ಕೊಡಿಸುವ ನೆಪದಲ್ಲಿ ವಂಚನೆ; ಜಾಗೃತಿ ವಹಿಸಲು ಎಸ್‌ಪಿ ಸೂಚನೆ

“ಕೆಪಿಎಂಇ ಕಾಯ್ದೆಯಡಿ ಜಿಲ್ಲಾ ಸಕ್ಷಮ ಪ್ರಾಧಿಕಾರದ ಎದುರು ಅನಧಿಕೃತ ಸಂಸ್ಥೆಗಳ ಮುಖ್ಯಸ್ಥರು ಹಾಜರಾಗಿ ಸೂಕ್ತ ದಾಖಲೆಗಳನ್ನು ಸಲ್ಲಿಸಿ ತಮ್ಮ ಕ್ಲಿನಿಕ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರವು ಅವಕಾಶ ಕಲ್ಪಿಸಿದ್ದಾಗ್ಯೂ ಹಲವು ಸಂಸ್ಥೆಗಳು ಈವರೆಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ನಕಲಿ ಕ್ಲಿನಿಕ್‌ಗಳು ಹಾಗೂ ನಕಲಿ ವೈದ್ಯರ ಹಿಡಿತದಿಂದ ಜಿಲ್ಲೆಯನ್ನು ಆದಷ್ಟು ಬೇಗ ಮುಕ್ತಗೊಳಿಸುವುದರ ಜೊತೆಗೆ ಸಾರ್ವಜನಿಕರ ಜೀವಗಳ ಸಂರಕ್ಷಣೆಗಾಗಿ ಜಿಲ್ಲಾಡಳಿತ ಸದಾ ಬದ್ಧವಾಗಿರುತ್ತದೆ” ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಐಎಂಎ ಅಧ್ಯಕ್ಷ ಡಾ. ನಾರಾಯಣಸ್ವಾಮಿ, ಡಾ. ವಿಜಯಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ನಾರಾಯಣಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಸನ್ನ ಕುಮಾರ್ ಸೇರಿದಂತೆ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X