ಕೋಲಾರ | ಪುಂಡಾಟಿಕೆ ಮುಂದುವರಿಸಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ಸಚಿವ ಶಿವರಾಜ ಎಸ್‌ ತಂಗಡಗಿ

Date:

ಬೆಳಗಾವಿ ಗಡಿಭಾಗದಲ್ಲಿ ಹೀಗೆಯೇ ಮರಾಠಿಗರ ಪುಂಡಾಟಿಕೆ ಮುಂದುವರೆಸಿದರೆ ಮುಂದಿನ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್‌ ತಂಗಡಗಿ ಎಚ್ಚರಿಕೆ ನೀಡಿದರು.

- Advertisement -

ಕೋಲಾರ ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವ ಉದ್ಘಾಟನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಬೆಳಗಾವಿ ನಮ್ಮ ರಾಜ್ಯದ ಪ್ರಮುಖ ಅಂಗ. ಅಲ್ಲೇ ಸುವರ್ಣಸೌಧ ನಿರ್ಮಿಸಿದ್ದೇವೆ. ಬೆಳಗಾವಿಯಲ್ಲಿ ಪುಂಡರ ಹಾವಳಿ ತಪ್ಪಿಸಲು ಮುಖ್ಯಮಂತ್ರಿ ಹಾಗೂ ಜಿಲ್ಲಾಡಳಿತದೊಂದಿಗೆ ಮಾತನಾಡಿದ್ದೇವೆ. ಕಾನೂನು ಸುವ್ಯವಸ್ತೆಗೆ ಧಕ್ಕೆ ಉಂಟುಮಾಡುವ ಪುಂಡರನ್ನು ಸುಮ್ಮನೇ ಬಿಡುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖ್ಯಮಂತ್ರಿ ಸ್ಥಾನ ಇರುವುದೇ ದಾಖಲೆ ಮುರಿಯಲು ಎಂದಿರುವ ಡಾ. ಎಚ್‌ ಸಿ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, “ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು ದಾಖಲೆ ಮುರಿಯಲು ಅಲ್ಲ. ರಾಜ್ಯದ ಅಭಿವೃದ್ಧಿಗಾಗಿ ಅವರು ಶ್ರಮಿಸುತ್ತಿದ್ದಾರೆ” ಎಂದು ಹೇಳಿದರು.

ಕೋಲಾರದಲ್ಲಿ ಸಚಿವ ಶಿವರಾಜ್‌ ಎಸ್‌ ತಂಗಡಗಿ

“ಎಸ್‌ಸಿಪಿ, ಟಿಎಸ್‌ಪಿ ಯೋಜನೆ ತಂದಿದ್ದು ಯಾರು ಎಂಬ ಪ್ರಶ್ನೆಯನ್ನು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಬಳಿ ಕೇಳಿ. ಅವರಿಗೆ ತಾಕತ್ತು ಇದ್ದರೆ, ಪರಿಶಿಷ್ಟರ ಬಗ್ಗೆ ಕಾಳಜಿ ಇದ್ದರೆ, ದೇಶಾದ್ಯಂತ ಏಕೆ ಜಾರಿ ಮಾಡಬಾರದು? ಪ್ರಧಾನಿ ಮೋದಿ ಅವರಿಗೆ ಹೋಗಿ ಹೇಳಲಿ. ಬಜೆಟ್‌ನಲ್ಲಿ ಶೇ.24.1ರಷ್ಟು ಅನುದಾನ ಮೀಸಲಿಡಲಿ ನೋಡೋಣ” ಎಂದು ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಶಿವಸೇನೆ, ಎಂಇಎಸ್, ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡಿಗರ ಮೌನ ಪ್ರತಿಭಟನೆ

“ಈ ತಾಕತ್ತು ಬಿಜೆಪಿಯವರಿಗೆ ಎಲ್ಲಿದೆ? ಹಿಂದೆ ಪರಿಶಿಷ್ಟರಿಗೆ ಕೇವಲ ₹3,000 ಕೋಟಿ ಅನುದಾನ ತೆಗೆದಿರಿಸುತ್ತಿದ್ದರು. ನಮ್ಮ ಸರ್ಕಾರ ಈಗ ₹35,000 ಕೋಟಿ ಅನುದಾನ ನಿಗದಿಪಡಿಸಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...