ಕೋಲಾರ | ಮಾವಿನಕಾಯಿಗೆ ಬೆಲೆ ನಿಗದಿಗೆ ಶ್ರೀನಿವಾಸಪುರ ಭೈರವೇಶ್ವರ ಮಾವು ಬೆಳಗಾರರಿಂದ ಡಿಸಿಗೆ ಮನವಿ

Date:

ಮಾವಿನಕಾಯಿಗೆ ಬೆಲೆ ನಿಗದಿ ಪಡಿಸುವಂತೆ ಶ್ರೀನಿವಾಸಪುರ ಶ್ರೀ ಭೈರವೇಶ್ವರ ಮಾವು ಬೆಳೆಗಾರರ ಸಂಘವು ಶುಕ್ರವಾರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

- Advertisement -

ಸಂಘದ ಅಧ್ಯಕ್ಷ ಬಿ.ಸೀತಾರಾಮರೆಡ್ಡಿ ಮಾತನಾಡಿ ಶ್ರೀನಿವಾಸಪುರ ಕ್ಷೇತ್ರ ಸೇರಿದಂತೆ ಕೋಲಾರ ಜಿಲ್ಲೆಯು ಕರ್ನಾಟಕ ರಾಜ್ಯದಲ್ಲೇ ಅತಿ ಹೆಚ್ಚು ಮಾವಿನ ಬೆಳೆಯನ್ನು ಬೆಳೆಯುತ್ತಿದ್ದು, ಬೆಳೆದಂತಹ ಮಾವಿನಕಾಯಿಗೆ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಒಂದು ಟನ್ ಮಾವಿನಕಾಯಿ ಬೆಳೆಯಲು 8 ರಿಂದ 10 ಸಾವಿರ ರೂ ಖರ್ಚು ಬರುತ್ತದೆ. ಆದರೆ ಪ್ರಸ್ತುತ ಒಂದು ಟನ್‌ಗೆ ನಾಲ್ಕುರಿಂದ ಐದು ಸಾವಿರ ರೂಗಳು ಕಾರ್ಖಾನೆಗಳು ನಿಗದಿ ಮಾಡಿದ್ದಾರೆ, ಮಾವಿನಕಾಯಿಯನ್ನು ಕೊಯ್ದು ಮಾರಲು ನಾಲ್ಕರಿಂದ ಐದು ಸಾವಿರ ರೂಗಳು ಖರ್ಚು ಬರುತ್ತದೆ, ಎಷ್ಟೋ ಜನ ರೈತರು ತೋಟಗಳಲ್ಲಿ ಮಾವಿನ ಕಾಯಿಗಳನ್ನು ಕೀಳದೇ ಬಿಟ್ಟಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಜಿಲ್ಲಾಡಳಿತ ವತಿಯಿಂದ ಒಂದು ಟನ್‌ ಮಾವಿನ ಕಾಯಿಗೆ ಕನಿಷ್ಠ 10 ಸಾವಿರ ರೂ ನಿಗದಿ ಮಾಡಲು ಸರ್ಕಾರಕ್ಕೆ ಮನವಿ ಮಾಡಬೇಕು ಹಿಂದಿನ ವರ್ಷ ಈ ರೀತಿ ಸಮಸ್ಯೆಯಾದಾಗ ಪಿಡಿಪಿಎಸ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ಘೋಷಣೆ ಮಾಡಿದ್ದು ಅದೇ ರೀತಿ ಈ ವರ್ಷವೂ ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ಬೆಂಬಲ ಬೆಲೆಯನ್ನು ಘೋಷಣೆ ಮಾಡುವಂತೆ ಒತ್ತಾಯ ಮಾಡಿದರು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿ | ಚಿತ್ರಾವತಿಗೆ ಕೊಳಚೆ ನೀರು ಹರಿಸುವ ಕಾಮಗಾರಿ ಸಂಪೂರ್ಣ ಸ್ಥಗಿತ

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ, ಖಜಾಂಚಿ ಎಂ.ಬೈರೇಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಹೆಚ್ ಸಂಪತ್ ಕುಮಾರ್, ಪ್ರಸನ್ನ ಕುಮಾರ್, ವಿ.ಚೌಡರೆಡ್ಡಿ, ಜಯರಾಮರೆಡ್ಡಿ, ದೊಡ್ಡನಂಜಪ್ಪ, ಕೆ.ಟಿ ಜಯಣ್ಣ, ಮುಂತಾದವರು ಇದ್ದರು,

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...