ಕೋಲಾರ | ರಾಜ್ಯ ಸರ್ಕಾರ ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು; ದಸಂಸ ಆಗ್ರಹ

Date:

ರಾಜ್ಯ ಸರ್ಕಾರವು ಎಸ್‌ಸಿಎಸ್‌ಪಿ, ಟಿಎಸ್‌ಪಿ-2013ರ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ ಸಂಘಟನೆಯಿಂದ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದರು.

- Advertisement -

ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಮಾತನಾಡಿ, “ರಾಜ್ಯ ಸರಕಾರ ಕಲಂ 7ಸಿ ರದ್ದು ಪಡಿಸಿ, ವಿವಿಧ ಇಲಾಖೆಗಳ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಸಮುದಾಯದ ಅನುದಾನ ಬಳಕೆಗೆ ಅವಕಾಶ ನೀಡುತ್ತಿರುವುದನ್ನು ತತ್‌ಕ್ಷಣ ತಡೆಯಬೇಕು. ಎಸ್‌ಸಿಎಸ್‌ಪಿ, ಟಿಎಸ್‌ಪಿ-2013 ರ ಕಾಯ್ದೆಯಡಿ ಸಮುದಾಯದ ಜನರು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಅವಕಾಶಗಳನ್ನು ಶಾಸನಬದ್ದವಾಗಿ ಹೊಂದಲು ರಾಜ್ಯ ಸರ್ಕಾರಗಳು ಕಾಯ್ದೆ ರೂಪಿಸಿವೆ. ಈ ಕಾಯ್ದೆಯ ಕಲಂ 73 ಮತ್ತು 7ಸಿ ರಲ್ಲಿ ಕಾಯ್ದೆಯಡಿ ನಿಗದಿಪಡಿಸಿದ ಅನುದಾನವನ್ನು ಆನ್ಯ ಉದ್ದೇಶಗಳಿಗೆ ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಸರ್ಕಾರಗಳು ವಂಚಿಸುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದಸಂಸದ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಮಾತನಾಡಿ, “ಅನ್ಯ ಯೋಜನೆಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಉಪಯೋಗಿಸುವಂತೆ ಅವಕಾಶ ನೀಡುವ ಮೂಲಕ ಪರಿಶಿಷ್ಟರಿಗೆ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಅವಕಾಶವನ್ನು ಸರ್ಕಾರಗಳೇ ನೇರವಾಗಿ ಕಸಿಯುತ್ತಿವೆ. ಅಸ್ಪೃಶ್ಯ ಆಚರಣೆಯನ್ನೂ ಮಾಡಿ ಮತ್ತೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಈ ನಯ ವಂಚಕತನ ಬಿಟ್ಟು ಪರಿಶಿಷ್ಟರ ಹಣವನ್ನು ಪರಿಶಿಷ್ಟರಿಗೆ ಮೀಸಲಿಡಬೇಕೆಂದು” ಒತ್ತಾಯಿಸಿದರು.

ಇದನ್ನೂ ಓದಿ: ಕೋಲಾರ | ವ್ಯಸನಮುಕ್ತ ಸಮಾಜಕ್ಕೆ ಎಲ್ಲರೂ ಕೈ ಜೋಡಿಸಿ: ಜಿಲ್ಲಾಧಿಕಾರಿ ಎಂ ಆರ್ ರವಿ

ಸಂಘಟನೆಯ ತಾಲೂಕು ಸಂಚಾಲಕ ಎಸ್. ಎಂ. ವೆಂಕಟೇಶ್ ಮಾತನಾಡಿ, “ಕಳೆದ 2023ರ ಚುನಾವಣೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ದಲಿತ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಒಳ ಮೀಸಲಾತಿ ಹೋರಾಟಗಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಕಾರಣ ಸರ್ಕಾರ ರಚನೆಯಾಗಿರುವುದನ್ನು ಕಾಂಗ್ರೆಸ್‌ ನಾಯಕರು ಮರೆಯಬಾರದು” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ದಸಂಸ ಮುಖಂಡ ಚವ್ವೆನಹಳ್ಳಿ ವಿಜಿ, ಮದನಳ್ಳಿ ವೆಂಕಟೇಶ್, ಮುನಿಚೌಡಪ್ಪ, ಸಂಪತ್ ಕುಮಾರ್, ಗೋವಿಂದರಾಜು, ಗನ್ ವೆಂಕಟರಮಣಪ್ಪ, ಮುದುವತ್ತಿ ಕೇಶವ, ಕೋಸಂದ್ರ ರೆಡ್ಡಪ್ಪ, ದೇಶಿಹಳ್ಳಿ ಶ್ರೀನಿವಾಸ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...