ಕೋಲಾರ | ಕಲ್ಲು ಕ್ವಾರಿ ಸ್ಫೋಟ; ಓರ್ವ ಕಾರ್ಮಿಕ ಸಾವು

Date:

ಕಲ್ಲು ಕ್ವಾರಿ ಸ್ಫೋಟಗೊಂಡ ಪರಿಣಾಮ ಬಂಡೆಕಲ್ಲು ಬಿದ್ದು 28 ವರ್ಷದ ಕ್ವಾರಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ಕೆಬಿ ಹೊಸಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿವೆ.

- Advertisement -

ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಸೋಮು ಜಾಧವ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ತಮಿಳುನಾಡಿನ ಗೋಪಿ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕ್ವಾರಿಯಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಸ್ಫೋಟ ಸಂಭವಿಸಿದೆ. ಬಂಡೆಯೊಂದು ತಗುಲಿ ಸೋಮು ಜಾಧವ್ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಹೊಸಕೋಟೆಯ ಎಂಇಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.

“ಕ್ವಾರಿ ಮಾಲೀಕರು ಹಲವಾರು ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ, ಅವರು ಸಾಕ್ಷ್ಯ ನಾಶಪಡಿಸುವ ಪ್ರಯತ್ನವನ್ನೂ ಮಾಡಿದ್ದಾರೆ. ಸಂತ್ರಸ್ತರಿಗೆ ಪರಿಹಾರ ಸಿಗುವಂತೆ ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ತಿಳಿಸಿದ್ದಾರೆ.

ವೇಮಗಲ್ ಪೊಲೀಸರು ಕ್ವಾರಿ ಮಾಲೀಕ ಜಯರಾಮರೆಡ್ಡಿ, ನಿರ್ವಾಹಕ ಅಬ್ದುಲ್ ರೆಹಮಾನ್ ಅಲಿಯಾಸ್ ಮುಜೀಬ್, ಕೃಷ್ಣಮೂರ್ತಿ, ದೇವರಾಜ್ ಮತ್ತು ಸ್ಫೋಟಕ ಸರಬರಾಜುದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಬ್ದುಲ್ ರೆಹಮಾನ್ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...