ಕೋಲಾರ | ಕೋಳಿ ಸಾಕಾಣಿಕೆ ಕೆಜಿಗೆ 10 ರೂ ಜೊತೆಗೆ ಸ್ವಾಮಿನಾಥನ್ ವರದಿಯಂತೆ ದರ ನಿಗದಿಗೆ ಸುಗಟೂರು ಶ್ರೀಧರ್ ಒತ್ತಾಯ

Date:

ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ಸಾಕಾಣಿಕ ವೆಚ್ಚವಾಗಿ 10 ರೂಪಾಯಿ ನಿಗದಿ ಮಾಡಿರುವ ರಾಜ್ಯ ಸರ್ಕಾರದ ಆದೇಶವು ಸ್ವಾಗತವೇ ಆದರೆ ಮುಂದೆ ಸ್ವಾಮಿನಾಥನ್ ಆಯೋಗದ ಪ್ರಕಾರ ಸಾಕಾಣಿಕೆ ವೆಚ್ಚ 20 ರೂ ಹೆಚ್ಚಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಗಟೂರು ಶ್ರೀಧರ್ ರೆಡ್ಡಿ ತಿಳಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಳಿ ಸಾಕಾಣಿಕೆ ಒಂದು ಉದ್ಯಮವಾಗಿ ಇವತ್ತು ನೂರಾರು ಜನರ ಕಸುಬು ಆಗಿದೆ ಸಂಘದ ಮುಖಂಡರು ಕೇಂದ್ರ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಗಿದೆ ಕುಮಾರಸ್ವಾಮಿಯವರು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ಮಾನದಂಡಗಳನ್ನು ಪರಿಗಣಿಸಬೇಕೆಂದು ಮಾಹಿತಿ ನೀಡಿದ್ದಾರೆ ಅದರಂತೆ ಸಾಕಾಣಿಕೆ ವೆಚ್ಚ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಎಂಟು ತಿಂಗಳಿಂದ ಕೋಳಿ ಸಾಕಾಣಿಕೆ ದರವಾಗಿ ಕೆಜಿಗೆ ಕನಿಷ್ಠ 20 ರೂ ನಿಗದಿ ಮಾಡುವಂತೆ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹೋರಾಟ ಮಾಡುತ್ತಿದ್ದು ಮಧ್ಯಂತರ ದರವಾಗಿ 10 ರೂ ನಿಗದಿ ಪಡಿಸಲು ಆಯುಕ್ತರಿಗೆ ರಾಜ್ಯ ಸರ್ಕಾರ ಆದೇಶಿಸಿದ್ದಾರೆ ಆದರೆ ಅದು ಸಾಲದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಕೆ ವೆಂಕಟೇಶ್, ಪಶುಸಂಗೋಪನಾ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ, ಪಶು ಭವನದ ಆಯುಕ್ತರಿಗೆ ಕುಕ್ಕಟ ಮಹಾಮಂಡಳಿ ಅಧ್ಯಕ್ಷರಿಗೆ ಆಡಳಿತಾಧಿಕಾರಿ ಕೋಳಿ ಸಾಕಾಣಿಕ ರೈತರ ಪ್ರಮುಖ ಸಮಸ್ಯೆಯಾದ ಕಂಪನಿಗಳಿಂದ ಸಾಕಾಣಿಕ ವೆಚ್ಚವನ್ನು ಕನಿಷ್ಠ ಸಾಕಾಣಿಕ ವೆಚ್ಚ 20 ರೂಪಾಯಿಗೆ ನಿಗದಿ ಮಾಡಲು ಮನವಿಯನ್ನು ಸಲ್ಲಿಸಲಾಗಿದೆ ಹಲವಾರು ಹಂತದ ಪ್ರತಿಭಟನೆಗಳನ್ನು ನಡೆಸಿ ಒತ್ತಾಯಿಸಲಾಗಿತ್ತು ಇದರ ಜೊತೆಗೆ ಕಡಿಮೆ ಬಡ್ಡಿ ದರದಲ್ಲಿ ಕೋಳಿ ಸಾಕಾಣಿಕ ರೈತರಿಗೆ ಸಾಲ ಸೌಲಭ್ಯ ಕೋಳಿ ಸಾಕಾಣಿಕೆ ರೈತರಿಗೆ ಸಹಾಯಧನ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್ ಶ್ರೀರಾಮ್ ಮಾತನಾಡಿ ಕೋಳಿ ಸಾಕಾಣಿಕೆ ಕೃಷಿ ಎಂದು ಪರಿಗಣಿಸಬೇಕು ಈಗಾಗಲೇ ಶಾಸಕರು ಪರಿಷತ್ ಸದಸ್ಯರು ಅಧಿವೇಶನದಲ್ಲಿ ಚರ್ಚಿಸಲು ಮನವಿ ನೀಡಲಾಗಿತ್ತು ಕೆಜಿಎಫ್ ಶಾಸಕಿ ರೂಪ ಶಶಿಧರ್ ಸದನದಲ್ಲಿ ಚರ್ಚೆ ಮಾಡಿದ್ದಾರೆ ಮುಂದೆ ಕೂಡ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಮೂರು ವರ್ಷಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಒಟ್ಟು ₹ 3,834 ಕೋಟಿ‌ ಅನುದಾನ: ಶಾಸಕ ಕೊತ್ತೂರು ಮಂಜುನಾಥ್ – ಈ ದಿನ.ಕಾಮ್

ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಪ್ರಕಾಶ್ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಂ ವೆಂಕಟರಾಮರೆಡ್ಡಿ, ಕೋಲಾರ ತಾಲೂಕು ಅಧ್ಯಕ್ಷ ಎಸ್.ಆರ್ ವೆಂಕಟೇಶ್, ಕಾರ್ಯದರ್ಶಿ ವೆಂಕಟೇಶ್, ಪದಾಧಿಕಾರಿಗಳಾದ ರಾಜಾರೆಡ್ಡಿ, ವೇಣುಗೋಪಾಲ್, ರಮೇಶ್, ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ...