ಕೋಲಾರ | ಶಿಕ್ಷಕಿ ವರ್ಗಾವಣೆ: ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

Date:

ಶಾಲೆಯ ಶಿಕ್ಷಕಿಯನ್ನು ಬೇರೊಂದು ಶಾಲೆಗೆ ನಿಯೋಜನೆ ಮಾಡಿದ್ದನ್ನು ವಿರೋಧಿಸಿ ಗ್ರಾಮಸ್ಥರು ಸರ್ಕಾರಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿರುವ ಕುಂದರಸನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಿದೆ. ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ ತರಗತಿಗಳು ನಡೆಯುತ್ತವೆ. ಶಾಲೆಯಲ್ಲಿ ಒಟ್ಟು 32 ಮಂದಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಆದರೆ, ಈ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆಯೇ ಅಲ್ಲಿನ ಖಾಯಂ ಶಿಕ್ಷಕಿಯನ್ನು ನಿಯೋಜನೆ ಮಾಡಲಾಗಿದೆ. ಇದು ಗ್ರಾಮಸ್ಥರನ್ನು ಕೆರಳಿಸಿದೆ.

ಶಾಲೆಯ ಖಾಯಂ ಶಿಕ್ಷಕಿ ಶಾಂತಮ್ಮ ಅವರನ್ನು ಶಿಕ್ಷಣ ಇಲಾಖೆ ನಿಯೋಜನೆ ಮಾಡಿದೆ. ಶಾಲೆಗೆ ಅಥಿತಿ ಶಿಕ್ಷಕರನ್ನು ನಿಯೋಜಿಸಿದೆ. ತಮ್ಮೂರಿನ ಶಾಲೆಗೆ ಅಥಿತಿ ಶಿಕ್ಷಕರು ಬೇಡ, ಪಾಠ ಮಾಡುವುದರಲ್ಲಿ ಅನುಭವಿದ್ದ ಶಾಂತಮ್ಮ ಅವರನ್ನೇ ಮರಳಿ ನಿಯೋಜನೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಿಕ್ಷಕಿಯ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಸ್ ಸುಕನ್ಯಾ, “ಶೈಕ್ಷಣಿಕ ವರ್ಷ ಆರಂಭವಾದ ಸಮಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಆಧಾರದ ಮೇಲೆ ಶಿಕ್ಷಕರನ್ನು ನಿಯೋಜನೆ ಮಾಡುವುದು ಸಹಜ ಪ್ರಕ್ರಿಯೆ. ಶಿಕ್ಷಕಿ ಶಾಂತಮ್ಮ ಅವರು ನಲಿ-ಕಲಿ ತರಬೇತಿ ಪಡೆದಿದ್ದಾರೆ. ಹೀಗಾಗಿ, ಅವರನ್ನು ದೋಣಿಮಡಗು ಶಾಲೆಗೆ ನಿಯೋಜಿಸಲಾಗಿತ್ತು. ಆದರೆ, ಕುಂದರಸನಹಳ್ಳಿ ಗ್ರಾಮಸ್ಥರು ಶಿಕ್ಷಕಿ ಶಾಂತಮ್ಮ ಅವರೇ ತಮ್ಮೂರಿನ ಶಾಲೆಗೆ ನಿಯೋಜಿಸಬೇಕು ಎಂದು ಹಠಕ್ಕೆ ಬಿದ್ದಿದ್ದರಿಂದ, ಅವರನ್ನು ಮತ್ತೆ ಕುಂದರಸನಹಳ್ಳಿ ಶಾಲೆಗೆ ನಿಯೋಜಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಕಲಬುರಗಿ | ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿ ವಶ

ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28)...