ಕೋಲಾರ | ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ 3 ದಿನಗಳ ಬಳಿಕ ಶವವಾಗಿ ಪತ್ತೆ

Date:

ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಮೂರು ದಿನಗಳ ಹಿಂದೆ ಕಾಣೆಯಾಗಿದ್ದರು. ಇದೀಗ ಕೆಜಿಎಫ್‌ನ ಬೇತಮಂಗಲ ಹೋಬಳಿಯ ಅಯ್ಯಪಲ್ಲಿ ಅಮಾನಿ ಕೆರೆಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

- Advertisement -

ಪಟ್ಟಣದ ಬಳಿಯ ಟೀ ಕೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯಪಲ್ಲಿ ಅಮಾನಿಕೆರೆಯ‌ ದಡದಲ್ಲಿ ಶಿಕ್ಷಕಿಯ ಬ್ಯಾಗ್ ಪತ್ತೆಯಾಗಿದೆ. ಅಲ್ಲೇ ಬದಿಯ ಕೆರೆಯಲ್ಲಿ ಶವ ತೇಲುತ್ತಿದ್ದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಬೇತಮಂಗಲ ಪೊಲೀಸ್ ಠಾಣೆಯ ಪಿಎಸ್ಐ ಗುರುರಾಜ್ ಸಿಪಿಐ ರಂಗಶಾಮಯ್ಯ ನೇತೃತ್ವದಲ್ಲಿ ಅಗ್ನಿಶಾಮಕ ಮತ್ತು ಸ್ಥಳೀಯರ ನೆರವಿನೊಂದಿಗೆ ಶವವನ್ನು ತೆಗೆದು ಕೆಜಿಎಫ್ ನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2025 10 15 at 4.24.55 PM

ಅಖ್ತರ್ ಬೇಗಂ ಕಳೆದ 15 ದಿನಗಳಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಮಗನ ಬೈಕ್ ನಲ್ಲಿಯೇ ಬಸ್ ನಿಲ್ದಾಣದವರೆಗೆ ಡ್ರಾಪ್ ಪಡೆದುಕೊಂಡಿದ್ದಾರೆ. ಅಂದು ತಮ್ಮ ಮೊಬೈಲ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರಂತೆ.

ಇದನ್ನೂ ಓದಿ: ಕೋಲಾರ | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ನಿಖರ ಮಾಹಿತಿ ನೀಡಿ: ಇಒ ವೆಂಕಟೇಶಪ್ಪ

ಸೋಮವಾರ ರಾತ್ರಿಯಾದರೂ ಮನೆಗೆ ವಾಪಸ್ ಬರದೆ ಇದ್ದಾಗ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಸಮೀಕ್ಷೆ ಕಾರ್ಯದಲ್ಲಿ ಪ್ರಗತಿ ಸಾಧಿಸಿಲ್ಲದ್ದರಿಂದ ಖಿನ್ನತೆಗೆ ಒಳಗಾಗಿದ್ದರು. ಹಿರಿಯ ಅಧಿಕಾರಿಗಳ ಭಯವೂ ಇತ್ತು ಎನ್ನಲಾಗುತ್ತಿದೆ.

ಪೊಲೀಸರು ತನಿಖೆ ಕೈಗೊಂಡಿದ್ದು, ಸಾವಿಗೆ ನಿಜ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...